ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ, ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಅವರು ಇಂದು (ಆ.17) ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಕಾನೂನು ಹೋರಾಟ

Advertisements

“ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

“ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು” ಎಂದರು.

ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ

“ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟಿಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯಿಲ್ಲ” ಎಂದು ಸಿಎಂ ಸ್ಪಷ್ಟಪಡಿಸಿದರು.

“ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ” ಎಂದರು.

“ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ” ಎಂದು ಗಮನ ಸೆಳೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X