ಬೆಂಗಳೂರು ಟೆಕ್ ಸಮ್ಮಿಟ್ 2023 | ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡು ಬಿಡುಗಡೆ

Date:

Advertisements

ಬೆಂಗಳೂರು ಅರಮನೆಯಲ್ಲಿ ‘ಬ್ರೇಕಿಂಗ್ ದಿ ಬೌಂಡರೀಸ್’ ಘೋಷವಾಕ್ಯದ 26ನೇ ‘ಬೆಂಗಳೂರು ತಂತ್ರಜ್ಞಾನ ಶೃಂಗಸಭೆ–2023’ಯಲ್ಲಿ ಸರ್ಕಾರದ ಎವಿಜಿಸಿ ಕರಡು ಮುನ್ನೋಟ ಮತ್ತು ಜೈವಿಕ ತಂತ್ರಜ್ಞಾನ ಕಾರ್ಯನೀತಿಯ ಪರಿಷ್ಕೃತ ಕರಡನ್ನು ಬಿಡುಗಡೆಗೊಳಿಸಲಾಯಿತು.

ಕರಡು‌ ನೀತಿಯನ್ನು‌ ಬಿಡುಗಡೆ ಮಾಡಿ ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ‘ಕರ್ನಾಟಕವು ಬಹಳ ಹಿಂದಿನಿಂದಲೂ ಹೊಸತನ ಮತ್ತು ಬೆಳವಣಿಗೆಗೆ ಹೆಸರಾಗಿದೆ’ ಎಂದರು.

“ಸುಲಲಿತ ವಾಣಿಜ್ಯ- ವಹಿವಾಟು ಸೂಚ್ಯಂಕದಲ್ಲಿ ಕರ್ನಾಟಕವು ಮುಂಚೂಣಿ ಸ್ಥಾನದಲ್ಲಿದೆ. ಹಲವು ಸುಧಾರಣೆಗಳನ್ನು ಜಾರಿಗೆ ತಂದ ಪರಿಣಾಮವಾಗಿ ಇದು ಸಾಧ್ಯವಾಗಿದೆ. ದೇಶದ ಐ.ಟಿ. ರಫ್ತಿನಲ್ಲಿ ಕರ್ನಾಟಕದ ಪಾಲು ಶೇಕಡ 40ರಷ್ಟು ಇದೆ” ಎಂದರು.

Advertisements

“ಸರ್ಕಾರವು ಕೈಗೊಳ್ಳಬಹುದಾದ ಕ್ರಮಗಳು ಯಾವುದಿರಬೇಕು ಎಂಬುದನ್ನು ತಿಳಿಯಲು ನಾವು ಉದ್ಯಮದ ಪ್ರಮುಖರು, ಅಕಾಡೆಮಿಕ್ ವಲಯದ ಪ್ರಮುಖರು ಹಾಗೂ ಸರ್ಕಾರದ ಪಾಲುದಾರರ ಜೊತೆ ನಿರಂತರವಾಗಿ ಮಾತುಕತೆ ನಡೆಸುತ್ತೇವೆ” ಎಂದು ಪಾಟೀಲ ಹೇಳಿದರು.

ಐ.ಟಿ. ಮತ್ತು ಬಿ.ಟಿ. ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ‘ತಂತ್ರಜ್ಞಾನ ಉದ್ಯಮಗಳ ಬೆಳವಣಿಗೆಗೆ ಪೂರಕವಾದ ಕಾರ್ಯಪರಿಸರ ಉಂಟುಮಾಡಲು ಸರ್ಕಾರವು ಆದ್ಯತೆಯಾಗಿ ಪರಿಗಣಿಸಿದ್ದು, ಅದನ್ನು ಮುಂದುವರಿಸಲಿದೆ’ ಎಂದರು.

‘ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಹೊಸ ಶಿಕ್ಷಣ ವ್ಯವಸ್ಥೆ ರೂಪಿಸುವಲ್ಲಿ ನಮ್ಮ ಸರ್ಕಾರ ತೊಡಗಿಸಿಕೊಂಡಿದೆ. ಕಂಪನಿಗಳು ತಮ್ಮ ಸಿಎಸ್‌ಆರ್‌ ಹಣವನ್ನು ಅದಕ್ಕಾಗಿ ವೆಚ್ಚ ಮಾಡಿದರೆ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳು ಕೂಡ ಹೆಚ್ಚು ಸ್ಪರ್ಧಾತ್ಮಕವಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಯಮಿಗಳಿಗೆ ಸಲಹೆ ನೀಡಿದರು.

ರಾಜ್ಯದ ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್‌ನ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಮಾತನಾಡಿ, ‘ಕಳೆದ ವರ್ಷದಲ್ಲಿ ಐ.ಟಿ. ಉದ್ಯಮವು ಶೇಕಡ 9ರಷ್ಟು ಬೆಳವಣಿಗೆ ಸಾಧಿಸಿದೆ. ಜಾಗತಿಕ ಆರ್ಥಿಕ ವ್ಯವಸ್ಥೆಯು ಮಂದಗತಿಯಲ್ಲಿದ್ದರೂ, ಮಧ್ಯಮಾವಧಿಯಿಂದ ದೀರ್ಘಾವಧಿಯಲ್ಲಿ ಈ ಉದ್ಯಮವು 350 ಬಿಲಿಯನ್ ಡಾಲರ್‌ ಗಾತ್ರಕ್ಕೆ ಬೆಳೆಯುವ ನಿರೀಕ್ಷೆ ಇದೆ. ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿ ರಾಜ್ಯವು ಹೊಂದಿರುವ ನಾಯಕತ್ವವನ್ನು ಕಾಯ್ದುಕೊಳ್ಳಬೇಕು ಎಂದಾದರೆ ಅದಕ್ಕೆ ಸೂಕ್ತವಾದ ಕಾರ್ಯತಂತ್ರ ರೂಪಿಸಬೇಕು’ ಎಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ರಾಜ್ಯದಲ್ಲಿ ಮುಂದಿನ ಹಂತದ ತಂತ್ರಜ್ಞಾನ ನಾವೀನ್ಯತೆಯ ಬೆಳವಣಿಗೆಗೆ ಅಗತ್ಯವಿರುವ ಮೂಲಸೌಕರ್ಯ ಅಭಿವೃದ್ಧಿಗೆ ಹೂಡಿಕೆಗಳನ್ನು ಮುಂದುವರಿಸಲಾಗುವುದು’ ಎಂದು ತಿಳಿಸಿದರು.

ಫಿನ್ಲೈಂಡ್ ವಿಜ್ಞಾನ ಸಚಿವರಾದ ಸಾರಿ ಮುಲ್ತಾಲ ಮತ್ತು ಜರ್ಮನಿಯ ಡಿಜಿಟಲ್ ವ್ಯವಹಾರಗಳ ಸಚಿವ ಡಾಕ್ಟರ್ ವೋಲ್ಕರ್ ವಿಸ್ಸಿಂಗ್ ಅವರ ವಿಡಿಯೋ ಸಂದೇಶಗಳ ಮೂಲಕ ಭಾರತ ಹಾಗೂ ಕರ್ನಾಟಕದ ಜೊತೆ ಹೆಚ್ಚಿನ ಸಹಭಾಗಿತ್ವಕ್ಕೆ ತಮ್ಮ ದೇಶಗಳು ಉತ್ಸುಕವಾಗಿವೆ ಎಂದರು.

ರಾಜ್ಯದ ಉದ್ಯಮ ವಲಯದ ಪ್ರಮುಖರಾದ ಎಎಂಡಿ ಸಂಸ್ಥೆಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮಾರ್ಕ್ ಪೇಪರ್ ಮಾಸ್ಟರ್, ವಿಪ್ರೊ ಸಂಸ್ಥೆಯ ಕಾರ್ಯನಿರ್ವಾಹಕ ಅಧ್ಯಕ್ಷ ರಿಷದ್ ಪ್ರೇಮ್‌ಜಿ, ಕಿರಣ್ ಮಜುಂದಾರ್ ಶಾ, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ‌ಶರ್ಮಾ, ಐಟಿ‌ ಕಾರ್ಯದರ್ಶಿ ಏಕ್ ರೂಪ್‌ ಕೌರ್, ಐಟಿ ನಿರ್ದೇಶಕ ದರ್ಶನ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X