ಗೂಂಡಾ ಕಾಯಿದೆ ಹೇಳಿಕೆ | ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ತಿರುಗಿಬಿದ್ದ ಬಜರಂಗದಳ!

Date:

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, “ನಾನು ಗೃಹ ಸಚಿವನಾಗಿದ್ದಾಗ ಬಜರಂಗದಳದವರ ಮೇಲೆಯೇ ಗೂಂಡಾ ಕಾಯ್ದೆ ಹಾಕಿದ್ದೆ” ಎಂದು ನೀಡಿರುವ ಹೇಳಿಕೆ ಈಗ ಬಿಜೆಪಿಗೆ ತಿರುಗುಬಾಣವಾಗಿದೆ.

ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೀಡಿರುವ ಹೇಳಿಕೆಯ ವಿರುದ್ದ ಬಜರಂಗದಳ ಕಿಡಿಕಾರಿದ್ದು, “ಮಂಗಳೂರಿನ ಬಜರಂಗದಳದ ಕಾರ್ಯಕರ್ತರ ಪ್ರತಿರೋಧ ಎದುರಿಸಲು ಸಿದ್ಧರಾಗಿ” ಎಂದು ಎಚ್ಚರಿಕೆ ನೀಡಿದ್ದಾರೆ.

ಆರ್‌‌.ಅಶೋಕ್​ಗೆ ಬಜರಂಗದಳದ ಮಂಗಳೂರಿನ ಮುಖಂಡ ಪುನೀತ್ ಅತ್ತಾವರ, ತನ್ನ ಫೇಸ್‌ಬುಕ್ ಖಾತೆಯಲ್ಲಿ ಬಹಿರಂಗ ಎಚ್ಚರಿಕೆ ನೀಡಿದ್ದು, “ನೀವು ಆರ್ ಅಶೋಕ್ ಅಲ್ಲ. ನಿಮ್ಮ ಹೆಸರನ್ನು ಎ ಅಶೋಕ್ ಅಂತ ಬದಲಾಯಿಸಿ ಬಿಡಿ. ಅಂದರೆ ಅಡ್ಜಸ್ಟ್ ಮೆಂಟ್ ಅಶೋಕ್” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

 

ಆರ್ ಅಶೋಕ್ ಸದನದಲ್ಲಿ ನೀಡಿದ್ದ ಹೇಳಿಕೆಯ ವಿಡಿಯೋ ತುಣುಕನ್ನು ಹಂಚಿಕೊಂಡಿರುವ ಪುನೀತ್ ಅತ್ತಾವರ, “ಅಶೋಕ್ ಅವರೇ, ನಿಮ್ಮ ನಾಲಗೆಯನ್ನು ನಾಲಗೆ ರೀತಿಯಲ್ಲಿ ಬಳಸಿ, ಎಕ್ಕಡದ ರೀತಿ ಬಳಸಿಕೊಳ್ಳಬೇಡಿ. ಅಡ್ಜಸ್ಟ್‌ಮೆಂಟ್ ರಾಜಕಾರಣ ಎಂಬ ಕೊಚ್ಚೆಯಲ್ಲಿ ಹೊರಳಾಡುತ್ತಿರುವ ನಿಮಗೆ ಬಜರಂಗದಳದ ಕಾರ್ಯಕರ್ತರ ಹೆಸರು ಎತ್ತಲೂ ಯೋಗ್ಯತೆಯಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಸಿದ್ಧಾಂತಕ್ಕಾಗಿ ಹೋರಾಡುವ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಅವರನ್ನು ಸುಮ್ಮನಿರಿಸುವಷ್ಟು ದೊಡ್ಡವರು ನೀವಾಗಿಲ್ಲ. ಬಜರಂಗದಳ ಕಾರ್ಯಕರ್ತರು ಹೋರಾಡುವುದು ನಿಮ್ಮ ಹಾಗೆ ವೈಯಕ್ತಿಕ ಲಾಭದ ಆಸೆಗಾಗಿ ಅಲ್ಲ. ನಿಮ್ಮ ರಾಜಕೀಯ ತೆವಲಿಗಾಗಿ ಬಜರಂಗದಳ ಕಾರ್ಯಕರ್ತರ ಬಗ್ಗೆ ಆಡಿದ ಮಾತನ್ನು ಹಿಂದೆಗೆದುಕೊಳ್ಳು” ಎಂದು ಏಕವಚನದಲ್ಲೇ ಹಾಕಿರುವ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

“ಪ್ರತಿಪಕ್ಷ ನಾಯಕನಾಗಿರುವ ನೀವು, ಒಂದಲ್ಲ ಒಂದು ದಿನ ಮಂಗಳೂರಿಗೆ ಬಂದೇ ಬರುತ್ತೀರಿ ಎಂಬ ಮಾತು ನೆನಪಿರಲಿ. ಹಿಂದೂ ವಿರೋಧಿ ಕೃತ್ಯಕ್ಕೆ ಪ್ರತಿರೋಧ ಒಡ್ಡಿ ಹೋರಾಡುವ ನಮಗೆ ನೀವೊಬ್ಬರು ಹೆಚ್ಚಾಗುವುದಿಲ್ಲ. ಒಂದಾ ಬಜರಂಗದಳದ ಕಾರ್ಯಕರ್ತರ ಬಗ್ಗೆ ಆಡಿದ ಮಾತುಗಳನ್ನು ಹಿಂದೆ ಪಡೆಯಿರಿ. ಇಲ್ಲದಿದ್ದರೆ ಬಜರಂಗದಳದ ಕಾರ್ಯಕರ್ತರ ಪ್ರತಿರೋಧವನ್ನು ಎದುರಿಸಲು ಸಿದ್ಧರಾಗಿ” ಎಂಬ ಎಚ್ಚರಿಕೆಯನ್ನು ಬಜರಂಗದಳದ ಮುಖಂಡ ಪುನೀತ್ ಅತ್ತಾವರ ನೀಡಿದ್ದಾರೆ.

ಆರ್ ಅಶೋಕ್ ಹೇಳಿದ್ದೇನು?
ಸದನದಲ್ಲಿ ರಾಮನಗರದಲ್ಲಿ ವಕೀಲರ ಮೇಲೆ ಪೊಲೀಸರು ಎಫ್‌ಐಆರ್ ಹಾಕಿರುವ ವಿಚಾರವಾಗಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿದ್ದರು.

ಈ ವೇಳೆ, “ಮಂಗಳೂರು ಪಬ್ ದಾಳಿ ವೇಳೆ ನಾನು ರಾಜ್ಯದ ಗೃಹ ಸಚಿವನಾಗಿದ್ದೆ. ಇದೇ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಧರಣಿ ಕೂಡ ನಡೆದು, ದೊಡ್ಡ ಗಲಾಟೆಯೇ ಆಗಿತ್ತು. ಅವತ್ತು ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ನನ್ನ ಮೇಲೆ ಭಾರೀ ಒತ್ತಡವಿತ್ತು. ಫೋನ್‌ಗಳು ಕೂಡ ಬಂದಿತ್ತು. ಆದರೂ ಕೂಡ ನಾನು ಯಾವುದೇ ಒತ್ತಡಕ್ಕೆ ಮಣಿಯದೇ ಪಬ್ ದಾಳಿ ವೇಳೆ ಯುವತಿಯರ ಮೇಲೆ ದೌರ್ಜನ್ಯ ಎಸಗಿ ಬಜರಂಗದಳದವರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ. ಆ ಥರ ನೀವೂ ಕೂಡ ಕ್ರಮ ಕೈಗೊಳ್ಳಿ” ಎಂದು ಈಗಿನ ಗೃಹ ಸಚಿವ ಪರಮೇಶ್ವರ್​ ಅವರಲ್ಲಿ ಆಗ್ರಹಿಸುತ್ತಿದ್ದ ಭರದಲ್ಲಿ ಆರ್.ಅಶೋಕ್ ಈ ಹೇಳಿಕೆ ನೀಡಿದ್ದರು. ವಿಪಕ್ಷ ನಾಯಕ ಆರ್ ಅಶೋಕ್ ಅವರ ಈ ಹೇಳಿಕೆಯ ವಿರುದ್ಧ ಬಜರಂಗದಳ ತಿರುಗಿಬಿದ್ದಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...