ಎಲ್ಲರಿಗೂ ಕೊಳ್ಳುವ ಶಕ್ತಿ ತುಂಬಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ: ಸಿದ್ದರಾಮಯ್ಯ

Date:

ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಹಾವೇರಿ ಜಿಲ್ಲೆಯ ಚಿಕ್ಕ ಬಾಸುರಲ್ಲಿ ಲಿಂಗಾಯತ ಸಂಘ ಬೆಂಗಳೂರು ವತಿಯಿಂದ ಆಯೋಜಿಸಿರುವ ಶಿವಯೋಗಿ ಸಿದ್ದರಾಮೇಶ್ವರರ 851 ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸರ್ಕಾರ ಎಲ್ಲ ಸಮಾಜದಲ್ಲಿನ ಬಡವರನ್ನು ಮುಖ್ಯ ವಾಹಿನಿಗೆ ತಂದು, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಬೇಕು ಎಂದು ಪ್ರಯತ್ನ ಮಾಡುತ್ತಿದೆ. ಅನುಭವ ಮಂಟಪದಲ್ಲಿ ಸಮಸಮಾಜ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳಾಗುತ್ತಿತ್ತು. ಅಂಥ ಸಮಾಜವನ್ನು ಬಸವಾದಿ ಶರಣರು, ಸಿದ್ದರಾಮೇಶ್ವರರು ಬಯಸಿದ್ದರು” ಎಂದರು.

“ಶಿವಯೋಗಿ ಸಿದ್ದರಾಮೇಶ್ವರರು ಬಸವಣ್ಣನವರ ಸಮಕಾಲೀನರು. ವಚನ ಸಾಹಿತ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 12 ನೇ ಶತಮಾನದಲ್ಲಿ ಶರಣರು ವಚನಗಳನ್ನು ರಚಿಸಿ ಜೀವನದ ಮೌಲ್ಯಗಳನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ. ಜೀವನ ಮೌಲ್ಯಗಳನ್ನು ಮಾವು ಅರಿಯಬೇಕು. ಹುಟ್ಟು ಆಕಸ್ಮಿಕ, ಸಾವು ಖಚಿತವಾದರೂ ಹುಟ್ಟು ಸಾವುಗಳ ಮಧ್ಯೆ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ನಮ್ಮ ಬದುಕಿನ ಅವಧಿಯಲ್ಲಿ ನಮ್ಮ ಬದುಕನ್ನು ನಾವು ಸಾರ್ಥಕಗೊಳಿಸಿಕೊಂಡಿದ್ದೇವೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ವಚನ ಸಾಹಿತ್ಯ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ

“ವಚನ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಮಾತ್ರವಲ್ಲದೆ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ. ಧರ್ಮಾಚರಣೆ, ಆಧ್ಯಾತ್ಮ ಜನರ ಭಾಷೆಯಲ್ಲಿ ಲಭ್ಯವಿರಲಿಲ್ಲ. ಸಾಮಾನ್ಯ ಜನರಿಗೆ ಓದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಜನರ ಭಾಷೆಯಲ್ಲಿ ಇದನ್ನು ತಿಳಿಸಿದ್ದು ಬಸವಣ್ಣ” ಎಂದರು.

“ಶರಣ ಸಾಹಿತ್ಯದಲ್ಲಿ ಬಸವಣ್ಣ, ಚೆನ್ನಬಸವಣ್ಣ, ಅಕ್ಕಮಹಾದೇವಿ ಅಲ್ಲಮಪ್ರಭು, ಸಿದ್ದರಾಮೇಶ್ವರರು ಪ್ರಮುಖರು. ಬಸವಾದಿ ಶರಣರು ಮುಖ್ಯ ವಾಗಿ ನೀಡಿದ ಮೌಲ್ಯ ಕಾಯಕ ಮತ್ತು ದಾಸೋಹ. ಸತ್ಯವೇ ಸ್ವರ್ಗ, ಮಿತ್ಯವೆ ನರಕ ಎಂದ ಶರಣರು, ಮೌಢ್ಯಗಳನ್ನು ತಿರಸ್ಕರಿಸಿದ್ದರು. ಬಸವಾದಿ ಶರಣರು ವೈಚಾರಿಕ, ವೈಜ್ಞಾನಿಕ ವಿಚಾರಗಳನ್ನು ಜನರ ಮುಂದಿಟ್ಟಿದ್ದಾರೆ. ಕಂದಾಚಾರ, ಮೂಢನಂಬಿಕೆ, ಮೌಢ್ಯಗಳನ್ನು ತಿರಸ್ಕಾರ ಮಾಡಿದ್ದಾರೆ” ಎಂದು ಹೇಳಿದರು.

“ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹಾಸನದಲ್ಲಿ ಸುಮಾರು 40,000 ಶಾಖೆಗಳಿದ್ದು, ಅನುದಾನ ಕೋರಿರುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ಇದೇ ವೇಳೆ ಸಿಎಂ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...