35 ಸೀಟು ಗೆಲ್ಲಿಸಿದರೆ ಸರ್ಕಾರ ಪತನಗೊಳಿಸುತ್ತೇವೆ ಎಂದ ಅಮಿತ್‌ ಶಾ; ನಿಮ್ಮ ಕೆಲಸ ನೋಡಿಕೊಳ್ಳಿ ಎಂದ ಟಿಎಂಸಿ

Date:

Advertisements
  • 2019 ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 18 ಸೀಟು ಗೆದ್ದಿತ್ತು
  • 2021ರ ವಿಧಾನಸಭಾ ಚುನಾವಣೆಯಲ್ಲಿ 213 ಸ್ಥಾನ ಗೆದ್ದು ಭರ್ಜರಿ ಬಹುಮತ ಗಳಿಸಿದ್ದ ಟಿಎಂಸಿ    

ಮುಂದಿನ 2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಿಂದ 35 ಸೀಟಿಗೂ ಹೆಚ್ಚು ಗೆಲ್ಲಿಸಿದರೆ 2025ರಲ್ಲಿ ಟಿಎಂಸಿ ಸರ್ಕಾರವನ್ನು ಪತನಗೊಳಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಬಿರ್ಭೂಮ್ ಜಿಲ್ಲೆಯ ಸೂರಿ ಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “2024ರ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕನಿಷ್ಠ 35 ಸ್ಥಾನಗಳನ್ನು ಗೆದ್ದರೆ, ರಾಜ್ಯದಲ್ಲಿ ರಾಮನವಮಿ ಮೆರವಣಿಗೆ ಮೇಲೆ ದಾಳಿ ಮಾಡುವ ಧೈರ್ಯ ಯಾರಿಗೂ ಇರುವುದಿಲ್ಲ. ಆದಕಾರಣ ನರೇಂದ್ರ ಮೋದಿಯವರಿಗೆ ನಿಮ್ಮ ರಾಜ್ಯದಿಂದ 35 ಕ್ಷೇತ್ರಗಳನ್ನು ನೀಡಿ” ಎಂದು ಕರೆ ನೀಡಿದರು.

ಕೇಂದ್ರ ಗೃಹ ಸಚಿವರು ನೇಮಕಾತಿ ಹಗರಣ ಮತ್ತು ತೃಣಮೂಲ ನಾಯಕರ ಬೆಂಬಲಿಗರ ಮನೆಗಳಿಂದ ವಶಪಡಿಸಿಕೊಂಡ ಕೋಟಿಗಟ್ಟಲೆ ನಗದನ್ನು ಉಲ್ಲೇಖಿಸಿ ಮಾತನಾಡಿ, “ಮಮತಾ ಜಿ ಮತ್ತು ಅವರ ಸೋದರಳಿಯರು ಎಷ್ಟೇ ಪ್ರಯತ್ನಿಸಿದರೂ ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟ ಮುಂದುವರಿಯುತ್ತದೆ. ಗೋವು ಕಳ್ಳಸಾಗಣೆಯಲ್ಲಿ ಕೇಂದ್ರ ಸರ್ಕಾರದಿಂದ ಬಂಧಿಸಲ್ಪಟ್ಟವರು ಇನ್ನೂ ತೃಣಮೂಲ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿದ್ದಾರೆ” ಎಂದು ಬಿರ್ಭುಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರ ವಿರುದ್ಧ ನೇರ ಆರೋಪ ಮಾಡಿದರು.

Advertisements

ಅಮಿತ್ ಶಾ ತಮ್ಮ 20 ನಿಮಿಷದ ಭಾಷಣದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಹೆಸರನ್ನು ಹಲವು ಬಾರಿ ಪ್ರಸ್ತಾಪಿಸಿ ಟೀಕಿಸಿದರು.

“ಮಮತಾ ಬ್ಯಾನರ್ಜಿ ಅವರ ಏಕೈಕ ಉದ್ದೇಶವೆಂದರೆ ತಮ್ಮ ಸೋದರಳಿಯನನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುವುದಾಗಿದೆ. ಮುಖ್ಯಮಂತ್ರಿ ತನ್ನ ಸೋದರಳಿಯ ಮುಖ್ಯಮಂತ್ರಿಯಾಗಬೇಕೆಂದು ಕನಸು ಕಾಣುತ್ತಿರಬಹುದು. ರಾಜ್ಯದ ಮುಂದಿನ ಮುಖ್ಯಮಂತ್ರಿ ಬಿಜೆಪಿಯವರೇ ಆಗುತ್ತಾರೆ ಎಂದು ಜನತೆಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ, ಒಳನುಸುಳುವಿಕೆ, ಗೋವು ಕಳ್ಳಸಾಗಣೆ ಮತ್ತು ಭ್ರಷ್ಟಾಚಾರವನ್ನು ಕೊನೆಗೊಳಿಸಲು ಬಿಜೆಪಿಗೆ ಮತ ನೀಡುವಂತೆ ಬಿಜೆಪಿ ನಾಯಕ ಜನರನ್ನು ಒತ್ತಾಯಿಸಿದರು. ಬಿಜೆಪಿ ಅಧಿಕಾರದಲ್ಲಿರುವ ನೆರೆಯ ರಾಜ್ಯವಾದ ಅಸ್ಸಾಂನ ಉದಾಹರಣೆಯನ್ನು ಉಲ್ಲೇಖಿಸಿದ ಅಮಿತ್ ಶಾ, ರಾಜ್ಯದಲ್ಲಿ ಒಳನುಸುಳುವಿಕೆ ಮತ್ತು ಗೋ ಕಳ್ಳಸಾಗಾಣಿಕೆಯನ್ನು ನಿಲ್ಲಿಸಲಾಗಿದೆ ಎಂದು ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ 2021ರಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಅಧಿಕಾರರೂಢ ತೃಣಮೂಲ ಕಾಂಗ್ರೆಸ್ 294 ವಿಧಾನಸಭಾ ಕ್ಷೇತ್ರಗಳ ಪೈಕಿ 213ರಲ್ಲಿ ಗೆಲುವು ಸಾಧಿಸಿ ಬಿಜೆಪಿಯನ್ನು ಮಣಿಸಿದೆ. ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯು 2026 ಕ್ಕೆ ನಿಗದಿಯಾಗಿದೆ. ಆದರೆ ಅಮಿತ್ ಶಾ 2025ರಲ್ಲಿ ತೃಣಮೂಲ ಸರ್ಕಾರವನ್ನು ಪತನಗೊಳಿಸುತ್ತೇವೆ ಎಂದು ಹೇಳಿರುವ ಮಾತುಗಳು ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವುದಾಗಿದೆ ಎಂದು ಟಿಎಂಸಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಗೆ ಹೋಗಿ ನಿಮ್ಮ ಕೆಲಸ ಮಾಡಿ; ಟಿಎಂಸಿ   

ಅಮಿತ್‌ ಶಾ ಭಾಷಣಕ್ಕೆ ತಿರುಗೇಟು ನೀಡಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, “ಅಮಿತ್‌ ಶಾ ಅವರೆ, ಪಶ್ಚಿಮ ಬಂಗಾಳ ಜನತೆ ರಾಜ್ಯಕ್ಕೆ ಆಗಾಗ ಬರುವ ಋತುಮಾನದ ಹಕ್ಕಿಯನ್ನು ನೋಡಲು ಯಾರೂ ಬಯಸುದಿಲ್ಲ. ದೆಹಲಿಗೆ ಹಿಂತಿರುಗಿ ಮತ್ತು ನಿಮ್ಮ ಕೆಲಸವನ್ನು ಮಾಡಿ. ನಿಸ್ಸಂಶಯವಾಗಿ, ಬಂಗಾಳದಲ್ಲಿ ಯಾರೂ ನಿಮ್ಮ ಕಸದಬುಟ್ಟಿಗೆ ಸೇರುವ ದ್ವೇಷಪೂರಿತ ಮಾತುಗಳನ್ನು, ಸುಳ್ಳುಗಳನ್ನು ಕೇಳಲು ಆಸಕ್ತಿ ಹೊಂದಿಲ್ಲ. ಮುಂದಿನ ಚುನಾವಣೆಯಲ್ಲಿಯೂ ಜನತೆ ನಿಮಗೆ ಸರಿಯಾದ ಪಾಠ ಕಲಿಸುತ್ತಾರೆ” ಎಂದು ತಿರುಗೇಟು ನೀಡಿದ್ದಾರೆ.

2019 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿನ 42 ಲೋಕಸಭಾ ಸ್ಥಾನಗಳಲ್ಲಿ 18 ಸ್ಥಾನಗಳನ್ನು ಗೆದ್ದಿತ್ತು. ಟಿಎಂಸಿ 22 ಸ್ಥಾನಗಳನ್ನು ಜಯಗಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X