‘ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದು ಇಸ್ರೇಲ್ ಅಲ್ಲ’ ಎಂದ ಅಮೆರಿಕ ಅಧ್ಯಕ್ಷ ಜೋ ಬೈಡನ್

Date:

ಹಮಾಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷವು 12ನೇ ದಿನಕ್ಕೆ ತಲುಪಿರುವ ಮಧ್ಯೆಯೇ ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂದು ಇಸ್ರೇಲ್ ರಾಜಧಾನಿ ಟೆಲ್ ಅವೀವ್ ತಲುಪಿದ್ದಾರೆ.

- Advertisement -

ವಿಮಾನ ನಿಲ್ದಾಣ ತಲುಪಿದ ಬಳಿಕ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಭೇಟಿಯಾಗಿ ಅಪ್ಪಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಆ ಬಳಿಕ ಬೈಡನ್ ಟೆಲ್ ಅವೀವ್‌ನಲ್ಲಿ ಇಸ್ರೇಲ್ ಪ್ರಧಾನಿಯೊಂದಿಗೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಗಾಝಾದ ಆಸ್ಪತ್ರೆ ಮೇಲೆ ನಡೆದಿರುವ ದಾಳಿಯನ್ನು ಇಸ್ರೇಲ್ ನಡೆಸಿಲ್ಲ ಎನ್ನುವ ಮೂಲಕ ಇಸ್ರೇಲ್ ವಿರುದ್ಧದ ಆರೋಪವನ್ನು ತಳ್ಳಿ ಹಾಕಿದ್ದಾರೆ.

‘ಗಾಝಾದ ಆಸ್ಪತ್ರೆಯ ಮೇಲೆ ನಡೆದಿರುವ ದಾಳಿಯಿಂದ ತುಂಬಾ ದುಃಖಿತನಾಗಿದ್ದೇನೆ. ನಾನು ನೋಡಿದ್ದನ್ನು ಆಧರಿಸಿ ಹೇಳುವುದಾದರೆ ಇಸ್ರೇಲ್ ಆಸ್ಪತ್ರೆಯ ಮೇಲೆ ಬಾಂಬ್ ಹಾಕಿಲ್ಲ. ಅದನ್ನು ಮಾಡಿದ್ದು ಬೇರೆಯವರ ತಂಡ’ ಎನ್ನುವ ಮೂಲಕ ಇಸ್ರೇಲ್‌ಗೆ ಕ್ಲೀನ್‌ಚಿಟ್ ನೀಡಿದ್ದಾರೆ.

ಈ ಮೂಲಕ ಆಸ್ಪತ್ರೆ ಮೇಲಿನ ದಾಳಿಯ ಘಟನೆಗೆ ಹಮಾಸ್‌ ಅನ್ನು ನೇರವಾಗಿ ಉಲ್ಲೇಖಿಸದೆ ‘ಬೇರೆಯವರ ತಂಡ’ ಎಂದು ಹೇಳಿ, ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಮಾತನಾಡಿದ್ದು, ಈಗ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.

‘ತನ್ನನ್ನು ರಕ್ಷಿಸಿಕೊಳ್ಳಲು ಇಸ್ರೇಲ್‌ಗೆ ಬೇಕಾದ ಎಲ್ಲವನ್ನೂ ವಾಷಿಂಗ್ಟನ್ ನೀಡುತ್ತದೆ. ಅಕ್ಟೋಬರ್ 7ರಂದು ನಡೆದ ಹಠಾತ್ ದಾಳಿಯಲ್ಲಿ ಇಸ್ರೇಲಿ ನಾಗರಿಕರ ಹತ್ಯೆಯು ಹಮಾಸ್, ಐಸಿಸ್‌ಗಿಂತಲೂ ಕೆಟ್ಟದಾಗಿದೆ. ಹಮಾಸ್ ಪ್ಯಾಲೆಸ್ತೀನ್ ಜನರ ಶತ್ರುಗಳು. ಹಮಾಸ್ ವಿರುದ್ಧ ಅಮೆರಿಕ ಇಸ್ರೇಲ್ ಜತೆ ನಿಂತಿದೆ ಎಂದು ಇಲ್ಲಿ ಹೇಳಬಯಸುತ್ತೇನೆ’ ಎಂದು ಬೈಡನ್ ಹೇಳಿದರು.

ಈ ವೇಳೆ ಬೈಡನ್ ಬಲಬದಿಯಲ್ಲಿ ಕುಳಿತಿದ್ದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಲೆಯಲ್ಲಾಡಿಸುತ್ತಿದ್ದ ದೃಶ್ಯ ಕಂಡು ಬಂತು. ಅಮೆರಿಕ ಅಧ್ಯಕ್ಷರ ಹೇಳಿಕೆಯು, ಸ್ವಂತದ್ದಲ್ಲ. ಇಸ್ರೇಲ್ ಹೇಳಿದ್ದನ್ನಷ್ಟೇ ಹೇಳಿದ್ದಾರೆ. ಇಸ್ರೇಲ್ ನಡೆಸಿರುವ ಯುದ್ಧಾಪರಾಧವನ್ನು ಬಹಿರಂಗವಾಗಿ ಒಪ್ಪಿಕೊಳ್ಳಲು ಅಮೆರಿಕ ತಯಾರಿಲ್ಲ ಎಂದು ನೆಟ್ಟಿಗರು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಬೈಡನ್ ವಿರುದ್ಧ ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...