ಸರ್ಕಾರ ತರಾತುರಿಯಲ್ಲಿ ಮೀಸಲಾತಿ ಪರಿಷ್ಕರಿಸಿದೆ: ಸಿದ್ದರಾಮಯ್ಯ

Date:

Advertisements
  • ಸರ್ಕಾರದ ನಾಲ್ಕು ವರ್ಷದ ಮೌನ ಪ್ರಶ್ನಿಸಿದ ಸಿದ್ದರಾಮಯ್ಯ
  • ಕಾಂಗ್ರೆಸ್ ನಾಯಕರ ಸಭೆ ಬಳಿಕ ಎರಡನೇ ಪಟ್ಟಿ ಬಿಡುಗಡೆ

ನೂತನ ಮೀಸಲಾತಿ ಜಾರಿ ನಿರ್ಧಾರ ಕುರಿತಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿದ್ದರಾಮಯ್ಯ “ಸರ್ಕಾರ ತರಾತುರಿಯಲ್ಲಿ ಅವೈಜ್ಞಾನಿಕವಾಗಿ ಮೀಸಲಾತಿ ಪರಿಷ್ಕರಣೆ ಮಾಡಿದೆ. ಸರ್ಕಾರಕ್ಕೆ ಮೀಸಲಾತಿ ಕೊಡುವ ಉದ್ದೇಶ ಇದ್ದರೆ ಅಧ್ಯಯನ ಮಾಡಿ ಸಂವಿಧಾನಬದ್ಧವಾಗಿ ನೀಡುತ್ತಿದ್ದರು” ಎಂದು ಕುಟುಕಿದ್ದಾರೆ.

”ಒಳಮೀಸಲಾತಿ ವಿಚಾರವಾಗಿ 4 ವರ್ಷದಿಂದ ಸುಮ್ಮನಿದ್ದ ರಾಜ್ಯ ಸರ್ಕಾರ ಚುನಾವಣೆ ಬಂದಾಗ ಓಟಿಗಾಗಿ ಕೊನೆ ಗಳಿಗೆಯಲ್ಲಿ ಜಾರಿ ಮಾಡಿದೆ” ಎಂದು ಹೇಳಿದ್ದಾರೆ.

Advertisements

“ನ್ಯಾ. ನಾಗಮೋಹನ್ ದಾಸ್‌ ಅವರ ಸಮಿತಿ ರಚನೆಯಾಗಿರುವುದು ಸಮ್ಮಿಶ್ರ ಸರ್ಕಾರ ಇದ್ದಾಗ. ವರದಿ ಸಲ್ಲಿಕೆಯಾಗಿರುವುದು 2020ರಲ್ಲಿ. ಆದರೆ, ಮೀಸಲಾತಿ ಜಾರಿಯ ನಿರ್ಧಾರ ತೆಗೆದುಕೊಂಡಿದ್ದು ಮಾತ್ರ 2023ರಲ್ಲಿ” ಎಂದು ಕುಹಕವಾಡಿದ್ದಾರೆ.

“ವರದಿ ಸಲ್ಲಿಕೆಯಾದ ಬಳಿಕ ಮೂರು ವರ್ಷಗಳ ಕಾಲ ಸರ್ಕಾರ ಏನು ಮಾಡುತ್ತಿತ್ತು. ಸರ್ಕಾರ ಈಗ ತೆಗೆದುಕೊಂಡಿರುವ ನಿರ್ಧಾರದ ಪ್ರಕಾರ, ಮೀಸಲಾತಿ ಪ್ರಮಾಣ 56%ಕ್ಕೆ ಏರಿಕೆಯಾಗಿದೆ. ಇದು ಸುಪ್ರೀಂಕೋರ್ಟ್‌ ಆದೇಶದ ಉಲ್ಲಂಘನೆ” ಎಂದು ಹೇಳಿದ್ದಾರೆ.

“ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವ ಕೆಲಸವನ್ನು ಸರ್ಕಾರ ಮಾಡಿದೆಯಾ? ಹೀಗಿದ್ದಾಗ ಇದು ಊರ್ಜಿತವಾಗುತ್ತದಾ? ಒಟ್ಟಾರೆಯಾಗಿ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ವರ್ಗದ ಜನರಿಗೆ ಮೋಸ ಮಾಡಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇದು ಯೋಗಿಯ ಉತ್ತರ ಪ್ರದೇಶವಲ್ಲ: ಪ್ರಿಯಾಂಕ್‌ ಖರ್ಗೆ

“ಮುಸ್ಲಿಮರಿಗೆ ನೀಡುತ್ತಿದ್ದ 2ಬಿ ಮೀಸಲಾತಿಯನ್ನು ಏಕೆ ಸರ್ಕಾರ ರದ್ದು ಮಾಡಿದೆ. ಚಿನ್ನಪ್ಪ ರೆಡ್ಡಿ ಅವರ ಸಮಿತಿಯ ವರದಿ ಆಧರಿಸಿ ಈ ಮೀಸಲಾತಿ ನೀಡಲಾಗಿತ್ತು. ಈಗ ಮೀಸಲಾತಿಯನ್ನು ತೆಗೆದುಹಾಕಿದರೆ ಅದು ಸೇಡಿನ ರಾಜಕಾರಣವಾಗಲ್ವಾ?” ಎಂದು ಪ್ರಶ್ನಿಸಿದ್ದಾರೆ.

“ಹಿಂದೆಯೆಲ್ಲ ಮೀಸಲಾತಿ ಜಾರಿ ಮಾಡುವಾಗ ಜೇನುಗೂಡಿಗೆ ಕೈಹಾಕಿ ಮಾಡಿದ್ದ? ಬೊಮ್ಮಾಯಿ ಅವರ ಸರ್ಕಾರ ಏನು ಹೊಸದಾಗಿ ಮೀಸಲಾತಿ ಜಾರಿ ಮಾಡಿದ್ದ? ಕೆಟಗರಿ 1, 2ಎ, 2ಬಿ, 3ಎ, 3ಬಿ ಇವುಗಳೆಲ್ಲ ಬೊಮ್ಮಾಯಿ ಅವರ ಸರ್ಕಾರದ ಕಾಲದಲ್ಲಿ ಮಾಡಿದ್ದ? ಹಿಂದೆಲ್ಲಾ ಮೀಸಲಾತಿ ನೀಡಿಲ್ವಾ?” ಎಂದು ಕುಟುಕಿದ್ದಾರೆ.

ಕಾಂಗ್ರೆಸ್‌ನ ಎರಡನೇ ಪಟ್ಟಿ ಕುರಿತು ಮಾತನಾಡಿರುವ ಸಿದ್ದರಾಮಯ್ಯ, “ನಾಡಿದ್ದು ಕೇಂದ್ರ ಚುನಾವಣಾ ಸಮಿತಿ ಸಭೆ ಇದೆ. ಈ ಸಭೆಯ ನಂತರ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

“ನಾನು ಕೋಲಾರದಿಂದ ಸ್ಪರ್ಧೆ ಮಾಡುವ ವಿಚಾರವನ್ನು ಹೈಕಮಾಂಡ್‌ ತೀರ್ಮಾನ ಮಾಡಬೇಕಿದೆ. ನಾಡಿದ್ದು ನಡೆಯುವ ಸಭೆಯಲ್ಲಿ ತೀರ್ಮಾನ ಆಗಬಹುದು” ಎಂದಿದ್ದಾರೆ.

ವರುಣಾ ಕ್ಷೇತ್ರದ ಕುರಿತು ಮಾತನಾಡಿರುವ ಅವರು, “ಯಾರನ್ನು ಯಾರಿಂದಲೂ ಕಟ್ಟಿಹಾಕಲು ಆಗಲ್ಲ. ಒಬ್ಬರನ್ನು ಸೋಲಿಸುವುದು ಗೆಲ್ಲಿಸುವುದು ಜನರ ಕೈಲಿದೆ. ನಾನು ನಾಮಪತ್ರ ಸಲ್ಲಿಕೆಗೆ ಮಾತ್ರ ವರುಣಾಗೆ ಹೋಗುತ್ತೇನೆ” ಎಂದು ಹೇಳಿದ್ದಾರೆ.

ಯತೀಂದ್ರ ಅವರು ಅಲ್ಲಿನ ಹಾಲಿ ಶಾಸಕರು. ಅವರು ಕೂಡ ಅಲ್ಲಿ ನನ್ನ ಪರವಾಗಿ ಕೆಲಸ ಮಾಡುತ್ತಾರೆ. ಚುನಾವಣೆಯಲ್ಲಿ ನನ್ನ ಎದುರಾಳಿ ಯಾರು ಎಂಬ ಬಗ್ಗೆ ಯೋಚನೆ ಮಾಡಲು ಹೋಗಲ್ಲ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

Download Eedina App Android / iOS

X