ಬಿಜೆಪಿಗೆ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಗೂಳಿಹಟ್ಟಿ ಶೇಖರ್ ರಾಜೀನಾಮೆ

Date:

  • ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರುವ ಸಾಧ್ಯತೆ
  • ಎಸ್ ಲಿಂಗಮೂರ್ತಿಗೆ ಹೊಸದುರ್ಗ ಟಿಕೆಟ್‌

ಹೊಸದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಸ್ವಪಕ್ಷದ ನಾಯಕರು ಒಬ್ಬೊಬ್ಬರೇ ಪಕ್ಷ ತೊರೆದು ಬಿಜೆಪಿ ವಿರುದ್ಧ ತೊಡೆ ತಟ್ಟಲು ಸಜ್ಜಾಗಿದ್ದಾರೆ. ಶಾಸಕ ಗೂಳಿಹಟ್ಟಿ ಅವರಿಗೂ ಟಿಕೆಟ್ ನಿರಾಕರಿಸಲಾಗಿತ್ತು.

ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೂಳಿಹಟ್ಟಿ ಶೇಖರ್, “ಸಾಮಾನ್ಯ ಕ್ಷೇತ್ರದಲ್ಲಿ ಸಾಮಾಜಿಕ ನ್ಯಾಯ ಒದಗಿಸಲು ಬಿಜೆಪಿ ವಿಫಲವಾಗಿದೆ. ಹೀಗಾಗಿ ಬೇಸರದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಈಗಾಗಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ಟಿಕೆಟ್ ನೀಡಿದರೆ ಆ ಪಕ್ಷದಿಂದ ಸ್ಪರ್ಧಿಸುವೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ದೇವೇಗೌಡರ ʼಮಾನಸ ಪುತ್ರʼ ವೈ ಎಸ್‌ ವಿ ದತ್ತ ಮರಳಿ ಜೆಡಿಎಸ್‌ ಗೂಡಿಗೆ

“ಜನಾರ್ದನ ರೆಡ್ಡಿ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುವುದು ಸತ್ಯ. ನನ್ನನ್ನು ನಂಬಿಕೊಂಡಿರುವ ಕಾರ್ಯಕರ್ತರಿಗೆ ಅನ್ಯಾಯವಾಗಲು ಬಿಡಲಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿ ನನಗೆ ಸಾಕಷ್ಟು ಅವಕಾಶ ಮಾಡಿಕೊಟ್ಟಿದೆ. ಆದರೆ, ಮತ್ತೊಮ್ಮೆ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎನ್ನುವ ಇಚ್ಛೆ ಇರುವುದರಿಂದ ರಾಜೀನಾಮೆ ಸಲ್ಲಿಸಿದ್ದೇನೆ” ಎಂದಿದ್ದಾರೆ.

“2018ರಲ್ಲಿ ಬಿಜೆಪಿ ಸೇರುವ ಮೂಲಕ ಪಕ್ಷ ಅಧಿಕಾರಕ್ಕೆ ಬರಲು ಕಾರಣನಾಗಿದ್ದೆ. ಇದೀಗ ಸಾಮಾಜಿಕ ನ್ಯಾಯ ಎಂದು ಪ್ರಸ್ತಾಪಿಸುವ ಮೂಲಕ ನನ್ನನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಯಡಿಯೂರಪ್ಪ ಅವರ ಶಿಷ್ಯ ಹಾಗೂ ಅವರ ಮಗ ವಿಜಯೇಂದ್ರರ ಗೆಳೆಯನಿಗೆ ಟಿಕೆಟ್‌ ನೀಡಿದ್ದಾರೆ. ನಾನು ಅದರ ಬಗ್ಗೆ ಮಾತನಾಡುವುದಿಲ್ಲ” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹಾಲಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ಖನಿಜ ನಿಗಮದ ಅಧ್ಯಕ್ಷ ಎಸ್ ಲಿಂಗಮೂರ್ತಿ ಅವರಿಗೆ ಟಿಕೆಟ್ ನೀಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಮೀಕ್ಷೆ | ಕಳೆದ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ನಿಜವಾಗಿಯೂ ಅಭಿವೃದ್ಧಿ ಕೆಲಸಗಳು ನಡೆದಿವೆಯೇ?

ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ...

‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ...

ಕೊಡಗು | ಕಾಂಗ್ರೆಸ್‌ನತ್ತ ವಾಲುತ್ತಿದ್ದಾರೆ ಬಿಜೆಪಿ ಭದ್ರಕೋಟೆಯ ಮತದಾರರು

ಬಿಜೆಪಿ ಭದ್ರಕೋಟೆಯಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ನಿಲುವುಗಳು ಬದಲಾಗುತ್ತಿವೆ....

ಯಾವ ಉಚ್ಚಾಟನೆಗೂ ಹೆದರಲ್ಲ: ಈಶ್ವರಪ್ಪ

ಬಿಜೆಪಿಯಲ್ಲಿ ಬಂಡಾಯ ಎದ್ದು ಶಿವಮೊಗ್ಗ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಈಶ್ವರಪ್ಪ...