ರಾಜಕೀಯ ಕಾರಣಗಳಿಂದ ಮೇಕೆದಾಟು ಯೋಜನೆಗೆ ಅನುಮತಿ ವಿಳಂಬ: ಡಿಸಿಎಂ ಡಿ.ಕೆ.ಶಿವಕುಮಾರ್

Date:

Advertisements

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಗುರುವಾರ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರ ಜತೆ ಶಿವಕುಮಾರ್ ಅವರು ಮಾತನಾಡಿ, “400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ”ಎಂದು ತಿಳಿಸಿದರು.

ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ

Advertisements

“ನಮ್ಮ ಸರ್ಕಾರ ನಕ್ಸಲ್ ಹೋರಾಟಗಾರರ ಜೊತೆ ಶಾಂತಿಯುತ ಮಾತುಕತೆ ನಡೆಸಿದ ಪರಿಣಾಮ 6 ಮಂದಿ ಬುಧವಾರದಂದು ಶರಣಾಗಿದ್ದಾರೆ. ಇದರಲ್ಲಿ ಒಬ್ಬ ಸದಸ್ಯರು ತಮಿಳುನಾಡು ಮೂಲದವರು. ಬಿ ಟೆಕ್ ಪದವಿ ಪಡೆದಿದ್ದಾರೆ” ಎಂದರು.

“ಒಂದು ದೇಶ ಒಂದು ಚುನಾವಣೆ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಇದು ಬಿಜೆಪಿಯ ರಾಜಕೀಯ ಕುತಂತ್ರ. ನಾವು ಈಗ ಇರುವ ಚುನಾವಣಾ ವ್ಯವಸ್ಥೆಯ ಪರವಾಗಿ ನಿಲ್ಲುತ್ತೇವೆ” ಎಂದು ಹೇಳಿದರು.

ತಿರುಪತಿಯಲ್ಲಿ ಕಾಲ್ತುಳಿತವಾಗಿರುವ ಬಗ್ಗೆ ಕೇಳಿದಾಗ, “ಆ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇನ್ನೊಂದು ರಾಜ್ಯದ ವಿಚಾರಕ್ಕೆ ಅವರ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಲು ಹೋಗುವುದಿಲ್ಲ” ಎಂದು ಹೇಳಿದರು.

ಡಿಸಿಎಂ ಅವರಿಂದ ಗೋವರ್ಧನ ಹೋಮ

“ತಮಿಳುನಾಡು ದೇವಾಲಯಗಳ ಹಾಗೂ ಆಧ್ಯಾತ್ಮಿಕವಾದ ಭೂಮಿ. ನಮ್ಮ ಗುರುಗಳ ನಿರ್ದೇಶನದ ಮೇಲೆ ಗೋವರ್ಧನ ಹೋಮವನ್ನು ವರದರಾಜ ದೇವಾಲಯದಲ್ಲಿ ನೆರವೇರಿಸಿದ್ದೇನೆ. 2023ರ ವಿಧಾನಸಭಾ ಚುನಾವಣೆ ವೇಳೆ ನಾನು ವರದರಾಜ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೆ. ಜೊತೆಗೆ ತಮಿಳುನಾಡಿನ ಅನೇಕ ದೇವಾಲಯಗಳಿಗೂ ಭೇಟಿ ಕೊಟ್ಟಿದ್ದೆ. ದೇವರ ಅನುಗ್ರಹದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಿತು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X