SSLCಯಲ್ಲಿ 60%ಗಿಂತ ಕಡಿಮೆ ಸಾಧನೆ; DDPIಗಳಿಗೆ ಸರ್ಕಾರ ನೋಟಿಸ್‌

Date:

Advertisements

2024-25ನೇ ಶೈಕ್ಷಣಿಕ ವರ್ಷದಲ್ಲಿ 60%ಗಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಶನಿವಾರ, ಶಿಕ್ಷಣ ಇಲಾಖೆಯ ಪ್ರಗತಿಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಸಿಇಒಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. “ಎಸ್‌ಎಸ್‌ಎಲ್‌ಸಿಯಲ್ಲಿ ಫಲಿತಾಂಶ ಕಡಿಮೆ ಬಂದಿರುವುದಕ್ಕೆ ಶಿಕ್ಷಕರು ಮತ್ತು ಸಿಬ್ಬಂದಿ ಕೊರತೆ ಎಂದು ನೆಪ ಹೇಳಬೇಡಿ. 60%ಗಿಂತ ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ ನೀಡಬೇಕು. ಡಿಡಿಪಿಐಗಳ ಉತ್ತರ ಸಮರ್ಪಕವಾಗಿ ಇಲ್ಲದಿದ್ದರೆ, ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಶಿಕ್ಷಕರು ಮತ್ತು ಡಿಡಿಪಿಐಗಳು ಆಸಕ್ತಿಯಿಂದ ಕೆಲಸ ಮಾಡಬೇಕು. ಅವರು ಕೆಲಸ ಮಾಡಿದರೆ, ಎಲ್ಲ ಕಡೆಯೂ ಉತ್ತಮ ಫಲಿತಾಂಶವೇ ಬರುತ್ತದೆ. ಡಿಡಿಪಿಐಗಳು ಜವಾಬ್ದಾರಿ ತೆಗೆದುಕೊಂಡು, ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು” ಎಂದು ತಾಕೀತು ಮಾಡಿದ್ದಾರೆ.

Advertisements

“ಬಿಇಒಗಳು ಮತ್ತು ಡಿಡಿಪಿಐಗಳು ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಾರೆಯೇ ಎಂಬ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗುತ್ತಿದೆ. ಎಲ್ಲ ರೀತಿಯ ಸೌಲಭ್ಯ ಕೊಟ್ಟರೂ ದಾಖಲಾತಿ ಕುಸಿಯಲು ಕಾರಣವೇನು ಎಂಬುದನ್ನು ಕಂಡುಕೊಳ್ಳಬೇಕು. ಪರಿಹರಿಸಬೇಕು. ಮಕ್ಕಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದಂತೆ ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ನೆಪಗಳು ಮುಖ್ಯವಲ್ಲ, ಫಲಿತಾಂಶ ಮುಖ್ಯ. ಪ್ರಾಮಾಣಿಕ ಪ್ರಯತ್ನಕ್ಕೆ ಪ್ರಾಮಾಣಿಕ ಫಲಿತಾಂಶವೂ ದೊರೆಯುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X