‘ಹುಡುಗಿಯರು ರಾತ್ರಿ ಹೊರ ಹೋಗಬಾರದು’ – ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

Date:

ಪಶ್ಚಿಮ ಬರ್ಧಮಾನ್ ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. “ಹುಡುಗಿಯರು ರಾತ್ರಿಯಲ್ಲಿ (ಕಾಲೇಜಿನ) ಹೊರಗೆ ಹೋಗಲು ಬಿಡಬಾರದು. ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಜವಾಬ್ದಾರಿಯೂ ಹುಡುಗಿಯರು ಹೊಂದಿದ್ದಾರೆ” ಎಂದು ಹೇಳಿದ್ದಾರೆ.

- Advertisement -

ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳ ಬಂಧನದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, “ಸಂತ್ರಸ್ತ ಮಹಿಳೆ ಮಧ್ಯರಾತ್ರಿ 12.30ಕ್ಕೆ ಕಾಲೇಜಿನಿಂದ ಹೇಗೆ ಹೊರಬಂದಳು” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ‘ಇಂಡಿಯಾ’ ಒಕ್ಕೂಟಕ್ಕೆ 315 ಸೀಟು, ಬಿಜೆಪಿ 200 ದಾಟದು: ಮಮತಾ ಬ್ಯಾನರ್ಜಿ

“ಹುಡುಗಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಳು. ಮಧ್ಯರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ನನಗೆ ತಿಳಿದಿರುವಂತೆ, ಘಟನೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಏನಾಯಿತು ಎಂದು ನನಗೆ ತಿಳಿದಿಲ್ಲ. ತನಿಖೆ ನಡೆಯುತ್ತಿದೆ. ಘಟನೆಯನ್ನು ನೋಡಿ ನನಗೆ ಆಘಾತವಾಗಿದೆ. ಆದರೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹ ತಮ್ಮ ವಿದ್ಯಾರ್ಥಿಗಳನ್ನು, ವಿಶೇಷವಾಗಿ ಹುಡುಗಿಯರನ್ನು ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ. “ಹುಡುಗಿಯರನ್ನು ರಾತ್ರಿಯಲ್ಲಿ ಹೊರಗೆ (ಕಾಲೇಜಿನ) ಹೋಗಲು ಬಿಡಬಾರದು. ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಅರಣ್ಯ ಪ್ರದೇಶವೂ ಇದೆ” ಎಂದಿದ್ದಾರೆ.

ಇನ್ನು ಇಂತಹ ಘಟನೆಗಳು ನಡೆದಾಗ ಪಶ್ಚಿಮ ಬಂಗಾಳವನ್ನು ಪ್ರತ್ಯೇಕವಾಗಿ ಕಾಣಲಾಗುತ್ತದೆ. ಮೂರು ವಾರಗಳ ಹಿಂದೆ, ಒಡಿಶಾದ ಬೀಚ್‌ನಲ್ಲಿ ಮೂವರು ಹುಡುಗಿಯರ ಮೇಲೆ ಅತ್ಯಾಚಾರ ನಡೆಸಲಾಗಿದೆ. ಒಡಿಶಾ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತಿದೆ ಎಂದೂ ಪಶ್ಚಿಮ ಬಂಗಾಳ ಸರ್ಕಾರ ಪ್ರಶ್ನಿಸಿದೆ.

“ಮಣಿಪುರ, ಯುಪಿ, ಬಿಹಾರ, ಒಡಿಶಾದಲ್ಲಿ ಇಂತಹ ಘಟನೆಗಳು ನಡೆದಿವೆ. ಸರ್ಕಾರ ಅಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾವು ಭಾವಿಸುತ್ತೇವೆ. ನಮ್ಮ ರಾಜ್ಯದಲ್ಲಿ, ನಾವು 1-2 ತಿಂಗಳೊಳಗೆ ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದೇವೆ. ಕೆಳ ನ್ಯಾಯಾಲಯವು ಆರೋಪಿಗಳನ್ನು ಗಲ್ಲಿಗೇರಿಸಲು ಆದೇಶ ನೀಡಿದೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...