ಮಹಾ ಚುನಾವಣೆ | 5 ತಿಂಗಳಲ್ಲಿ 39 ಲಕ್ಷ ಮತದಾರರ ನೋಂದಣಿ; ಅಕ್ರಮ ನಡೆದಿದೆ ಎಂದ ರಾಹುಲ್‌ ಗಾಂಧಿ

Date:

ಕಳೆದ ವರ್ಷ ನಡೆದ ಮಹಾರಾಷ್ಟ್ರದ ಚುನಾವಣೆ ಹಲವು ಕಾರಣಗಳಿಂದ ಇಡೀ ದೇಶದ ಗಮನ ಸೆಳೆದಿತ್ತು. ವಿಧಾನಸಭಾ ಚುನಾವಣಾ ಫಲಿತಾಂಶ ಆಶ್ಚರ್ಯ ಉಂಟು ಮಾಡಿದ್ದರೆ, ಆಡಳಿತ ವಿರೋಧಿ ಅಲೆ ಇದ್ದಾಗಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಹಲವರಲ್ಲಿ ಗಂಭೀರ ಪ್ರಶ್ನೆ ಹುಟ್ಟುಹಾಕಿತ್ತು. ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್‌, ಶಿವಸೇನೆ ಮತ್ತು ಎನ್‌ಸಿಪಿ ಪಕ್ಷಗಳು ಆರೋಪಿಸುತ್ತಲೇ ಬಂದಿದ್ದವು. ಇದೀಗ, ಆ ಆರೋಪಕ್ಕೆ ದೊಡ್ಡ ತಿರುವು ಸಿಕ್ಕಿದ್ದು, ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಕೇವಲ ಐದು ತಿಂಗಳ ಅವಧಿಯಲ್ಲಿ 39 ಲಕ್ಷಕ್ಕೂ ಹೆಚ್ಚು ಮತದಾರರು ಹೊಸದಾಗಿ ಸೇರಿಕೊಂಡಿದ್ದಾರೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

- Advertisement -

ಶುಕ್ರವಾರ, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿಯ ಶರದ್‌ ಪವಾರ್‌ ಬಣ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಹುಲ್‌ಗಾಂಧಿಯವರು ಮಹಾರಾಷ್ಟ್ರ ಚುನಾವಣೆಯಲ್ಲಿ ನಡೆದ ಭಾರೀ ಅಕ್ರಮದ ಬಗ್ಗೆ ವಿವರಗಳನ್ನು ಬಿಚ್ಚಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

2019ರ ವಿಧಾನಸಭೆಯಿಂದ 2024ರಲ್ಲಿ ನಡೆದ ಲೋಕಸಭೆ ಚುನಾವಣೆ ಈ ಐದು ವರ್ಷಗಳ ಅಂತರದಲ್ಲಿ ಮಹಾರಾಷ್ಟ್ರದಲ್ಲಿ 32 ಲಕ್ಷ ಮತದಾರರು ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಆದರೆ, 2024 ಲೋಕಸಭಾ ಚುನಾವಣೆ ನಂತರ ಐದು ತಿಂಗಳಲ್ಲಿ 39 ಲಕ್ಷ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಸೇರಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಸೇರ್ಪಡೆಯಾದ ಒಟ್ಟು ಮತದಾರರ ಸಂಖ್ಯೆ ಹಿಮಾಚಲ ಪ್ರದೇಶದಂತಹ ರಾಜ್ಯದ ಜನಸಂಖ್ಯೆಗೆ ಸಮನಾಗಿದೆ.

ಮಹರಾಷ್ಟ್ರದಲ್ಲಿ ಇದ್ದಕ್ಕಿಂದ್ದಂತೆ ಇಷ್ಟೊಂದು ಸಂಖ್ಯೆಯಲ್ಲಿ ಹೊಸದಾಗಿ ಮತದಾರರು ಸೇರ್ಪಡೆಯಾಗಿರುವ ಬಗ್ಗೆ ಆತಂಕ ಮತ್ತು ಆಶ್ಚರ್ಯ ವ್ಯಕ್ತ ಪಡಿಸಿರುವ ಅವರು ಪರಿಷ್ಕೃತ ಮತದಾರರ ಪಟ್ಟಿಯನ್ನು ಒದಗಿಸುವಂತೆ ಚುನಾವಣಾ ಆಯೋಗವನ್ನು ಕೇಳಿದ್ದಾರೆ.

ರಾಹುಲ್‌ ಗಾಂಧಿ ಆರೋಪಗಳಿಗೆ ಚುನಾವಣಾ ಆಯೋಗವು ಪ್ರತಿಕ್ರಿಯೆ ನೀಡಿದ್ದು, ಸಂಪೂರ್ಣ ವಾಸ್ತವಾಂಶಗಳೊಂದಿಗೆ ಲಿಖಿತವಾಗಿ ಈ ಆರೋಪಕ್ಕೆ ಪ್ರತಿಕ್ರಿಯಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಆರೋಪ ಮಾಡಿದ ಕೂಡಲೇ ಚುನಾವಣಾ ಆಯೋಗ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ‘ರಾಜಕೀಯ ಪಕ್ಷಗಳನ್ನು ಆದ್ಯತೆಯ ಪಾಲುದಾರರು ಎಂದು ಚುನಾವಣಾ ಆಯೋಗ ಪರಿಗಣಿಸುತ್ತದೆ. ಸಹಜವಾಗಿ ಮತದಾರರು ಕೂಡ ಪ್ರಧಾನರಾಗಿದ್ದಾರೆ ಮತ್ತು ರಾಜಕೀಯ ಪಕ್ಷಗಳಿಂದ ಬರುವ ಅಭಿಪ್ರಾಯಗಳು, ಸಲಹೆಗಳು ಮತ್ತು ಪ್ರಶ್ನೆಗಳನ್ನು ಆಯೋಗ ಗೌರವಿಸುತ್ತದೆ. ‘ದೇಶದಾದ್ಯಂತ ಏಕರೂಪವಾಗಿ ಅಳವಡಿಸಿಕೊಂಡಿರುವ ಸಂಪೂರ್ಣ ವಾಸ್ತವಿಕ ಮತ್ತು ಕಾರ್ಯವಿಧಾನ ಸಂಪೂರ್ಣ ಮಾಹಿತಿಯೊಂದಿಗೆ ಆಯೋಗವು ಲಿಖಿತವಾಗಿ ಪ್ರತಿಕ್ರಿಯಿಸುತ್ತದೆ’ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...