ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಿ: ರಾಜ್ಯಪಾಲರಿಗೆ ಆರ್ ಅಶೋಕ್ ಮನವಿ

Date:

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ತಿಳಿಸಿದ್ದಾರೆ.

- Advertisement -

ಇತ್ತೀಚೆಗೆ ಮಂಗಳೂರಿನಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿಯ ಕೊಲೆಯಾಗಿದೆ. ಈ ಕೊಲೆ ಬೆನ್ನಲ್ಲೇ ಬಿಜೆಪಿ ಎಂದಿನಂತೆ
ಧಾರ್ಮಿಕ ಗಲಭೆ ಸೃಷ್ಟಿಸುವ ಪ್ರಯತ್ನವನ್ನು ಮಾಡಿದೆ. ಅಲ್ಲಲ್ಲಿ ಮುಸ್ಲಿಮರ ಮೇಲೆ ಸಂಘಪರಿವಾರ ದಾಳಿ ನಡೆಸಿದೆ. ಈ ಹತ್ಯೆಗೆ ಸಂಬಂಧಿಸಿ ಇಬ್ಬರು ಹಿಂದೂಗಳು ಸೇರಿದಂತೆ ಹಲವರ ಬಂಧನ ಮಾಡಲಾಗಿದೆ. ಆದರೆ ಬಿಜೆಪಿ ಹೆಣದ ಮೇಲೆ ನಡೆಸುವ ತಮ್ಮ ರಾಜಕೀಯವನ್ನು ಮುಂದುವರೆಸಿದೆ. ಈ ನಡುವೆ ಓರ್ವ ರೌಡಿಶೀಟರ್, ಕೊಲೆ ಆರೋಪಿ ಪರವಾಗಿ ನಿಂತಿರುವ ಅಶೋಕ್ ವಿರುದ್ಧ ಆಕ್ರೋಶವೂ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: 5ಕ್ಕೂ ಹೆಚ್ಚು ಆರೋಪಿಗಳು ಪೊಲೀಸ್ ವಶಕ್ಕೆ?

ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಆರ್‌ ಅಶೋಕ್ ಅವರು ಮನವಿ ಸಲ್ಲಿಸಿದ್ದಾರೆ. ಇದಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

“ರಾಜ್ಯಪಾಲರನ್ನು ಭೇಟಿಯಾಗಿ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ ವಿವರಿಸಲಾಗಿದೆ. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಪಾರಿ ನೀಡಿರುವ ಪ್ರಕರಣವಾಗಿದೆ. ಮುಸ್ಲಿಂ ಹುಡುಗನ ಕೊಲೆಯಾಗಿದ್ದಕ್ಕೆ ಆ ಕುಟುಂಬಕ್ಕೆ ಕಾಂಗ್ರೆಸ್‌ 25 ಲಕ್ಷ ರೂ. ಪರಿಹಾರ ನೀಡಿದೆ. ಆ ಹಣವನ್ನು ಬಳಸಿಯೇ ಸುಪಾರಿ ನೀಡಲಾಗಿದೆ” ಎಂದು ಆರೋಪಿಸಿದರು.

“ಸ್ಪೀಕರ್‌ ಯು.ಟಿ.ಖಾದರ್‌ ಅವರು ಆ ಕುಟುಂಬದವರು ಒಳ್ಳೆಯವರು ಎಂದು ಹೇಳಿದ್ದಾರೆ. ಆ ಮನೆಯವರೇ ಸುಪಾರಿ ನೀಡಿದ್ದಾರೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ. ಸ್ಪೀಕರ್‌ ಆಗಿ ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ಅಗತ್ಯವೇನಿದೆ? ಯಾವುದೇ ಸ್ಪೀಕರ್‌ ಕೊಲೆ ಬಗ್ಗೆ ಮಾತನಾಡಿದ ಇತಿಹಾಸವೇ ಇಲ್ಲ” ಎಂದರು.

ಇದನ್ನು ಓದಿದ್ದೀರಾ? ಪಾಕ್‌ ಪರ ಘೋಷಣೆ ಆರೋಪ | ಜನಾಕ್ರೋಶಕ್ಕೆ ಮಣಿದ ಸರ್ಕಾರ, ಮೂವರು ಆರೋಪಿಗಳ ಬಂಧನ: ಆರ್‌ ಅಶೋಕ್‌

“ಕಾಂಗ್ರೆಸ್ ಸರ್ಕಾರ ಇಂತಹವರ ವಿಚಾರದಲ್ಲಿ ಮೃದು ಧೋರಣೆ ತಾಳಿದೆ. ಈ ಪ್ರಕರಣದ ತನಿಖೆಯಲ್ಲಿ ನಮಗೆ ವಿಶ್ವಾಸವಿಲ್ಲ. ಪಾಕಿಸ್ತಾನ ಜಿಂದಾಬಾದ್‌ ಘೋಷಣೆಗೆ, ಭಯೋತ್ಪಾದನೆ ಚಟುವಟಿಕೆಗೆ ಪ್ರೇರಣೆ ಕೊಡುವವರ ಸಂಪರ್ಕ ಇವರಿಗಿದೆ” ಎಂದು ಹೇಳಿದರು.

ಹಾಗೆಯೇ “ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ. ಪಾಕಿಸ್ತಾನ ಜಿಂದಾಬಾದ್‌ ಎಂದು ಹೇಳುವವರಿಗೆ ಆಪರೇಶನ್‌ ಸಿಂಧೂರದಂತೆಯೇ ಶಾಸ್ತಿ ಆಗಬೇಕಿದೆ. ಇದಕ್ಕೆ ಅಂತ್ಯ ಕಾಣಿಸಬೇಕಿದೆ. ಇದಕ್ಕಾಗಿ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕು ಎಂದು ರಾಜ್ಯಪಾಲರಿಗೆ ಕೋರಲಾಗಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...