ಬಾಲಕಿ ಹತ್ಯೆ ಪ್ರಕರಣ | ಸ್ಪೆಷಲ್ ಕೋರ್ಟ್ ತೆರೆಯಲು ಕ್ರಮ, ನೀತಿ ಸಂಹಿತೆ ಮುಗಿದ ಮೇಲೆ ಕುಟುಂಬಕ್ಕೆ ಪರಿಹಾರ: ಸಚಿವ ಪರಮೇಶ್ವರ್‌

Date:

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯನ್ನು ಮತ್ತೆ ವಾಪಸ್ ಕರೆದುಕೊಂಡು ಬರಲು ಆಗುವುದಿಲ್ಲ.‌ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ನೇಮಿಸಿ, ಸ್ಪೆಷಲ್ ಕೋರ್ಟ್ ತೆರೆಯಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದರು.

- Advertisement -

ಮಡಿಕೇರಿ ಸೋಮವಾರಪೇಟೆಯ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿನಿ ಹತ್ಯೆಯಾದ ಸ್ಥಳ ಪರಿಶೀಲನೆ ನಡೆಸಿದ, ಬಳಿಕ ಬಾಲಕಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಕೊಲೆಯಾದ ವಿದ್ಯಾರ್ಥಿನಿ ಮೀನಾ 16 ವರ್ಷ.‌ ಆರೋಪಿ ಪ್ರಕಾಶ್ ಎಂಬುವನಿಗೆ 32 ವರ್ಷ. ಬಾಲಕಿಯ ತಂದೆ-ತಾಯಿಗೆ ಒತ್ತಾಯ ಮಾಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಗೊತ್ತಾದ ಕೂಡಲೇ ತಿಳಿಹೇಳಿ ತಡೆದಿದ್ದರು. ವಿದ್ಯಾರ್ಥಿನಿಗೆ 18 ವರ್ಷ ತುಂಬಿದ ನಂತರ ಮದುವೆಯಾಗುವಂತೆ ಬುದ್ಧಿ ಹೇಳಿದ್ದಾರೆ. ಇದಾದ ಬಳಿಕ ಬಾಲಕಿಯ ಮನೆ ಬಳಿ ಹೋಗಿ ಆಕೆಯ ತಂದೆ-ತಾಯಿ ಜೊತೆ ಜಗಳ ತೆಗೆದಿದ್ದಾನೆ. ತನ್ನ ಜೊತೆ ಮದುವೆ ಮಾಡಿಕೊಡುವಂತೆ ಒತ್ತಾಯಿಸಿ, ಬಾಲಕಿಯ ತಾಯಿಗೆ ಹೊಡೆದು, ಬಾಲಕಿಯನ್ನು ಎಳೆದೊಯ್ದು ಕೃತ್ಯ ಎಸಗಿದ್ದಾನೆ ಎಂಬುದು ಈವರೆಗಿನ ತನಿಖೆಯಲ್ಲಿ ಗೊತ್ತಾಗಿದೆ” ಎಂದರು‌.

“ನಿಜಕ್ಕೂ ಇದು ಮನುಷ್ಯರು ಒಪ್ಪಿಕೊಳ್ಳುವ ಕೃತ್ಯವಲ್ಲ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಕಾನೂನಿನ ಪ್ರಕಾರ ಶಿಕ್ಷೆ ಆಗಬೇಕೆನ್ನುವ ನಿಟ್ಟಿನಲ್ಲಿ ಪೊಲೀಸರು ಕೆಲಸ‌ ಮಾಡುತ್ತಿದ್ದಾರೆ. ಕುಟುಂಬವನ್ನು ನೋಡಿದರೆ ಬಹಳ ನೋವಾಗುತ್ತದೆ. ಬಡತನದ ಕುಟುಂಬ. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪರಿಹಾರದ ಬಗ್ಗೆ ಮಾತನಾಡಲು ಆಗುವುದಿಲ್ಲ. ನೀತಿ ಸಂಹಿತೆ ಮುಗಿದ ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಲಿದೆ” ಎಂದು ಭರವಸೆ ನೀಡಿದರು.

“ತನಿಖೆಯ ವರದಿ ಆಧರಿಸಿ ಅಧಿಕಾರಿಗಳ ತಪ್ಪಿದ್ದರೆ ಕ್ರಮ‌ಕೈಗೊಳ್ಳಲಾಗುವುದು. ಇಂತಹ ಪ್ರಕರಣಗಳಲ್ಲಿ ನಿರ್ಲಕ್ಷ್ಯ ಮಾಡಲಾಗುವುದಿಲ್ಲ. ತನಿಖೆ ಮುಗಿಯುವವರೆಗೂ ಯಾವುದೇ ಹೇಳಿಕೆ ಕೊಡಲು ಆಗುವುದಿಲ್ಲ. ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು” ಎಂದರು.

ಶೆಟ್ಟರ್‌ನಿಂದ ಸರ್ಟಿಫಿಕೇಟ್ ಬೇಕಿಲ್ಲ

ಜಗದೀಶ್ ಶೆಟ್ಟರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಶೆಟ್ಟರ್ ಅವರ ಅಧಿಕಾರಾವಧಿಯಲ್ಲಿನ ಅಂಕಿ-ಅಂಶಗಳನ್ನು ತೆಗೆಸಿ ತೋರಿಸಿದರೆ ಅವರಿಗೆ ಗೊತ್ತಾಗುತ್ತದೆ. ಅವರ ಕಾಲದಲ್ಲಿ ಎಷ್ಟು ಕೊಲೆ, ರೇಪ್, ಅಪರಾಧ ಚಟುವಟಿಕೆಗಳಿತ್ತು ಎಂಬುದು ಗೊತ್ತಾಗುತ್ತದೆ. ಆಗ ಅವರಿಗೆ ಅರ್ಥವಾಗುತ್ತದೆ. ಜಗದೀಶ್ ಶೆಟ್ಟರ್ ಅವರಿಂದ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಿಲ್ಲ. ಜನಗಳಿಂದ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕು. ಜನಗಳೇ ನಮಗೆ ಸರ್ಟಿಫಿಕೇಟ್ ಕೊಡುತ್ತಾರೆ” ಎಂದು ತಿರುಗೇಟು ನೀಡಿದರು.

ಈ ವೇಳೆ ಶಾಸಕ ಡಾ.ಮಂಥರ್ ಗೌಡ, ಐಜಿಪಿ ಅಮಿತ್ ಸಿಂಗ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...