ಸರ್ಕಾರದಲ್ಲಿ 190 ಔಷಧಿಗಳ ದಾಸ್ತಾನು ಇಲ್ಲ: ಆರೋಗ್ಯ ಸಚಿವ

Date:

ಸರ್ಕಾರಿ ಅಸ್ಪತ್ರೆಗಳಲ್ಲಿ ಸರ್ಕಾರವು ಉಚಿತವಾಗಿ ರೋಗಿಗಳಿಗೆ ಪೂರೈಕೆ ಮಾಡುವ ಒಟ್ಟು 410 ಅಗತ್ಯ ಔಷಧಿಗಳ ಪೈಕಿ 190 ಔಷಧಿಗಳ ದಾಸ್ತಾನು ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಏಪ್ರಿಲ್ ಮೊದಲ ವಾರದೊಳಗೆ ಎಲ್ಲ ಔಷಧಿಗಳು ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 190 ಅಗತ್ಯ ಔಷಧಿಗಳ ತೀವ್ರ ಕೊರತೆ ಇದೆ. ಟೆಂಡರ್ ಪ್ರಕ್ರಿಯೆ ನಡೆಸುವಲ್ಲಿನ ವಿಳಂಬದಿಂದಾಗಿ ಔಷಧಿಗಳ ಪೂರೈಕೆಯಲ್ಲಿ ತೊಡಕಾಗಿದೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನು ಬಲಪಡಿಸಬೇಕಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ದೊರೆಯದ ಕಾರಣ ಔಷಧಾಲಯಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಲಭ್ಯವಿರುವ ಸುಮಾರು 222 ಕೋಟಿ ರೂ. ಹಣದಲ್ಲಿ ಅಗತ್ಯ ಔಷಧಿಗಳನ್ನು ಖರೀದಿಸಿ, ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಿಗೆ ಒದಗಿಸಲಾಗುತ್ತದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಔಷಧಿಗಳ ಪೂರೈಕೆಗಾಗಿ ಎರಡು ವರ್ಷಗಳ ಅವಧಿಗೆ ಟೆಂಡರ್ ನೀಡಲು ಯೋಜಿಸಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನುಅಭಿನಂದಿಸಿ ಬಿಜೆಪಿ ನಾಯಕರು...

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...