ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ

Date:

Advertisements
  • ‘ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ನಿರ್ಮಾಣದ ಅನುದಾನ ಸ್ಥಗಿತ’
  • ‘ಹೆಚ್ಚಿನ ಅನುದಾನದ ಬಿಡುಗಡೆ ಮಾಡಿದರೆ ಮಾತ್ರ ಗ್ರಾಮಗಳು ಅಭಿವೃದ್ಧಿ’

ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದರೆ ಮಾತ್ರ ಗ್ರಾಮ ಸ್ವರಾಜ್ಯ ಮಾಡಲು ಸಾಧ್ಯವಾಗಲಿದ್ದು, ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಭಾನುವಾರ ಶಿಗ್ಗಾಂವಿ ಸವಣೂರು ಮತ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ ನೇರವೆರಿಸಿ ಮಾತನಾಡಿದ ಅವರು, “ಫೆಬ್ರವರಿ ತಿಂಗಳ ಬಜೆಟ್‌ನಲ್ಲಿ ಶಿಗ್ಗಾಂವಿ ಸವಣೂರು ಕ್ಷೇತ್ರಕ್ಕೆ ಆರವತ್ತು ಲಕ್ಷಕ್ಕೂ ಹೆಚ್ಚು ಹಣ ನೀಡುವ ತಿರ್ಮಾನ ಮಾಡಿದ್ದೇವು. ಆದರೆ, ಈಗಿನ ಸರಕಾರ ಅದನ್ನು ನಿಲ್ಲಿಸಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ನೀಡಿರುವ ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ಆಗ್ರಹಿಸುವೆ” ಎಂದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ರಾಜ್ಯಪಾಲರ ‘ವಿಮಾನ ಪ್ರಕರಣ’; ಮಾಧ್ಯಮಗಳ ಗೊಂದಲಗಳು ಮತ್ತು ಜನಸಾಮಾನ್ಯರ ಪ್ರಶ್ನೆಗಳು

Advertisements

“ನಿಜವಾದ ಭಾರತದ ಸ್ವರಾಜ್ಯ ಗ್ರಾಮದಲ್ಲಿದೆ ಎನ್ನುವ ಗಾಂಧಿಜಿಯವರು ಕನಸು ಕಂಡಂತೆ ಗ್ರಾಮಗಳು ಅಭಿವೃದ್ಧಿಯಾದರೆ ಭಾರತದ ಅಭಿವೃದ್ಧಿ ಆದಂತೆ. ನಮ್ಮ ಅವಧಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ 250 ಕೋಟಿ ಅನುದಾನ ನೀಡಿದ್ದೇವು. ಆದರೆ, ಈ ಸರ್ಕಾರ ಆ ಅನುದಾನ ಸ್ಥಗಿತಗೊಳಿಸಿದೆ” ಎಂದು ಕಿಡಿ ಕಾರಿದರು.

“ಪ್ರತಿ ಮನೆಗಳಿಗೆ ನಲ್ಲಿ ಮೂಲಕ ನೀರು ಒದಗಿಸಲು ನಾವು ಜಲಜೀವನ ಮಿಷನ್ ಜಾರಿ ಮಾಡಿದ್ದೇವು ಆದರೆ, ಈ ಸರ್ಕಾರ ಬಂದ ನಂತರ ಕುಂಠಿತಗೊಂಡಿದೆ. ನಾವು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವು. ಆದರೆ, ಈ ಸರ್ಕಾರ ಮಂದಗತಿಯಲ್ಲಿದೆ ಹೆಚ್ಚಿನ ಪ್ರಮಾಣದ ಹಣವನ್ನು‌ ಬಿಡುಗಡೆ ಮಾಡಿದರೆ ಮಾತ್ರ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಸಾಧ್ಯ. ಅದನ್ನು ಸರ್ಕಾರ ಮಾಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X