ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕಾರ್ಯದಿಂದ ಶಿಕ್ಷಕರ ಕೈಬಿಟ್ಟ ಸರ್ಕಾರ: ಅ. 31ರವರೆಗೆ ಅವಧಿ ವಿಸ್ತರಣೆ

Date:

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಪೂರ್ಣವಾಗದ ಕಾರಣ ಸಮೀಕ್ಷೆ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಹಾಗೆಯೇ ಸಮೀಕ್ಷೆ ಕಾರ್ಯದಿಂದ ಶಿಕ್ಷಕರನ್ನು ಕೈಬಿಡಲಾಗಿದೆ. ಇತರ ಇಲಾಖೆಯ ಸಿಬ್ಬಂದಿಯನ್ನು ಸಮೀಕ್ಷೆಗೆ ಬಳಸಿಕೊಳ್ಳುವ ನಿರ್ಧಾರವನ್ನು ಮಾಡಲಾಗಿದೆ.

- Advertisement -

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆದಿದ್ದು ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆಯ ಅವಧಿ ವಿಸ್ತರಣೆ; ಶಾಲಾ ಸಮಯಯೂ ಬದಲಾವಣೆ

ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಜಾತಿಗಣತಿಯನ್ನು ಅಕ್ಟೋಬರ್ 7ರ ಒಳಗೆ ಮುಕ್ತಾಯಗೊಳಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ, ಗಣತಿ ಕಾರ್ಯ ಬಾಕಿ ಉಳಿದ ಹಿನ್ನಲೆ ಅಕ್ಟೋಬರ್​ 18ರ ವರೆಗೆ ಜಾತಿ ಸಮೀಕ್ಷೆ ಕಾರ್ಯ ವಿಸ್ತರಣೆಗೊಂಡಿತ್ತು. ಆದರೆ ಇದೀಗ ಅಕ್ಟೋಬರ್ 31ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಈವರೆಗೆ ಬೆಂಗಳೂರು ಹೊರತುಪಡಿಸಿ ಶೇ.95-98ರಷ್ಟು ಸಮೀಕ್ಷೆ ಕಾರ್ಯ ಮುಗಿದಿದೆ. ಆದರೆ, ರಾಮನಗರ, ಬೀದರ್, ಧಾರವಾಡ ಮೂರು ಜಿಲ್ಲೆಗಳಲ್ಲಿ ಶೇ.86-89ಕ್ಕಿಂತ ಕಡಿಮೆ ಪ್ರಗತಿ ಕಂಡಿದೆ.‌ ಬೆಂಗಳೂರಲ್ಲಿ ಅತಿ ಕಡಿಮೆ ಪ್ರಗತಿ ಕಂಡಿರುವ ಬಗ್ಗೆ ಚರ್ಚೆ ನಡೆದಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಬುಧವಾರದ ತನಕ ರಜೆ ಇದ್ದು, ಅ.23ರಿಂದ ಅ.31ರವರೆಗೆ ಸಮೀಕ್ಷೆ ನಡೆಸಿ ಪೂರ್ಣಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಮೀಕ್ಷೆ ಅವಧಿ ವಿಸ್ತರಣೆ ಮಾಡಿದ ಬಳಿಕ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರನ್ನು ಗಣತಿ ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಉಳಿದ ಸಮೀಕ್ಷೆಯನ್ನು ಇಲಾಖೆ ಸಿಬ್ಬಂದಿ ಬಳಸಿಕೊಂಡು ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.

ಹಾಗೆಯೇ ಸಮೀಕ್ಷೆಗೆ ಇನ್ನೂ ಅವಕಾಶ ನೀಡಲಾಗಿರುವ ಕಾರಣ ಯಾರು ಇನ್ನೂ ಸಮೀಕ್ಷೆಯಲ್ಲಿ ಭಾಗಿಯಾಗಿಲ್ಲವೋ ಅವರು ಸಮೀಕ್ಷೆಯಲ್ಲಿ ಭಾಗಿಯಾಗಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....