5, 8 ಹಾಗೂ 9ನೇ ತರಗತಿಗಳ ಪಬ್ಲಿಕ್ ಪರೀಕ್ಷೆ‌ ಮುಂದೂಡಿ ಸರ್ಕಾರ ಆದೇಶ

Date:

ಮಾರ್ಚ್‌ 13ರಂದು ಬುಧವಾರ ನಡೆಯಬೇಕಿದ್ದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8 ಹಾಗೂ 9ನೇ ತರಗತಿಗಳ ಪರೀಕ್ಷೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಹೈಕೋರ್ಟ್‌ ತಡೆಯಾಜ್ಞೆ ಮತ್ತು ತೆರವಿನ ಬಳಿಕ ಸೋಮವಾರದಿಂದ ಆರಂಭವಾಗಿದ್ದ 5, 8 ಹಾಗೂ 9ನೇ ತರಗತಿ ಬೋರ್ಡ್‌ ಪರೀಕ್ಷೆಗಳಿಗೆ ಸುಪ್ರೀಂಕೋರ್ಟ್‌ ಮತ್ತೆ ತಡೆಯಾಜ್ಞೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಡ್ಡಾಯ ಶಿಕ್ಷಣ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಆಧಾರದ ಮೇಲೆ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸಾ) 5, 8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆಯನ್ನು ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದ ವಿಚಾರಣೆ ನಡೆಸಿದ ರಾಜ್ಯ ಹೈಕೋರ್ಟ್‌, ಕಳೆದ ಗುರುವಾರ ಪರೀಕ್ಷೆಗೆ ನಾಲ್ಕು ದಿನ ಇರುವಾಗ ರದ್ದು ಆದೇಶ ನೀಡಿತ್ತು.

ರಾಜ್ಯ ಸರ್ಕಾರ ತೀರ್ಪು ಪುನರ್‌ ಪರಿಶೀಲನೆ ಕೋರಿ ರಿಟ್‌ ಸಲ್ಲಿಸಿತ್ತು. ಮಾರನೇ ದಿನವೇ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪರೀಕ್ಷೆಗೆ ಎಲ್ಲಾ ತಯಾರಿ ಮಾಡಿಕೊಂಡಿರುವ ಅಂಶವನ್ನು ಪರಿಗಣಿಸಿ, ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಆದರೆ, ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ರುಪ್ಸಾ, ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ವಿಚಾರಣೆ ಪೂರ್ಣಗೊಳ್ಳುವವರೆಗೆ ಪರೀಕ್ಷೆ ತಡೆ ಹಿಡಿಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಸುಪ್ರೀಂಕೋರ್ಟ್‌ ಆದೇಶದ ಬೆನ್ನಲ್ಲೇ, ರಾಜ್ಯ ಸರ್ಕಾರ ಪರೀಕ್ಷೆಗಳನ್ನು ಮುಂದೂಡಿ ಸುತ್ತೋಲೆ ಹೊರಡಿಸಿದೆ.

ಆದೇಶ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...

ಉಪಚುನಾವಣೆ: ನಂದಿಗ್ರಾಮ, ನಗಾಂವ್‌ ಫಲಿತಾಂಶದತ್ತ ಎಲ್ಲರ ಚಿತ್ತ

ಅಸ್ಸಾಂನ ಒಂದು ಲೋಕಸಭಾ ಕ್ಷೇತ್ರ ಮತ್ತು ಪಶ್ಚಿಮ ಬಂಗಾಳ, ತಮಿಳುನಾಡು, ಕೇಂದ್ರಾಡಳಿತ...