ಪಾವಗಡ ಸೋಲಾರ್ ಪಾರ್ಕ್ ವಿಸ್ತರಿಸಲು ನಿರ್ಧಾರ: ಡಿಸಿಎಂ ಡಿ ಕೆ ಶಿವಕುಮಾರ್

Date:

  • ತಿರುಮಣಿಯಲ್ಲಿನ ಸೋಲಾರ್ ಪಾರ್ಕ್ ವೈಮಾನಿಕ ಸಮೀಕ್ಷೆ
  • ರೈತರು ಒಪ್ಪಿ ಭೂಮಿ ನೀಡಿದರೆ ಸೋಲಾರ್ ಪಾರ್ಕ್ ವಿಸ್ತರಣೆ

ಪಾವಗಡ ತಿರುಮಣಿಯಲ್ಲಿನ ಸೋಲಾರ್ ಪಾರ್ಕ್ ಅನ್ನು 10 ಸಾವಿರ ಎಕರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

- Advertisement -

ಇಂದು ಇಂಧನ ಸಚಿವ ಕೆ ಜೆ ಜಾರ್ಜ್ ಜೊತೆ ಪಾವಗಡ ಸೋಲಾರ್ ಪಾರ್ಕ್ ವೈಮಾನಿಕ ಸಮೀಕ್ಷೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯೋಜನೆಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸೋಲಾರ್ ಪಾರ್ಕ್‌ಗೆ ಭೂಮಿ ನೀಡಿದ ರೈತರಿಗೆ ಭೂಮಿ ಕೊಟ್ಟಿದ್ದಕ್ಕೆ ಸಮಾಧಾನವಿದೆ. ಅಗ್ರಿಮೆಂಟ್‌ನಂತೆ ಜಮೀನು ನೀಡಿದ ರೈತರ ಖಾತೆಗೆ ಹಣ ಹೋಗುತ್ತಿದೆ, ಪ್ರತಿ ವರ್ಷ ಅವರಿಗೆ 25 ಸಾವಿರ ಬಾಡಿಗೆ ನೀಡಲಾಗುತ್ತಿದೆ ಎಂದು ಶಿವಕುಮಾರ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?:ಬಿಜೆಪಿ ಸರ್ಕಾರದ ಅವಧಿಯ ಬಿಟ್ ಕಾಯಿನ್ ಹಗರಣ ಮರುತನಿಖೆ: ಗೃಹ ಸಚಿವ ಪರಮೇಶ್ವರ್

ಸೋಲಾರ್ ಪಾರ್ಕ್ ವಿಸ್ತರಣೆಗೆ ನಾವು ಸಿದ್ದವಿದ್ದೇವೆ. ಹಿಂದಿನ ನಿಯಮದಂತೆ ರೈತರು ಮುಂದೆ ಬಂದರೆ ಯೋಜನೆ ವಿಸ್ತರಿಸುತ್ತೇವೆ ಎಂದ ಶಿವಕುಮಾರ್, ಈ ಹಿಂದೆ ವಿಶ್ವದಲ್ಲೇ ನಂಬರ್ 1 ಆಗಿದ್ದ ರಾಜ್ಯ ಈಗ ರಾಜಸ್ಥಾನದಿಂದ ಪೈಪೋಟಿ ಎದುರಿಸುತ್ತಿದೆ ಎಂದರು.

ಹಾಗೆಯೇ ರಾಜ್ಯದ ಉದ್ದಗಲಕ್ಕೂ ರೈತರ ಪಂಪ್ ಸೆಟ್‌ಗೆ ಅವರೇ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಕುಸುಮ ಯೋಜನೆ ರೂಪಿಸುತ್ತಿದ್ದೇವೆ. ಈ ಯೋಜನೆ ಸಾಕಾರವಾದರೆ ರೈತರು ಸ್ವಾವಲಂಬಿಗಳಾಗಬಹುದು ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...