ಅದಾನಿ ಅಕ್ರಮ | ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ‘ದೇಶದ ಅತಿದೊಡ್ಡ ಹಗರಣ’ ಮುಚ್ಚಿಹಾಕಲಾಗದು: ಕಾಂಗ್ರೆಸ್

Date:

ಅದಾನಿ ಗ್ರೂಪ್ ಷೇರುಗಳನ್ನು ಹೊಂದಿರುವ ಎರಡು ವಿದೇಶಿ ಫಂಡ್‌ಗಳಿಗೆ ಸೆಬಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಈ ಸುದ್ದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್, ಮೇಲ್ನೋಟಕ್ಕೆ ತನಿಖೆ ಪ್ರಗತಿಯಲ್ಲಿರುವಂತೆ ಕಾಣಬಹುದು. ಆದರೆ ತನಿಖೆ ಎರಡು ವರ್ಷಗಳಿಗೂ ಅಧಿಕ ಕಾಲ ವಿಳಂಬವಾಗಿದೆ. ಈ ವಿಳಂಬದಿಂದ ಸಮೂಹ ಸಂಸ್ಥೆಯು ಲಾಭ ಪಡೆಯುತ್ತಿದೆ ಎಂದು ಟೀಕಿಸಿದೆ.

- Advertisement -

ಆದರೆ ಈ ವರದಿ ಬಗ್ಗೆ ಸೆಬಿ ಅಥವಾ ಅದಾನಿ ಗ್ರೂಪ್ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. “ಡಬಲ್-ಎಂಜಿನ್- ಮೋದಾನಿ (ಮೋದಿ-ಅದಾನಿ) ಕಥೆ ಮುಂದುವರೆದಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಮೋದಾನಿ | ಮಹಾರಾಷ್ಟ್ರ ಸಿಎಂ ಫಡ್ನವೀಸ್ ಭೇಟಿಯಾದ ಅದಾನಿ

“ಷೇರುದಾರರ ವಿವರಗಳನ್ನು ಒದಗಿಸಲು ವಿಫಲವಾದ ಎಲಾರಾ ಕ್ಯಾಪಿಟಲ್‌ನ ನಿಯಂತ್ರಣದಲ್ಲಿರುವ ಎರಡು ಮಾರಿಷಸ್ ಮೂಲದ ವಿದೇಶಿ ಫಂಡ್‌ಗಳಾದ ಎಲಾರಾ ಇಂಡಿಯಾ ಆಪರ್ಚುನಿಟೀಸ್ ಫಂಡ್ ಮತ್ತು ವೆಸ್ಪೆರಾ ಫಂಡ್‌ಗೆ ಸೆಬಿ ದಂಡ ಮತ್ತು ಪರವಾನಗಿ ರದ್ದತಿಗೆ ಬೆದರಿಕೆ ಹಾಕಿದೆ ಎಂದು ವರದಿಯಾಗಿದೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಫಂಡ್‌ಗಳು ‘ಸ್ಟಾಕ್ ಪಾರ್ಕಿಂಗ್’ ನಡೆಸಿದ ಆರೋಪವನ್ನು ಹೊಂದಿವೆ. ಸೆಬಿ ನಿಯಮಗಳನ್ನು ಉಲ್ಲಂಘಿಸಿ ತಮ್ಮದೇ ಕಂಪನಿಗಳಲ್ಲಿ ಬೇನಾಮಿ ಅದಾನಿ ಹೂಡಿಕೆಗಳನ್ನು ಮಾಡಲಾಗಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

“ತಪ್ಪನ್ನು ಒಪ್ಪಿಕೊಳ್ಳದೆ ಮತ್ತು ಟೋಕನ್ ಶುಲ್ಕವನ್ನು ಪಾವತಿಸದೆಯೇ ಈ ವಿಷಯವನ್ನು ಇತ್ಯರ್ಥಪಡಿಸಿಕೊಳ್ಳಲು ಈ ಎರಡೂ ಫಂಡ್‌ಗಳು ಮುಂದಾಗಿವೆ ಎಂದು ವರದಿಯಾಗಿದೆ. ಇದು ಮೋದಾನಿಗೆ ಅನುಕೂಲಕರ ಕ್ರಮ” ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಮೋದಾನಿ’ ಬಣ್ಣ ಬಯಲು ಮಾಡಿದ್ದಕ್ಕೆ ನಂಬಲಸಾಧ್ಯ ವೇಗದಲ್ಲಿ ಮೊಯಿತ್ರಾ ಉಚ್ಚಾಟನೆ: ನಟ ಕಿಶೋರ್ ಕಿಡಿ

2022ರ ಡಿಸೆಂಬರ್‌ನಲ್ಲಿ ಇಂಡಿಯಾ ಆಪರ್ಚುನಿಟೀಸ್ ಫಂಡ್‌ನ ಶೇಕಡ 98.78ರಷ್ಟು ಬಂಡವಾಳವನ್ನು ಮೂರು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಲಾಗಿತ್ತು. 2022ರ ಜೂನ್‌ನಲ್ಲಿ ವೆಸ್ಪೆರಾದ ಶೇಕಡ 93.9ರಷ್ಟು ಮೊತ್ತವನ್ನು ಅದಾನಿ ಎಂಟರ್‌ಪ್ರೈಸಸ್‌ನಲ್ಲಿ ಹೂಡಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.

“ಸೆಬಿಯ ಕ್ರಮಗಳು ಮೇಲ್ನೋಟಕ್ಕೆ ತನಿಖೆ ಪ್ರಗತಿಯಲ್ಲಿ ಇರುವಂತೆ ಕಾಣಿಸಬಹುದು. ಸುಪ್ರೀಂ ಕೋರ್ಟ್ ಈ ತನಿಖೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬೇಕೆಂದು ಆದೇಶಿಸಿತ್ತು. ಆದರೆ ತನಿಖೆಯು ಎರಡು ವರ್ಷಗಳಿಗಿಂತ ಹೆಚ್ಚು ಕಾಲ ವಿಳಂಬವಾಗಿದೆ. ಈ ವಿಳಂಬದಿಂದ ಲಾಭ ಪಡೆದವರು ಮೋದಾನಿ” ಎಂದು ದೂರಿದರು.

“ಭಾರತದ ಅತಿದೊಡ್ಡ ಹಗರಣವನ್ನು ಮುಚ್ಚಿಹಾಕಲು ಸರ್ಕಾರ ಎಷ್ಟೇ ಪ್ರಯತ್ನಿಸಿದರೂ, ಸತ್ಯ ಹೊರಬರುತ್ತಿದೆ. ದೇಶ ರಾಜಿ ಮಾಡಿಕೊಂಡ ಸಂಸ್ಥೆಗಳ ಮೂಲಕವಲ್ಲದಿದ್ದರೂ, ವಿದೇಶಿ ನ್ಯಾಯವ್ಯಾಪ್ತಿಯ ಮೂಲಕ ಎಲ್ಲವೂ ಬಹಿರಂಗವಾಗಲಿದೆ. ಮೋದಾನಿ ಲಂಚ ನೀಡಲು, ಬೆದರಿಸಲು ಅಥವಾ ಸಹಕರಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಅಮೆರಿಕ ಮೂಲದ ಹಿಂಡನ್‌ಬರ್ಗ್ ರಿಸರ್ಚ್ ಕೈಗಾರಿಕೋದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಂಸ್ಥೆಗಳು ಮಾಡಿದ ಹಲವು ವಂಚನೆಗಳನ್ನು ಬಯಲಿಗೆ ಎಳೆದಿತ್ತು. ಅದಾದ ಬಳಿಕ ಷೇರುಪೇಟೆಯಲ್ಲಿ ಅದಾನಿ ಷೇರುಗಳು ಭಾರೀ ಕುಸಿದಿದೆ. ಈ ನಡುವೆ ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...