ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಸೇರಿ ಎನ್ನುವುದು ಅಪಾಯಕಾರಿ ನಡೆ: ಸಚಿವ ಮಹದೇವಪ್ಪ

Date:

Advertisements

ಯಾರೋ ಕೆಲವು ಮನುವಾದಿಗಳನ್ನು ಮೆಚ್ಚಿಸಲು ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಶಾಖೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳುತ್ತಿರುವ ಕೇಂದ್ರ ಸರ್ಕಾರದ ನಿಲುವು ಅತ್ಯಂತ ಅಪಾಯಕಾರಿಯಾದುದು ಎಂದು ಸಚಿವ ಎಚ್‌ ಸಿ ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಸರ್ಕಾರ ಎಂಬುದು ಸದಾ ನ್ಯಾಯ ಪ್ರಜ್ಞೆಯನ್ನು ಇಟ್ಟುಕೊಂಡು ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿ ಪ್ರಜಾಪ್ರಭುತ್ವದ ಆಶಯಕ್ಕೆ ಅನುಸಾರವಾಗಿ ಕೆಲಸ ಮಾಡಬೇಕು” ಎಂದಿದ್ದಾರೆ.

“ಸರ್ಕಾರದ ಭಾಗವಾಗಿ ಕೆಲಸ ಮಾಡುವ ಸರ್ಕಾರೀ ನೌಕರರೂ ಸಹ ಪ್ರಜಾಪ್ರಭುತ್ವದ ಈ ಪ್ರಕ್ರಿಯೆಯ ಭಾಗವಾಗಿರುತ್ತಾರೆ. ಹೀಗಿರುವಾಗ ನೀವು ಇಂತದ್ದೇ ತಿನ್ನಬೇಕು, ಇಂತಹದ್ದೇ ಉಡುಪು ಧರಿಸಬೇಕು, ಹೀಗೇ ಬದುಕಬೇಕು ಮತ್ತು ನಾವು ಹೇಳುವ ರೀತಿಯಲ್ಲೇ ಬದುಕಬೇಕು ಎಂದು ಮೂಢ ನಂಬಿಕೆ ಮತ್ತು ಅವೈಜ್ಞಾನಿಕತೆಯನ್ನೇ ಉಸಿರಾಡುವ ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ, ತಟಸ್ಥವಾಗಿ, ಯಾವುದೇ ಸಾಮಾಜಿಕ ಮತ್ತು ಸೈದ್ಧಾಂತಿಕ ಪೂರ್ವಾಗ್ರಹ ಇಲ್ಲದೇ ಕೆಲಸ ಮಾಡುವ ಸಂವಿಧಾನಿಕ ಜವಾಬ್ದಾರಿ ಹೊತ್ತಿರುವ ಸರ್ಕಾರಿ ನೌಕರರು ಭಾಗವಹಿಸುವುದು ಯಾವ ರೀತಿಯಲ್ಲೂ ಸರಿಯಲ್ಲ” ಎಂದು ಹೇಳಿದ್ದಾರೆ.

Advertisements

“ಪ್ರಜಾಪ್ರಭುತ್ವ ವಿರೋಧಿ ನೀತಿಗಳನ್ನು ಆಳವಾಗಿ ಅಳವಡಿಸಿಕೊಂಡು, ಎಲ್ಲರನ್ನೂ ಕಾಪಾಡುವ ಸಂವಿಧಾನದ ರೀತಿ ನೀತಿಗಳನ್ನು ಗಾಳಿಗೆ ತೂರಿ ಜೀವಿಸಲು ಇಚ್ಛಿಸುವ ಆರ್ ಎಸ್ ಎಸ್ ನೊಳಗೆ, ಸಂವಿಧಾನದ ಸೇವಕರಾಗಿ ಕೆಲಸ ಮಾಡುವ ನೌಕರರು ಭಾಗವಹಿಸುವುದು ಒಪ್ಪುವ ನಡೆಯಲ್ಲ” ಎಂದು ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ಕೂಡಲೇ ತಮ್ಮ ಈ ನಿರ್ಧಾರವನ್ನು ರದ್ದುಪಡಿಸಬೇಕೆಂದು ಈ ಮ‌ೂಲಕ ಆಗ್ರಹಿಸುತ್ತೇನೆ” ಎಂದು ಮಹದೇವಪ್ಪ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X