ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು(ಅ.15) ರಾಜ್ಯ ಎನ್‌ಎಸ್‌ಎಸ್‌ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಭಾಗಿತ್ವದಲ್ಲಿ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಯುವಜನತೆಯಲ್ಲಿ ತಂಬಾಕು ಸೇವನೆಯಿಂದ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ತಂಬಾಕು ಮುಕ್ತ ಯುವ ಅಭಿಯಾನ 2.0 ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ತಂಬಾಕು ಬಳಕೆಯನ್ನು ಮಾಡುವುದಿಲ್ಲ, ಮಾಡಲು ಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ಇಂದು ಪ್ರತಿಜ್ಞೆ ಕೈಗೊಂಡಿದ್ದಾರೆ. ಈ ಪ್ರತಿಜ್ಞೆಯನ್ನು ಅಕ್ಷರಶಃ ಪಾಲಿಸುವ ಕರ್ತವ್ಯವನ್ನು ವಿದ್ಯಾರ್ಥಿಗಳು ಮಾಡಬೇಕು” ಎಂದರು.

Advertisements

ತಂಬಾಕು ಸೇವಿಸುವ ಶೇ.50 ರಷ್ಟು ಜನರಿಗೆ ಕ್ಯಾನ್ಸರ್

“ಡಬ್ಲ್ಯೂಎಚ್‌ಒ ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು” ಎಂದರು.

“ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ ಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿದರು. ರಾಜ್ಯದ ಎಲ್ಲ ಯುವಸಮುದಾಯಗಳು ದುಶ್ಚಟಗಳಿಂದ ದೂರವಾಗುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ” ಎಂದು ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X