ಪ್ರಯಾಣಿಕರ ಸುರಕ್ಷತೆಗಾಗಿ ವಾಹನಗಳಲ್ಲಿ ಪ್ಯಾನಿಕ್ ಬಟನ್ ಕಡ್ಡಾಯ: ಸರ್ಕಾರ ಆದೇಶ

Date:

Advertisements
  • ಡಿ. 1ರಿಂದ ಆದೇಶ ಜಾರಿ, 2024ರ ನ.30ರವರೆಗೆ ಅಳವಡಿಕೆಗೆ ಅವಕಾಶ
  • ಪ್ಯಾನಿಕ್ ಬಟನ್ ಅಳವಡಿಸಲು 7,599 ರೂ. ನಿಗದಿ ಮಾಡಿದ ಸರ್ಕಾರ

ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಸಾರ್ವಜನಿಕ ಸೇವೆ ಇರುವ ಖಾಸಗಿ ವಾಹನಗಳಿಗೆ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಈ ಹಿನ್ನೆಲೆಯಲ್ಲಿ ಟ್ಯಾಕ್ಸಿ, ಕ್ಯಾಬ್‌ ಸೇರಿದಂತೆ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್‌ ಡಿವೈಸ್ (ವಿಎಲ್​ಟಿ) ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಿಸೆಂಬರ್‌ 1ರಿಂದ ಈ ಆದೇಶ ಜಾರಿಗೆ ಬರಲಿದೆ. ಆದರೆ, 2024ರ ನವೆಂಬರ್‌ 30ರವರೆಗೆ ಅಳವಡಿಕೆಗೆ ಅಂದರೆ ಒಂದು ವರ್ಷ ಅವಧಿಯ ಅವಕಾಶ ನೀಡಿದೆ. ಈ ಕೆಲಸ ಶೀಘ್ರವಾಗಿ ಆಗಬೇಕಿರುವುದರಿಂದ ಆರ್​ಟಿಒಗಳಲ್ಲಿ ಈ ಯೋಜನೆಗೆ ಒಳಪಡುವ ವಾಹನಗಳಿಗೆ ಮಾತ್ರ ಎಫ್.ಸಿ ನವೀಕರಣಕ್ಕೆ ಸೂಚನೆ ನೀಡಲಾಗಿದೆ.

Advertisements

ಪ್ಯಾನಿಕ್ ಬಟನ್ ಒಳಗೊಂಡ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಅಳವಡಿಸಲು 7,599 ರೂ. ನಿಗದಿ ಮಾಡಲಾಗಿದೆ. ಡಿಸೆಂಬರ್ 1 ರಿಂದಲೇ ಈ ಯೋಜನೆ ಪ್ರಾರಂಭವಾಗಲಿದೆ. ಒಂದು ವರ್ಷದೊಳಗೆ(30/11/24) ಪರ್ಮಿಟ್ ವಾಹನಗಳು ಈ ಸಾಧನಗಳನ್ನು ಅಳವಡಿಸಿರಬೇಕು. ಇಲ್ಲವಾದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಡಿವೈಸ್ ಅಳವಡಿಕೆ ಮಾಡದಿದ್ದರೆ ಎಫ್ ಸಿ ನವೀಕರಣವಾಗುವುದಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.

ರಾಜ್ಯ ಮತ್ತ ಕೇಂದ್ರ ಸರ್ಕಾರದ 60:40 ಅನುಪಾತದ ಸಹಭಾಗಿತ್ವದಲ್ಲಿ ಸಾರ್ವಜನಿಕ ಸೇವಾ ವಾಹನಗಳಲ್ಲಿ ಈ ಡಿವೈಸ್ ಅಳವಡಿಕೆಗೆ ಒಪ್ಪಿಗೆ ನೀಡಲಾಗಿದೆ. ವಾಹನ ಮಾಲೀಕರು ಅರ್ಹ ಕಂಪನಿಗಳಿಂದ ಪ್ಯಾನಿಕ್ ಬಟನ್ ಅಳವಡಿಸಬೇಕು ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

ಎಂತಹ ವಾಹನಗಳಿಗೆ ಇದು ಕಡ್ಡಾಯ?

ಎಲ್ಲ ರೀತಿಯ ಸಾರ್ವಜನಿಕ ಸೇವಾ ವಾಹನಗಳು ಅಂದರೆ ಹಳದಿ ನಂಬರ್‌ ಪ್ಲೇಟ್‌ನ ಟ್ಯಾಕ್ಸಿಗಳು, ಕ್ಯಾಬ್​ಗಳು, ಖಾಸಗಿ ಬಸ್​ಗಳು, ನ್ಯಾಷನಲ್ ಪರ್ವಿುಟ್ ಹೊಂದಿರುವ ಗೂಡ್ಸ್ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದೆ.

ಪ್ಯಾನಿಕ್ ಬಟನ್ ಕೆಲಸ ಹೇಗೆ?

ವಿಎಲ್​ಟಿ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಯ ನಂತರ ಮಾನಿಟರಿಂಗ್ ನಕ್ಷೆಯಲ್ಲಿ ವಾಹನದ ಲೊಕೇಷನ್‌ ಟ್ರ್ಯಾಕಿಂಗ್‌ ಆರಂಭವಾಗುತ್ತದೆ. ಇದು ನಿರ್ಬಂಧಿತ ಪ್ರದೇಶ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಅತಿ ವೇಗದ ಎಚ್ಚರಿಕೆ ಕೂಡ ಕೊಡಲಿದೆ.

ಪ್ಯಾನಿಕ್ ಬಟನ್ ಇರುವ ವಾಹನಗಳಲ್ಲಿ ಪ್ರಯಾಣಿಸುವಾಗ ಆರೋಗ್ಯದಲ್ಲಿ ಏರುಪೇರು, ಲೈಂಗಿಕ ದೌರ್ಜನ್ಯ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ಯಾನಿಕ್ ಬಟನ್ ಒತ್ತಿದರೆ ಕಮಾಂಡ್ ಸೆಂಟರ್​ಗೆ ಎಚ್ಚರಿಕೆ ಸಂದೇಶ ರವಾನೆಯಾಗುತ್ತದೆ. ಇದರಿಂದ ಕಮಾಂಡ್ ಸೆಂಟರ್ ವಾಹನದ ಲೊಕೇಷನ್‌ ಸಮೇತವಾಗಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಿದ್ದು ಇದರಿಂದ ಸಂಭವಿಸಬಹುದಾದ ಅನಾಹುತ ತಡೆಯಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X