‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ;  ಸಚಿವರ ವಿರುದ್ಧ ಗ್ರಾಮಸ್ಥರ ಆಕ್ರೋಶ

Date:

  • ರಥ ನಿರ್ಮಾಣ ಮಾಡಿ ಕೊಡುವುದಾಗಿ ಹೇಳಿ ಮಾತು ತಪ್ಪಿದ ಸೋಮಣ್ಣ
  • ಚನ್ನಪ್ಪನಪುರ ಗ್ರಾಮಸ್ಥರಿಂದ ‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ

ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮತ್ತು ಹೊಸ ತೇರು ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಸಚಿವ ಸಚಿವ ವಿ ಸೋಮಣ್ಣ ವಿರುದ್ಧ ಚಾಮರಾಜನಗರ ಜಲ್ಲೆಯ ಚನ್ನಪ್ಪನಪುರ ಗ್ರಾಮಸ್ಥರು ‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಶುಕ್ರವಾರ ದೇವಾಲಯದ ಆವರಣದಲ್ಲಿ ಸಭೆ ಸೇರಿದ ಗ್ರಾಮಸ್ಥರು, ಕೊಟ್ಟ ಮಾತಿಗೆ ವಿ ಸೋಮಣ್ಣ ತಪ್ಪಿ ನಡೆದಿದ್ದಾರೆ ಆಕ್ರೋಶ ವ್ಯಕ್ತಪಡಿಸಿ, ಸಚಿವರ ವಿರುದ್ಧ ‘ಗೋ ಬ್ಯಾಕ್ ಸೋಮಣ್ಣ ಅಭಿಯಾನ ನಡೆಸಿದರು.

ವಿ ಸೋಮಣ್ಣ ಅವರ ವಿಶೇಷಾಧಿಕಾರಿ ಸ್ವಾಮಿ ಮತ್ತು ಅಭಿಮಾನಿಗಳು ಸಭೆಯಲ್ಲಿ ಭಾಗಿಯಾಗಿ, “ವೀರಭದ್ರೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸೋಮಣ್ಣ ಅವರು ಈಗಲೂ ಬದ್ಧರಿದ್ದಾರೆ. ಮೂರೂವರೆ ಕೋಟಿ ಅನುದಾನ ಬಿಡುಗಡೆ ಕೋರಿ ಪತ್ರ ಬರೆದಿದ್ದಾರೆ. ಎಲ್ಲರೂ ಸಹಕರಿಸಬೇಕು” ಎಂದು ಗ್ರಾಮಸ್ಥರ ಮನವೊಲಿಕೆಗೆ ಪ್ರಯತ್ನಿಸಿದರು.

ಸಚಿವರ ವಿಶೇಷಾಧಿಕಾರಿ ಮಾತಿಗೆ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ, “ಸಚಿವ ಸೋಮಣ್ಣ ಅವರೇ ಖುದ್ದು ದೇವಸ್ಥಾನಕ್ಕೆ ಬಂದು ಎಲ್ಲರ ಸಮ್ಮುಖದಲ್ಲಿ ಈ ಮಾತು ಹೇಳಲಿ” ಎಂದು ಆಗ್ರಹಿಸಿದರು.

ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಚನ್ನಪ್ಪನಪುರ ವೀರಭದ್ರೇಶ್ವರ ಜಾತ್ರೆ ವೇಳೆ ರಥ ಮುರಿದುಬಿದ್ದಿತ್ತು. ಆ ವೇಳೆ ಸಚಿವ ವಿ ಸೋಮಣ್ಣ ಅವರ ನಿವಾಸಕ್ಕೆ ಗ್ರಾಮಸ್ಥರೆಲ್ಲರೂ ಸೇರಿ ಬೆಂಗಳೂರಿಗೆ ಬಂದು ಮನವಿ ಸಲ್ಲಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಡಿಕೆಶಿ ಜೈಲಿಗೆ ಹೋಗೋದು ಖಚಿತ: ಈಶ್ವರಪ್ಪ

ಲೋಕಸಭಾ ಚುನಾವಣೆಗೂ ಮುನ್ನ ಅಥವಾ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೈಲಿಗೆ...

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...