14 ಲಕ್ಷ ಬಡವರ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳಲು ಸರ್ಕಾರ ಹೊರಟಿದೆ: ಸಿ ಟಿ ರವಿ ಆರೋಪ

Date:

Advertisements

ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ ಎಂದು ವಿಧಾನಪರಿಷತ್ ಸದಸ್ಯ ಸಿ ಟಿ ರವಿ ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು (ನ.19) ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಬಡವರ ಅನ್ನಕ್ಕೂ ಕನ್ನ ಹಾಕುವ ಪರಮ ಅನ್ಯಾಯ ಇದಾಗಿದೆ ಎಂದು ಟೀಕಿಸಿದರು. ಜಾತಿ ಹುಡುಕಿ ಕಾರ್ಡ್ ರದ್ದು ಮಾಡಿದ್ದನ್ನು ಸೋಷಿಯಲ್ ಮೀಡಿಯದಲ್ಲಿ ನೋಡಿದ್ದೇನೆ. ಬಡವರ ಅನ್ನಕ್ಕೂ ಕನ್ನ ಹಾಕುವ ಸರಕಾರ ಇದೆಂದು” ಆರೋಪಿಸಿದರು.

“ಎಐಸಿಸಿ ಅಧ್ಯಕ್ಷ ಖರ್ಗೆಯವರು ನಿನ್ನೆ ಆರ್‌ಎಸ್‌ಎಸ್‌, ಬಿಜೆಪಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ಅನುಭವ ಪಕ್ವತೆಯನ್ನು ಪಡೆದುಕೊಳ್ಳಬೇಕು. ಹಿರಿತನಕ್ಕೆ ತಕ್ಕ ಮಾತು ಅದಲ್ಲ. ಅವರ ಮಾತುಗಳು ಹುಚ್ಚುನಾಯಿ ಕಡಿತಕ್ಕೆ ಒಳಗಾದವರು ಆಡುವ ಥರ ಮಾತಿನಂತಿತ್ತು. ಮಲ್ಲಿಕಾರ್ಜುನ ಖರ್ಗೆಯವರು ಆ ಮಾತನಾಡಿದ್ದಾರೋ ಅಥವಾ ಕಾಂಗ್ರೆಸ್ಸಿನ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಖರ್ಗೆಯವರ ಮೂಲಕ ಈ ಮಾತನ್ನಾಡಿಸಿದ್ದಾರೋ ಗೊತ್ತಿಲ್ಲ. ನಿಮ್ಮ ಮಾತು ಸಂವಿಧಾನದ ಮೇಲೆ ನಂಬಿಕೆ ಇಟ್ಟವರ ಮಾತಲ್ಲ. ಹೊಡಿ, ಬಡಿ ಕೊಲ್ಲು ಎಂಬ ತಾಲಿಬಾನಿಗಳ ಮಾತಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆ ಯಾಚಿಸಬೇಕು” ಎಂದು ಆಗ್ರಹಿಸಿದರು.

Advertisements

“ಸಂವಿಧಾನ ಗೌರವ ದಿವಸ ಆಚರಿಸಲು ಪ್ರಧಾನಿ ಮೋದಿಜೀ ಅವರು ಕ್ರಮ ಕೈಗೊಂಡಿದ್ದಾರೆ. ಡಾ.ಅಂಬೇಡ್ಕರರು ಸತ್ತಾಗಲೂ ಕಾಂಗ್ರೆಸ್ ಸರಕಾರ ಅವಮಾನ ಮಾಡಿದ್ದನ್ನು, ಅವರು ಚುನಾವಣೆಗೆ ನಿಂತಾಗ ಸೋಲಿಸಿದ್ದನ್ನು ಹಾಗೂ ಕಾಂಗ್ರೆಸ್ ಪಕ್ಷವು ಅವರ ಹೆಸರನ್ನು ಭಾರತರತ್ನಕ್ಕೆ ಪರಿಗಣಿಸದೆ ಇದ್ದುದನ್ನು ಜನರಿಗೆ ತಿಳಿಸುತ್ತೇವೆ. ಸಂವಿಧಾನ ಸಂರಕ್ಷಣೆ, ಸಂವಿಧಾನದ ಸಮ್ಮಾನದ ಅಭಿಯಾನ ಕೈಗೆತ್ತಿಕೊಂಡಿದ್ದು, ಈ ಎಲ್ಲ ಸಂಗತಿಗಳನ್ನು ಜನರ ಮುಂದಿಡಲಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಭಾರತದ ಮನಸ್ಥಿತಿ ಮತ್ತು ಮನೆಸ್ಥಿತಿ

“ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನದ ಕುರಿತು ನಿಜವಾದ ಪ್ರೀತಿ ಇಲ್ಲ, ನಾಟಕ ಮಾಡುತ್ತ ಬಂದಿದೆ. ಆಡಳಿತದಲ್ಲಿ ಇದ್ದಾಗ ಕೂಡ ಅದು ಸಂವಿಧಾನಕ್ಕೆ ಮತ್ತು ಅಂಬೇಡ್ಕರರಿಗೆ ಗೌರವ ಕೊಟ್ಟಿಲ್ಲ. ನಕ್ಸಲಿಸಂ ಎಂದರೆ ಹಿಂಸೆಯನ್ನು ಪ್ರಚೋದಿಸುವುದು ಮತ್ತು ಅದು ಪ್ರಜಾಪ್ರಭುತ್ವ ವಿರೋಧಿ. ನಕ್ಸಲರ ಬಗ್ಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ವಿರೋಧಿಗಳು ಮಾತ್ರ ಕರುಣೆ ತೋರಲು ಸಾಧ್ಯ. ನಕ್ಸಲರು ನಕ್ಸಲರೇ; ಅವರ ಬಗ್ಗೆ ಯಾವ ಸಿಂಪಥಿಯೂ ಇಲ್ಲ. ನಕ್ಸಲರು ಎಡಪಂಥೀಯ ಭಯೋತ್ಪಾದಕರಷ್ಟೇ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X