ಕೆಪಿಎಸ್​ಸಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ: ಒಂದು ಬಾರಿ ವಯೋಮಿತಿ ಸಡಿಲಿಕೆಗೆ ಅಸ್ತು

Date:

ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಲಿರುವ ಅಧಿಸೂಚನೆ ಪ್ರಕಾರ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಹೊಸ ವರ್ಷದ ಕೊಡುಗೆ ನೀಡಿದೆ.

- Advertisement -

ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿ, ಒಂದು ಬಾರಿಗೆ ಮಾತ್ರ ಅನ್ವಯಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಈ ಮಾಹಿತಿ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“2023-24ನೇ ಸಾಲಿನಲ್ಲಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್​ಸಿ ಹೊರಡಿಸಲಿರುವ ಅಧಿಸೂಚನೆಯಡಿ ಅರ್ಹ ಅಭ್ಯರ್ಥಿಗಳು ಒಂದು ಬಾರಿಗೆ ಮಾತ್ರ ಈ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಕೊರೋನಾ ಸಾಂಕ್ರಾಮಿಕ ಪಿಡುಗು ಹಾಗೂ ನೇಮಕ ವಿಳಂಬದಿಂದ ಅರ್ಹ ಅಭ್ಯರ್ಥಿಗಳು ವಯೋಮಿತಿ ಕಾರಣಕ್ಕೆ ವಂಚಿತರಾಗಲಿದ್ದಾರೆ ಎಂಬ ಆತಂಕವನ್ನು ಸರ್ಕಾರ ಕೊನೆಗಾಣಿಸಿದೆ. ಸಾಮಾನ್ಯ ವರ್ಗ- 35 ರಿಂದ 38, ಪ್ರವರ್ಗ 2ಎ, 2ಬಿ, 3ಎ, 3ಬಿ- 38 ರಿಂದ 41, ಎಸ್​ಟಿ, ಪ್ರವರ್ಗ-1: 40 ರಿಂದ 43 ವರ್ಷಕ್ಕೆ ವಯೋಮಿತಿ ಏರಿಕೆ ಮಾಡಿದೆ” ಎಂದು ಎಚ್.ಕೆ.ಪಾಟೀಲ್ ವಿವರಿಸಿದರು.

ಕನ್ನಡ ಭಾಷಾ ನಾಮಫಲಕ

ನಾಮಫಲಕದಲ್ಲಿ ಶೇ.50 ಕನ್ನಡ, ಉಳಿದ ಶೇ.50 ಅನ್ಯಭಾಷೆಗೆ ಅವಕಾಶ ಕಲ್ಪಿಸಿದ್ದ ನಿಯಮಕ್ಕೆ ತಿದ್ದುಪಡಿ ತಂದು, ಶೇ.60ರಷ್ಟು ಕನ್ನಡ, ಮಿಕ್ಕ ಶೇ.40ರಷ್ಟು ಅನ್ಯ ಭಾಷೆ ಬಳಕೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಸಂಬಂಧಿಸಿದ ನಿಯಮಕ್ಕೆ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024ಕ್ಕೆ ಅನುಮೋದನೆ ನೀಡುವ ಈ ಮೂಲಕ ಕನ್ನಡ ಪರ ಹೋರಾಟಗಾರರನ್ನು ಸಂತೈಸಲು, ನಾಡು-ನುಡಿಗೆ ಕಟಿಬದ್ಧವೆಂಬ ಸಂದೇಶವನ್ನು ಸರ್ಕಾರ ಸಾರಿದೆ.

ಇದನ್ನು ಓದಿದ್ದೀರಾ? ಸಾರಿಗೆ ನಿಗಮಗಳ ₹581 ಕೋಟಿ ಮೋಟಾರು ವಾಹನ ತೆರಿಗೆ ಬಾಕಿ: ವಿನಾಯಿತಿ ನೀಡಿದ ಸಚಿವ ಸಂಪುಟ ಸಭೆ

ವನ್ಯಪ್ರಾಣಿ ಜನ್ಯ ಉತ್ಪನ್ನ: ಹಿಂದಿರುಗಿಸುವ ಗಡುವು ವಿಸ್ತರಣೆ

ರಾಜ್ಯಾದ್ಯಂತ ತೀವ್ರ ವಿವಾದ, ಚರ್ಚೆಗೆ ಗ್ರಾಸವಾಗಿದ್ದ ವನ್ಯಪ್ರಾಣಿ ಜನ್ಯ ಉತ್ಪನ್ನಗಳ ವಿಷಯದಲ್ಲಿ ಅಂತಿಮ ತೆರೆ ಎಳೆಯಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಈ ಉತ್ಪನ್ನಗಳನ್ನು ಸರ್ಕಾರಕ್ಕೆ ಆದ್ಯಾರ್ಪಣೆ (ಸರೆಂಡರ್) ಅವಧಿಯನ್ನು ಮೂರು ತಿಂಗಳ ಕಾಲ ವಿಸ್ತರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

ಹುಲಿ ಉಗುರು, ಆನೆದಂತ ಇತ್ಯಾದಿ ವನ್ಯಜೀವಿಗಳ ಉತ್ಪನ್ನಗಳನ್ನು ತಮ್ಮ ಬಳಿ ಇಟ್ಟುಕೊಂಡವರು ಸ್ವಯಂಪ್ರೇರಿತವಾಗಿ ಸರ್ಕಾರಕ್ಕೆ ಒಪ್ಪಿಸಲು ಮತ್ತಷ್ಟು ಕಾಲಾವಕಾಶ ದೊರೆತಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...