ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ: ಸಿಎಂ ಸಿದ್ದರಾಮಯ್ಯ

Date:

Advertisements
  • ‘ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು’
  • ‘ಗ್ರಾಮಗಳ ಅಭಿವೃದ್ದಿ ಇಲ್ಲದೇ ದೇಶದ ಅಭಿವೃದ್ಧಿ ಅಸಾಧ್ಯ ‘

ಮಹಾತ್ಮಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣ ಆಶಯದಂತೆ ಗ್ರಾಮ ನ್ಯಾಯಾಲಯಗಳ ಸ್ಥಾಪನೆಯಾದರೆ ಗ್ರಾಮಸ್ಥರಿಗೆ ಬಹಳ ಅನುಕೂಲ ಆಗುತ್ತದೆ ಎಂದು ಹೇಳಿದ್ದರು. ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.

‘ಖಾದಿ-ಗ್ರಾಮೋದ್ಯೋಗ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದು. ಮತ್ತು ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಇದೇ ವೇಳೆ ಭರವಸೆ ನೀಡಿದರು.

Advertisements

“ಮಹಾತ್ಮ ಗಾಂಧಿ ಅವರ ಕನಸಿನ ಅಧಿಕಾರ ವಿಕೇಂದ್ರೀಕರಣ ಮತ್ತು ಮಹಿಳಾ ಮೀಸಲಾತಿಗೆ ಮುನ್ನುಡಿ ಬರೆದು, ಸಂವಿಧಾನಕ್ಕೆ ತಿದ್ದುಪಡಿ ತಂದವರು ರಾಜೀವ್ ಗಾಂಧಿ ಮತ್ತು ಇದನ್ನು ಜಾರಿ ಮಾಡಿದವರು ಮಾಜಿ ಪ್ರಧಾನಿ ನರಸಿಂಹರಾವ್” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಂಚಿಗೆ ಸರಿದ ಗಾಂಧಿ ; ಕ್ಷಯಪೀಡಿತ ಗ್ರಾಮ ಭಾರತ : ಕೆ ಪಿ ಸುರೇಶ್ ಬರೆಹ

“ಅಧಿಕಾರ ವಿಕೇಂದ್ರೀಕರಣ ಗಾಂಧಿಯವರ ಕನಸಾಗಿತ್ತು. ಇದರಿಂದ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಂಬಿದ್ದರು. ಹೀಗಾಗಿ ಗ್ರಾಮ ಸ್ವರಾಜ್ಯವನ್ನು ಪ್ರತಿಪಾದಿಸಿದರು.
ಗ್ರಾಮಗಳ ಅಭಿವೃದ್ದಿ ಇಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ ಎನ್ನುವುದು ಗಾಂಧೀಜಿಯವರ ನೀತಿಯಾಗಿತ್ತು” ಎಂದರು.

“ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್‌ಗಳಲ್ಲಿ ಶೇ.50 ಮೀಸಲಾತಿ ಜಾರಿಗೆ ಆಗಲು ಕಾರಣ ಆದವರು ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್. ಈಗ ಕೇಂದ್ರ ಸರ್ಕಾರ ಜಾರಿ ಮಾಡಿದ್ದೀವಿ ಎಂದು ಹೇಳಿಕೊಳ್ಳುತ್ತಿರುವ ಮಹಿಳೆಯರ ರಾಜಕೀಯ ಮೀಸಲಾತಿಗೆ ಮುನ್ನುಡಿ ಬರೆದದ್ದು ಕಾಂಗ್ರೆಸ್. ಈಗ ಹಿಂದುಳಿದ ವರ್ಗಗಳ ಮಹಿಳೆಯರಿಗೂ ಮೀಸಲಾತಿ ಕಲ್ಪಿಸಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ” ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಸೇರಿ ಹಲವು ಮುಖಂಡರು ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X