ಸುವರ್ಣಸೌಧ ಬಳಿ ಪೊಲೀಸ್ ವಾಸ್ತವ್ಯಕ್ಕೆ ಜರ್ಮನ್ ಟೆಂಟ್ ಟೌನ್ ಶಿಪ್ ರೆಡಿ

Date:

Advertisements
  • ಡಿ. 4 ರಿಂದ 15 ರವರೆಗೆ ನಡೆಯಲಿರುವ ವಿಧಾನಸಭಾ ಚಳಿಗಾಲ ಅಧಿವೇಶನ
  • 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ 

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ ನಡೆಯಲಿರುವ ವಿಧಾನಸಭಾ ಚಳಿಗಾಲದ ಅಧಿವೇಶನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು ಭದ್ರತೆಗಾಗಿಯೇ 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ವಿಧಾನಸಭಾ ಚಳಿಗಾಲದ ಅಧಿವೇಶನದ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ‌ಕ್ರಮಗಳನ್ನು ಕೈಗೊಂಡಿದ್ದು 5 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಎಸ್ ಎನ್ ಸಿದ್ರಾಮಪ್ಪ ತಿಳಿಸಿದ್ದಾರೆ.

“5 ಸಾವಿರಕ್ಕೂ ಹೆಚ್ಚು ಸಂಖ್ಯೆಯ ಪೊಲೀಸರ ವಾಸ್ತವ್ಯಕ್ಕೆ ನಾಲ್ಕು ದೊಡ್ಡ ದೊಡ್ಡ ಜರ್ಮನ್ ಟೆಂಟ್ ನೊಂದಿಗೆ ಬೃಹತ್ ಟೌನ್ ಶಿಪ್ ನಿರ್ಮಿಸಲಾಗಿದೆ. ಸುವರ್ಣ ವಿಧಾನ ಸೌಧದ ಅಲಾರವಾಡ ಬಳಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವ ಬೃಹತ್ ಟೌನ್ ಶಿಪ್ ನಲ್ಲಿ ಬಂದೋಬಸ್ತ್‌ಗೆ ರಾಜ್ಯದ ನಾನಾ ಜಿಲ್ಲೆಗಳಿಂದ ಬರುವ ಪೊಲೀಸ್ ಸಿಬ್ಬಂದಿಗೆ ವಾಸ್ತವ್ಯಕ್ಕೆ ಅನುವು ಮಾಡಿಕೊಡಲಾಗುವುದು” ಎಂದು ಹೇಳಿದರು.

Advertisements

“ಈ ಟೌನ್ ಶಿಪ್ ನಿರ್ಮಾಣ ಕೆಲಸವನ್ನು ಮೈಸೂರಿನ ಕೆ.ಎಂ ಶರೀಫ್ ಎನ್ನುವರು ತೆಗೆದುಕೊಂಡಿದ್ದು, ಹದಿಮೂರು ದಿನಗಳಿಂದ 100 ಜನ ಕಾರ್ಮಿಕರು ಈ ಟೆಂಟ್ ನಿರ್ಮಾಣದಲ್ಲಿ ತೊಡಗಿದ್ದು, ಟೆಂಟ್‌ನ ಕೊನೆಯ ಹಂತದ ಕೆಲಸಗಳು ಭರದಿಂದ ಸಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರಕಾಶಿ ಸುರಂಗ ಕುಸಿತದಲ್ಲಿವೆ ಹಿಂದು-ಮುಸ್ಲಿಮ್ ಏಕತೆ ಪಾಠಗಳು

ಜರ್ಮನ್ ಟೆಂಟ್

“ನಾಲ್ಕು ದೊಡ್ಡ ದೊಡ್ಡ ಜರ್ಮನ್ ಟೆಂಟ್, ಒಂದು ಚಿಕ್ಕ ಟೆಂಟ್ ಹಾಕಿ ಟೌನ್ ಶಿಪ್ ನಿರ್ಮಾಣ ಮಾಡಲಾಗಿದ್ದು, ಒಂದು ಜರ್ಮನ್ ಟೆಂಟ್ 100 ಅಡಿ ಅಗಲ, 200 ಅಡಿ ಉದ್ದ ಇರಲಿದೆ. ಇದೇ ಮಾದರಿಯ ಒಟ್ಟು ನಾಲ್ಕು ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ. ಅಧಿಕಾರಿಗಳಿಗೆ ಒಂದು ಸಣ್ಣ-ಸಣ್ಣ ಟೆಂಟ್ ಸಹ ನಿರ್ಮಿಸಲಾಗಿದೆ. ಇನ್ನು ಒಂದೊಂದು ಟೌನ್ ಶಿಪ್ ನಲ್ಲಿ ಐನೂರು ಮಂದಿ ಸಿಬ್ಬಂದಿಗೆ ಮಲಗಲು ವ್ಯವಸ್ಥೆ ಮಾಡಲಾಗಿದೆ.

ವಾಟರ್ ಪ್ರೂಫ್ ಟೆಂಟ್ ಇದಾಗಿದ್ದು, ಒಟ್ಟು 2000 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಇಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕಾಟ್, ಗಾದೆ, ತಲೆ ದಿಂಬು, ಬೆಡ್ ಶೀಟ್ ನೀಡಲಾಗುತ್ತದೆ. ಹಾಗೇ ಚಾರ್ಜಿಂಗ್ ವ್ಯವಸ್ಥೆ ಕೂಡ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X