ರೈಲ್ವೆ ಕ್ರಾಸಿಂಗ್‌ನ ಗೇಟ್‌ಕೀಪರ್‌ಗೆ ತಮಿಳು ಗೊತ್ತಿಲ್ಲದ್ದು ಶಾಲಾ ವ್ಯಾನ್ ಅಪಘಾತಕ್ಕೆ ಕಾರಣವಾಗಿರಬಹುದು: ಡಿಎಂಕೆ ನಾಯಕ

Date:

ತಮಿಳುನಾಡಿನ ಕಡಲೂರಿನಲ್ಲಿ ಸಂಭವಿಸಿದ ಶಾಲಾ ವ್ಯಾನ್ ಅಪಘಾತಕ್ಕೆ ತಮಿಳು ಭಾಷೆ ಬರದಿರುವುದೇ ಕಾರಣವಾಗಿರಬಹುದು ಎಂದು ಡಿಎಂಕೆಯ ಹಿರಿಯ ನಾಯಕ ಟಿಕೆಎಸ್ ಎಳಂಗೋವನ್ ಮಂಗಳವಾರ ಆರೋಪಿಸಿದ್ದಾರೆ. “ರೈಲ್ವೆ ಕ್ರಾಸಿಂಗ್‌ನಲ್ಲಿದ್ದ ಗೇಟ್‌ಕೀಪರ್ ತಮಿಳು ಭಾಷಿಕರಲ್ಲ, ಸರಿಯಾಗಿ ಸಂವಹನ ನಡೆಯದ್ದು ಈ ದುರಂತಕ್ಕೆ ಕಾರಣವಾಗಿರಬಹುದು” ಎಂದು ಡಿಎಂಕೆ ನಾಯಕ ಅಭಿಪ್ರಾಯಿಸಿದರು.

- Advertisement -

ಕಡಲೂರು ಮತ್ತು ಅಲಪ್ಪಕ್ಕಂ ನಡುವಿನ ಇಂಟರ್‌ಲಾಕ್ ಇಲ್ಲದ ಲೆವೆಲ್ ಕ್ರಾಸಿಂಗ್‌ನ ಗೇಟ್ ಸಂಖ್ಯೆ 170ರಲ್ಲಿ ಬೆಳಿಗ್ಗೆ 7.45ರ ಸುಮಾರಿಗೆ ಐದು ವಿದ್ಯಾರ್ಥಿಗಳಿದ್ದ ಶಾಲಾ ವ್ಯಾನ್‌ ಅಪಘಾತಕ್ಕೀಡಾಗಿದೆ. ಚಾಲಕ ರೈಲು ಬರುವ ಕಾರಣ ಗೇಟ್ ಮುಚ್ಚಿದ್ದಾಗ ಹಳಿ ದಾಟಿ ವಾಹನ ಚಲಾಯಿಸಲು ಯತ್ನಿಸಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ತಮಿಳುನಾಡು | ಬಿಜೆಪಿ ನಾಯಕನ ಕೊಲೆ; ಡಿಎಂಕೆ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಈ ವೇಳೆ ವಿಲುಪುರಂ-ಮೈಲಾಡುತುರೈ ಪ್ಯಾಸೆಂಜರ್ ಸೇವೆಯ ರೈಲು ಸಂಖ್ಯೆ 56813, ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ನಿಮಿಲೇಶ್ (12), ಚಾರುಮತಿ (16) ಮತ್ತು ಚೆಝಿಯಾನ್ ಎಂದು ಗುರುತಿಸಲಾಗಿದೆ. ಉಳಿದವರು ಇನ್ನೂ ಕಡಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಘಟನೆಯ ನಂತರ ಪಂಕಜ್ ಶರ್ಮಾ ಎಂದು ಗುರುತಿಸಲಾದ ಗೇಟ್‌ಕೀಪರ್ ಅನ್ನು ಅಮಾನತುಗೊಳಿಸಲಾಗಿದ್ದು, ತನಿಖೆಯ ಭಾಗವಾಗಿ ಬಂಧಿಸಲಾಗಿದೆ. ಶರ್ಮಾ ಗೇಟ್ ಮುಚ್ಚುತ್ತಿರುವಾಗ ಹಳಿ ದಾಟಿ ವಾಹನ ಚಲಾಯಿಸದಂತೆ ಎಚ್ಚರಿಕೆ ನೀಡಿದ್ದರೂ ವ್ಯಾನ್ ಚಾಲಕ ವಾಹನ ಚಲಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ. ಆದರೆ ತಮಿಳು ಬಾರದಿರುವುದು ಕಾರಣವಾಗಿರಬಹುದು ಎಂದು ಡಿಎಂಕೆ ನಾಯಕ ಅಭಿಪ್ರಾಯಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದು ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಡಿಕ್ಕಿಗೆ ಕಾರಣ ಪತ್ತೆಗಾಗಿ ಸದ್ಯ ರೈಲ್ವೆ ಮತ್ತು ಸ್ಥಳೀಯ ಪೊಲೀಸರ ಜಂಟಿ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...