40% ಸರ್ಕಾರ ತೊಲಗಲಿ, ಕರ್ನಾಟಕ ಗೆಲ್ಲಲಿ: ರಣದೀಪ್ ಸುರ್ಜೇವಾಲ

Date:

  • ಕರ್ನಾಟಕ ಗೆಲ್ಲಲಿ ಎಂದ ಸುರ್ಜೇವಾಲ
  • ರಾಜ್ಯದಲ್ಲಿ ಒಂದೇ ಹಂತದ ಮತದಾನ

ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಐಸಿಸಿ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಇನ್ನುಮುಂದೆ ಮತಬೇಟೆ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಲಿವೆ.

ಚುನಾವಣಾ ದಿನಾಂಕ ಘೋಷಣೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿರುವ ರಣದೀಪ್ ಸುರ್ಜೇವಾಲ, “ದುರ್ಗಾಷ್ಟಮಿಯ ಪುಣ್ಯ ದಿನದಂದು ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ಚುನಾವಣೆಯನ್ನು ಘೋಷಿಸಿದೆ. ಕಾಂಗ್ರೆಸ್‌ ಭರವಸೆಗಳನ್ನು ಜಾರಿಗೆ ತರೋಣ” ಎಂದು ಟ್ವೀಟ್ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ಸುದ್ದಿ ಓದಿದ್ದೀರಾ? ನೀತಿ ಸಂಹಿತೆ ಬಿಸಿ: ಸರ್ಕಾರಿ ಕಾರು ವಾಪಾಸ್ ಕಳುಹಿಸಿದ ಸಿದ್ದರಾಮಯ್ಯ

“ರಾಜ್ಯದಲ್ಲಿರುವ 40% ಸರ್ಕಾರ ಮತ್ತು ಅದರ ಲಜ್ಜೆಗೆಟ್ಟ ಲೂಟಿಯಿಂದ ರಾಜ್ಯವನ್ನು ಮುಕ್ತಗೊಳಿಸಲು ಕಾಂಗ್ರೆಸ್ ಸಂಕಲ್ಪ ಮಾಡಿದೆ. ಸದೃಢ ಕರ್ನಾಟಕವನ್ನು ಪುನರ್ ನಿರ್ಮಾಣ ಮಾಡೋಣ. ಕನ್ನಡಿಗರ ಅಭಿಮಾನ ಬೆಳೆಯಲಿ! ಕಾಂಗ್ರೆಸ್‌ ಭರವಸೆಗಳನ್ನು ಜಾರಿಗೆ ತರೋಣ! ಕರ್ನಾಟಕ ಗೆಲ್ಲಲಿ!” ಎಂದು ಕಾಂಗ್ರೆಸ್‌ಗೆ ಹಾರೈಸಿದ್ದಾರೆ.

ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ರಾಜ್ಯ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದಾರೆ.

ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರ ಬೀಳಲಿದೆ.

ಏ 13ರಂದು ಅಧಿಸೂಚನೆ ಪ್ರಕಟ, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನ ಏ. 20, ನಾಮಪತ್ರ ಪರಿಶೀಲನೆ ಏ. 21, ನಾಮಪತ್ರ ವಾಪಾಸು ಪಡೆಯಲು ಏ.24 ಕೊನೆಯ ದಿನ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ...

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಬರ ಪರಿಹಾರ | ಬಾಕಿ ಮೊತ್ತ ತಕ್ಷಣ ಬಿಡುಗಡೆ ಮಾಡಲು ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ...