ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಹಿರಿಯ ನಾಯಕ, ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಗರಂ ಆಗಿದ್ದಾರೆ.
“ರಾಜ್ಯ ಸರ್ಕಾರದ ಆಡಳಿತ ಸಂಪೂರ್ಣ ವಿಫಲವಾಗಿದೆ. ಆಳಂದ ಶಾಸಕ ಬಿ.ಆರ್.ಪಾಟೀಲ ಅವರು ಮಾಡಿದ ಭ್ರಷ್ಟಾಚಾರ ಆರೋಪ ಸತ್ಯವಿದೆ. ನನಗೂ ಅಂಥದ್ದೇ ಪರಿಸ್ಥಿತಿ ಬಂದಿದೆ. ಕ್ಷೇತ್ರದಲ್ಲಿ ಒಂದೂ ಕೆಲಸವೂ ಆಗುತ್ತಿಲ್ಲ. ಇದನ್ನು ಖಂಡಿಸಿ ನಾನು ರಾಜೀನಾಮೆ ನೀಡಿದರೂ ಅಚ್ಚರಿ ಇಲ್ಲ” ಎಂದು ರಾಜು ಕಾಗೆ ಬೇಸರ ಹೊರಹಾಕಿದ್ದಾರೆ.
“ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ ಬಂದಿದ್ದರೂ ಕೆಲಸ ಆರಂಭವಾಗಿಲ್ಲ. ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ” ಎಂದು ಕಿಡಿಕಾರಿದ್ದಾರೆ.
“2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ. ಇದರ ಅರ್ಥ ಏನು? ನನ್ನ ಮನಸ್ಸಿಗೆ ಸಾಕಷ್ಟು ನೋವಾಗಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ” ಎಂದು ಹೇಳಿದ್ದಾರೆ.