ಜನರ ಮನೆಬಾಗಿಲಿಗೆ ಆಡಳಿತ ಆಶಯ, ಸಿಎಂ ಜನಸ್ಪಂದನ ಮಹತ್ವದ ಹೆಜ್ಜೆ: ಡಿ ಕೆ ಶಿವಕುಮಾರ್

Date:

Advertisements
  • ಸಿಎಂ ಜನಸ್ಪಂದನ ಅಭೂತಪೂರ್ವ ಯಶಸ್ಸು: ಡಿ ಕೆ ಶಿವಕುಮಾರ್‌
  • ಮುಖ್ಯಮಂತ್ರಿ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆಗೆ ಚರ್ಚೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಸಮಸ್ಯೆಯನ್ನು ಹೊತ್ತು ಬಂದಿದ್ದ ನೂರಾರು ಜನರಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕಿದೆ. ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಮಹತ್ವದ ಹೆಜ್ಜೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಣ್ಣಿಸಿದರು.

ಬಿಜೆಪಿ ಅವಧಿಯಲ್ಲಿ ನಿಂತ ನೀರಿನಂತಾಗಿ ಆಡಳಿತ ಯಂತ್ರ ಜಿಡ್ಡುಗಟ್ಟಿತ್ತು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಚುರುಕು ನೀಡಲಾಗಿದೆ. ಉಳಿದ ಸಮಸ್ಯೆಗಳನ್ನು ಆಯಾ ಇಲಾಖೆ ಮುಖ್ಯಸ್ಥರು ಕಾಲಮಿತಿಯಲ್ಲಿ ಬಗೆಹರಿಸಿ ವಾಸ್ತವ ಸಂಗತಿಯನ್ನು ಅರ್ಜಿದಾರರಿಗೆ ಒದಗಿಸಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಹಿಂದಿನ ಬಿಜೆಪಿ ಸರಕಾರದ ದುರಾಡಳಿತದಿಂದ ಜನರು ತತ್ತರಿಸಿ ಹೋಗಿದ್ದರು. ಅವರ ಸಮಸ್ಯೆಗಳಿಗೆ ಪರಿಹಾರ ಸಿಗದೆ ಹೈರಾಣ ಆಗಿದ್ದರು. ಇದೀಗ ಆ ಪರಿಸ್ಥಿತಿ ಬದಲಾಗಿದೆ. ಅದರ ಮುಂದಿನ ಹೆಜ್ಜೆಯಾಗಿ ಜನಸ್ಪಂದನ ಕಾರ್ಯಕ್ರಮವು ಆಡಳಿತದಲ್ಲಿ ಬಹು ದೊಡ್ಡ ಬದಲಾವಣೆಗೆ ಕಾರಣವಾಗಲಿದೆ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

“ಮುಂದಿನ ದಿನಗಳಲ್ಲಿ ಆಡಳಿಕ್ಕೆ ವೇಗ ನೀಡಿ ಸರಕಾರದ ಎಲ್ಲಾ ಯೋಜನೆಗಳ ಲಾಭ ನೂರಕ್ಕೆ ನೂರರಷ್ಟು ಫಲಾನುಭವಿಗಳಿಗೆ ತಲುಪಿಸುವಂತೆ ಎಚ್ಚರ ವಹಿಸಲಾಗುವುದು. ಈಗಾಗಲೇ ಎಲ್ಲ ಸಚಿವರು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಜನರ ಮನೆ ಬಾಗಿಲಿಗೆ ಆಡಳಿತ ಎಂಬ ಮಾತನ್ನು ಈಡೇರಿಸಿದ ಸಂತೃಪ್ತ ಭಾವ ತಮಗಿದೆ” ಎಂದಿದ್ದಾರೆ.

“ಸರಕಾರದ ಆಶಯಗಳಿಗೆ ತಕ್ಕಂತೆ ನಮ್ಮ ಯೋಜನೆ ಮತ್ತು ಕಾರ್ಯಕ್ರಮಗಳು ಅನುಷ್ಠಾನಗೊಂಡಿವೆಯೇ ಎಂಬುದನ್ನು ತಿಳಿದುಕೊಳ್ಳಲು ಸಮೀಕ್ಷೆ ನಡೆಸುವ ಆಲೋಚನೆಯೂ ಇದೆ. ಈ ಬಗ್ಗೆ ಸಿಎಂ ಅವರ ಜತೆ ಸಮಾಲೋಚನೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

“ಇಂದು ಬಹುದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡ ಜನರಿಗೆ ಇಲಾಖಾವಾರು ಉತ್ತರವನ್ನು ಕಾಲಮಿತಿಯಲ್ಲಿ ನೀಡುವ ಬಗ್ಗೆ ಸಿಎಂ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆಯೂ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X