ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ತಗುಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭು ಶಂಕರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಗೆಹ್ಲೋಟ್ ಅವರು ರಾಜಭವನದಲ್ಲಿ ಕ್ವಾರಂಟೈನ್ ಆಗಿದ್ದಾರೆ.
ಮುಂದಿನ ದಿನಾಂಕದವರೆಗೆ ರಾಜ್ಯಪಾಲರ ನಿಗದಿತ ಕಾರ್ಯಕ್ರಮ ರದ್ದು ಮಾಡಲಾಗಿದೆ ಪ್ರಕಟಣೆಯಲ್ಲಿ ಆರ್. ಪ್ರಭು ಶಂಕರ್ ಉಲ್ಲೇಖಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, “ಕೊರೋನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿಗೆ ಒಳಗಾಗಿರುವ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
– ಮುಖ್ಯಮಂತ್ರಿ @siddaramaiah #Covid_19 pic.twitter.com/wcMmX1POgH— CM of Karnataka (@CMofKarnataka) January 9, 2024