ಸೆ.18ರಿಂದ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ

Date:

ಕೇಂದ್ರ ಸರ್ಕಾರ ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ಕಾಲ ‘ಸಂಸತ್ತಿನ ವಿಶೇಷ ಅಧಿವೇಶನ’ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

“ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261 ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಮುನ್ನೋಡುತ್ತಿದ್ದೇವೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರದ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆ ಗದ್ದಲಗಳ ನಡುವೆ ಮುಂಗಾರು ಅಧಿವೇಶನವು ಇತ್ತೀಚೆಗೆ ಮುಕ್ತಾಯಗೊಂಡಿತ್ತು. ಅದಾಗಿ ಒಂದು ತಿಂಗಳಲ್ಲಿ ವಿಶೇಷ ಅಧಿವೇಶನ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲಿಯೂ ವಿಶೇಷ ಕಲಾಪಗಳು ನಡೆಯಲಿದ್ದು, ಒಟ್ಟು ಐದು ದಿನ ಅಧಿವೇಶನ ಜರುಗಲಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ವಾಪಸ್ ನೀಡಲು ಹಾಗೂ ಶೀಘ್ರದಲ್ಲಿಯೇ ಚುನಾವಣೆ ನಡೆಸಲು ಕಾಲಮಿತಿ ಸಿದ್ಧಪಡಿಸಲಾಗುವುದು ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಭರವಸೆ ನೀಡಿದ ಬೆನ್ನಲ್ಲೇ ವಿಶೇಷ ಅಧಿವೇಶನ ಕರೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಹಿಂಡೆನ್‌ಬರ್ಗ್ 2.0? ಒಸಿಸಿಆರ್‌ಪಿ ವರದಿಯ ನಂತರ ಅದಾನಿ ಷೇರುಗಳು ತೀವ್ರ ಕುಸಿತ

ಇತ್ತೀಚಿಗೆ ನಡೆದ ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಂದು ಪ್ರಾರಂಭವಾಗಿ ಆಗಸ್ಟ್ 12 ರಂದು ಮುಕ್ತಾಯವಾಯಿತು. ಆ ಸಂದರ್ಭದಲ್ಲಿ ಸರ್ಕಾರದಿಂದ 23 ಮಸೂದೆಗಳನ್ನು ಅಂಗೀಕರಿಸಲಾಯಿತು. ಮಣಿಪುರದ ಹಿಂಸಾಚಾರ ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ (ತಿದ್ದುಪಡಿ) 2023ರ ವಿವಾದಾತ್ಮಕ ಮಸೂದೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆದಿತ್ತು. ವಿಪಕ್ಷಗಳು ಸರ್ಕಾರ ಮಂಡಿಸಿದ ಯಾವುದೇ ಚರ್ಚೆಗಳಲ್ಲಿ ಪಾಲ್ಗೊಂಡಿರದೆ ಪ್ರತಿಭಟನೆ ನಡೆಸಿದ್ದವು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರ | ಚುನಾವಣಾ ಪ್ರಚಾರ ಸಭೆಯಲ್ಲೇ ಪ್ರಜ್ಞಾಹೀನರಾಗಿ ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ...

ವಿವಿಪ್ಯಾಟ್ ಪ್ರಕರಣ: ನಾವು ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಮತದಾನ ಯಂತ್ರದ ಮೂಲಕ ಮತ ಚಲಾಯಿಸಿದ ನಂತರ ವಿವಿಪ್ಯಾಟ್ ಮೂಲಕ ಮತದಾರರಿಗೆ...

ಮಲ್ಲಿಕಾರ್ಜುನ ಖರ್ಗೆ ಸೋಲು ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ, ಈ ಬಾರಿ ಹಾಗೇ ಆಗಬಾರದು: ಸಿದ್ದರಾಮಯ್ಯ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಹೆಚ್ಚು...

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು...