ಜಾತಿ ಗಣತಿ | ವರದಿ ಅಂಗೀಕಾರಕ್ಕೆ ಲೋಕಸಭೆ ಚುನಾವಣೆವರೆಗೂ ಕಾಯುವುದೇ ಸರ್ಕಾರ?

Date:

Advertisements
2014ರಲ್ಲಿ ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿ ಸಮೀಕ್ಷೆ ನಡೆಸುವಂತೆ ನಿರ್ದೇಶಿಸಿತ್ತು. ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಅರ್ಹರಾಗಿರುವ ಸಮುದಾಯಗಳನ್ನು ಪಟ್ಟಿ ಮಾಡಲು ಸೂಚಿಸಿತ್ತು.

ಕಾಂತರಾಜ್ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ-ಆರ್ಥಿಕ ಜಾತಿ ಸಮೀಕ್ಷೆ ವರದಿಯ ಪ್ರಸ್ತಾವನೆಗಳನ್ನು ಅಂಗೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಆದರೂ, ವರದಿಯನ್ನು ಅಂಗೀಕರಿಸುವ ಪ್ರಕ್ರಿಯೆಯು ವಿಳಂಬವಾಗುವ ಸಾಧ್ಯತೆಯಿದೆ.

ಕಾನೂನು ತೊಡಕುಗಳು ಮತ್ತು ರಾಜಕೀಯ ಒತ್ತಾಯಗಳು ಸೇರಿದಂತೆ ಹಲವು ಕಾರಣಗಳಿಂದಾಗಿ ವರದಿ ಅಂಗೀಕಾರ ವಿಳಂಬವಾಗಬಹುದು. ಅಲ್ಲದೆ, ಲೋಕಸಭೆ ಚುನಾವಣೆ ಮುಗಿಯುವವರೆಗೆ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಹಿರಿಯ ಕಾಂಗ್ರೆಸ್‌ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

“ಕಾಂತರಾಜ್ ಆಯೋಗದ ವರದಿಯನ್ನು ಬಿಡುಗಡೆ ಮಾಡಲು ಮತ್ತು ಅದರ ಶಿಫಾರಸುಗಳನ್ನು ಜಾರಿಗೊಳಿಸಲು ನಾವು ನಮ್ಮ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೇವೆ. ನಾವು ಅದನ್ನು ಅನುಷ್ಠಾನಕ್ಕೆ ತರಲು ಬದ್ಧರಾಗಿದ್ದೇವೆ” ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹೇಳಿದ್ದಾರೆ.

Advertisements

“ಸದ್ಯಕ್ಕೆ, ಈಗ ಗಮನವು ರಾಜ್ಯ ಬಜೆಟ್ ಮೇಲೆ ಕೇಂದ್ರೀಕೃತವಾಗಿದೆ. ಮುಂದಿನ ತಿಂಗಳು ವಿಧಾನಮಂಡಲ ಅಧಿವೇಶನ ಮುಗಿದ ನಂತರ, ಮುಖ್ಯಮಂತ್ರಿಗಳು ವರದಿಯನ್ನು ಕೈಗೆತ್ತಿಕೊಳ್ಳಲಿದ್ದಾರೆ. ವರದಿಯ ಜಾರಿಗೆ ಎದುರಾಗುವ ಕಾನೂನಾತ್ಮಕ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಗಮನಹರಿಸಬೇಕು. ಈ ಪ್ರಕ್ರಿಯೆಯು ಸಮಯ ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

2014ರಲ್ಲಿ, ಅಂದಿನ ಸಿದ್ದರಾಮಯ್ಯ ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿ ಸಮೀಕ್ಷೆಯನ್ನು ನಡೆಸುವಂತೆ ನಿರ್ದೇಶಿಸಿತ್ತು. ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಅರ್ಹರಾಗಿರುವ ಸಮುದಾಯಗಳನ್ನು ಪಟ್ಟಿ ಮಾಡಲು ಸೂಚಿಸಿತ್ತು. ಸಮೀಕ್ಷೆಗಾಗಿ 162 ಕೋಟಿ ರೂ. ಖರ್ಚು ಮಾಡಲಾಗಿತ್ತು. ಆಯೋಗದ ಅಧ್ಯಕ್ಷ ಎಚ್‌ ಕಾಂತರಾಜ್‌ ನೇತೃತ್ವದಲ್ಲಿ 2016ರಲ್ಲಿ ವರದಿ ಸಿದ್ಧಗೊಂಡಿತ್ತು. ಆದರೆ, ಪ್ರಬಲ ಸಮುದಾಯಗಳಾದ ಲಿಂಗಾಯತರು ಮತ್ತು ಒಕ್ಕಲಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಮತ್ತಿತರ ರಾಜಕೀಯ ಕಾರಣಗಳಿಗಾಗಿ ವರದಿಯನ್ನು ಸ್ವೀಕರಿಸಿ, ಬಿಡುಗಡೆ ಮಾಡಲು ಸರ್ಕಾರ ಹಿಂದೇಟು ಹಾಕಿತ್ತು.

ಅದೇ ವೇಳೆಗೆ, ವರದಿಯ ಕೆಲವು ಅಂಶಗಳು ಸೋರಿಕೆಯಾಗಿದ್ದವು. ಅದರಂತೆ, ಲಿಂಗಾಯತರು 14% ಮತ್ತು ಒಕ್ಕಲಿಗ 11% ಜನಸಂಖ್ಯೆಯನ್ನು ಸೂಚಿಸಲಾಗಿದೆ. ಒದು ತಪ್ಪು ಲೆಕ್ಕಾಚಾರ. ಈ ಸಮುದಾಯಗಳು ಕ್ರಮವಾಗಿ 19% ಮತ್ತು 16% ಜನಸಂಖ್ಯೆ ಹೊಂದಿವೆ ಎಂದು ವಾದಿಸಿದ್ದವು.

ಈ ಸಮುದಾಯಗಳ ಪ್ರತಿನಿಧಿಗಳು ಹೈಕೋರ್ಟ್‌ನ ಮೊರೆ ಹೋಗಿದ್ದರು. ಇದು ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದ್ದು, ಆಯೋಗದ ಮೂಲಕ ಜಾತಿ ಸಮೀಕ್ಷೆ ನಡೆಸಲು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ಪ್ರತಿಪಾದಿಸಿದ್ದರು. ಇದೇ ಹೊತ್ತಿನಲ್ಲಿ, ಹಿಂದುಳಿದ ವರ್ಗಗಳ ಕೆಲವು ಕಾರ್ಯಕರ್ತರು, ವರದಿಯನ್ನು ಅಂಗೀಕರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಸದ್ಯ, ಈ ಎರಡೂ ಪ್ರಕರಣಗಳು ನ್ಯಾಯಾಲಯದ ಮುಂದಿವೆ.

ಇದೀಗ ಹೊಸ ಸರ್ಕಾರ ವರದಿಯನ್ನು ಅಂಗೀಕರಿಸುವುದಾಗಿ ಹೇಳಿದ್ದು, ಲಿಂಗಾಯತ ಮತ್ತು ಒಕ್ಕಲಿಗ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅವರು ಸಮುದಾಯಗಳ ಮಠಗಳ ಮಠಾಧೀಶರನ್ನು ಮುನ್ನೆಲೆಯಲ್ಲಿ ನಿಲ್ಲಿಸಿದ್ದಾರೆ. ವರದಿ ಅನುಷ್ಠಾನದ ವಿರುದ್ಧ ಹೋರಾಟ ರೂಪಿಸಲು ಕಳೆದ ಶನಿವಾರ ಸಭೆಯನ್ನೂ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕರ್ನಾಟಕದ ನೆಮ್ಮದಿಯ ನಾಳೆಗಳಿಗಾಗಿ ಬೇಕಿವೆ ಗ್ಯಾರಂಟಿಗಳು

“ನಮ್ಮ ಆತಂಕಗಳನ್ನು ನಿರ್ಲಕ್ಷಿಸಿ ಸರ್ಕಾರ ವರದಿಯನ್ನು ಅಂಗೀಕರಿಸಿದರೆ, ಹೋರಾಟ ಆರಂಭಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗರು ಮತ್ತು ಲಿಂಗಾಯತರ ಬೆಂಬಲದಿಂದ ಕಾಂಗ್ರೆಸ್‌ ಗೆದ್ದು, ಅಧಿಕಾರ ಹಿಡಿದಿದೆ. ವರದಿಯನ್ನು ಅಂಗೀಕರಿಸುವುದರಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭಾರೀ ಹೊಡೆತ ಬೀಳಬಹುದು,” ಎಂದು ಲಿಂಗಾಯತ-ಒಕ್ಕಲಿಗ ವೇದಿಕೆಯ ಸಂಚಾಲಕ ಬಿ.ಎಸ್ ನಟರಾಜ್ ಹೇಳಿದ್ದಾರೆ.

“ನಾವು ಎಲ್ಲ ಸಮುದಾಯಗಳ ಆಂತಕ-ಕಾಳಜಿಯನ್ನು ತಿಳಿದಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದೆ ಸಾಗುತ್ತೇವೆ. ಎಲ್ಲ ಸಮುದಾಯದಲ್ಲಿಯೂ ಒಮ್ಮತ ಮೂಡಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದ್ದಾರೆ.

“ಮುಖ್ಯ ತಾಂತ್ರಿಕ ಸಮಸ್ಯೆ ಏನೆಂದರೆ, ವರದಿಗೆ ಅಂದಿನ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಮಾಡಿಲ್ಲ. ಪ್ರಸ್ತುತ ಸದಸ್ಯ ಕಾರ್ಯದರ್ಶಿ ಸಹಿ ಹಾಕಲು ನಿಯಮಗಳು ಅನುಮತಿಸುವುದಿಲ್ಲ. ಈ ಬಗ್ಗೆ ಕಾನೂನು ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು” ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಕೆಲವು ಕಾಂಗ್ರೆಸ್ ಪದಾಧಿಕಾರಿಗಳು ವರದಿಯನ್ನು ಪುನರ್ ರಚಿಸುವಂತೆ ಸಲಹೆ ನೀಡಿದ್ದಾರೆ. ಸ್ವಲ್ಪ ಸಮಯ ತೆಗೆದುಕೊಂಡರೂ ಪರವಾಗಿಲ್ಲ, ಆಯೋಗವು ಇತ್ತೀಚಿನ ಅಂಕಿಅಂಶಗಳನ್ನು ಆಧರಿಸಿ ವರದಿಯನ್ನು ನವೀಕರಿಸಬೇಕು. ಹೊಸದಾಗಿ ವರದಿಯನ್ನು ಸಲ್ಲಿಸಬೇಕು” ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಸ್ ಶಿವಣ್ಣ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X