ಕೇಂದ್ರದಿಂದ ಶೀಘ್ರದಲ್ಲೇ ಚುನಾವಣಾ ಆಯುಕ್ತರ ನೇಮಕಾತಿ ನಿಯಂತ್ರಣ ಮಸೂದೆ: ಸಮಿತಿಯಲ್ಲಿ ಸಿಜೆಐಗೆ ಕೋಕ್

Date:

ಕೇಂದ್ರ ಕಾನೂನು ಸಚಿವಾಲಯವು , ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸೇವಾ ಶರತ್ತುಗಳು ಮತ್ತು ಅಧಿಕಾರದ ಅವಧಿಯನ್ನು ನಿಯಂತ್ರಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸುವ ಸಾಧ್ಯತೆಯಿದೆ.

- Advertisement -

ಸಚಿವಾಲಯ ಬಿಡುಗಡೆ ಮಾಡಿರುವ ಮಸೂದೆಯ ಕರಡು ಪಟ್ಟಿಯಲ್ಲಿರುವಂತೆ ಚುನಾವಣಾ ಮುಖ್ಯ ಆಯುಕ್ತರು ಹಾಗೂ ಇತರ ಆಯುಕ್ತರನ್ನು ರಾಷ್ಟ್ರಪತಿಗೆ ಶಿಫಾರಸ್ಸು ಮಾಡುವ ನೇಮಕಾತಿ ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರನ್ನು ಹೊರಗಿಡಲಾಗಿದೆ.   

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೊಸ ಮಸೂದೆಯಲ್ಲಿ ಪ್ರಧಾನಮಂತ್ರಿಯವರು ಅಧ್ಯಕ್ಷರಾಗಿರುತ್ತಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಸಂಪುಟ ಸಚಿವರ ಸಮಿತಿ ಸದಸ್ಯರಾಗಿರುತ್ತಾರೆ.

ಮಾರ್ಚ್‌ನಲ್ಲಿ ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ, ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು(ಸಿಇಸಿ) ಮತ್ತು ಇತರ ಮುಖ್ಯ ಆಯುಕ್ತರ ನೇಮಕಾತಿ ಕುರಿತ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, ಪ್ರಧಾನ ಮಂತ್ರಿ, ವಿರೋಧ ಪಕ್ಷದ ನಾಯಕ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಉನ್ನತ ಅಧಿಕಾರದ ಸಮಿತಿಯು ಸಿಇಸಿ ಅವರನ್ನು ಆಯ್ಕೆ ಮಾಡುತ್ತದೆ ಎಂದು ತೀರ್ಪು ನೀಡಿತ್ತು. ಸಿಇಸಿ ಮತ್ತು ಇಸಿಗಳ ನೇಮಕವನ್ನು ನಿಯಂತ್ರಿಸುವ ಕಾನೂನನ್ನು ಸಂಸತ್ತು ಅಂಗೀಕರಿಸುವವರೆಗೆ ಇದು ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಆದರೆ ಈಗ ಮಂಡಿಸಲಾಗುತ್ತಿರುವ ಮಸೂದೆಯಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶರನ್ನು ಕೈಬಿಡುತ್ತಿರುವುದು ವಿವಾದಕ್ಕೆ ಈಡಾಗುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರದಿಂದ ‘ಈ ದಿನ’ ವರದಿ-1 | ಬಿಜೆಪಿ ಆರಂಭಿಸಿರುವ ’ಮೈತೇಯಿ ಗರ್ಭಿಣಿಯರ ಶಿಬಿರ’ದಲ್ಲಿ…

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ಸೇವಾ ನೇಮಕಾತಿ ನಿಯಮಗಳು ಮತ್ತು ಅಧಿಕಾರವಧಿ ಅವಧಿ) ಮಸೂದೆ, 2023 ಅನ್ನು ರಾಜ್ಯಸಭೆಯಲ್ಲಿ ಪರಿಚಯಿಸಲು ಕರಡು ಸಿದ್ಧಪಡಿಸಲಾಗಿದೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಅಥವಾ ಇತರ ಆಯುಕ್ತರ ಹುದ್ದೆಯು ಕೇಂದ್ರ ಸರ್ಕಾರದ ಕಾರ್ಯದರ್ಶಿಗೆ ಸಮನಾದ ಅಧಿಕಾರ ಹೊಂದಿರುತ್ತದೆ ಎಂದು ಮಸೂದೆ ಹೇಳುತ್ತದೆ. ಇವರು ‘ಚುನಾವಣೆಗಳ ನಿರ್ವಹಣೆ ಮತ್ತು ನಡವಳಿಕೆಯ ಬಗ್ಗೆ ಜ್ಞಾನ ಮತ್ತು ಅನುಭವ ಹೊಂದಿರುವ ಸಮಗ್ರತೆಯ ವ್ಯಕ್ತಿಗಳಾಗಿರಬೇಕು’ ಎಂದು ಹೇಳುತ್ತದೆ.

ಮೊದಲನೆಯದಾಗಿ, ಸಂಪುಟ ಕಾರ್ಯದರ್ಶಿ ನೇತೃತ್ವದ ಶೋಧನಾ ಸಮಿತಿ ಮತ್ತು “ಚುನಾವಣೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಜ್ಞಾನ ಮತ್ತು ಅನುಭವ ಹೊಂದಿರುವ ಕಾರ್ಯದರ್ಶಿ ಶ್ರೇಣಿಗಿಂತ ಕಡಿಮೆಯಿಲ್ಲದ ಇಬ್ಬರು ಸದಸ್ಯರನ್ನು ಒಳಗೊಂಡಂತೆ ಐದು ಸದಸ್ಯರ ಸಮಿತಿಯನ್ನು ಸಿದ್ಧಪಡಿಸಬೇಕು”.

ಇದನ್ನು ನಂತರ ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯ ಲೋಕಸಭೆಯ ವಿರೋಧ ಪಕ್ಷದ ನಾಯಕ ಅಥವಾ ಏಕೈಕ ದೊಡ್ಡ ಪಕ್ಷದ ನಾಯಕ ಮತ್ತು ಪ್ರಧಾನ ಮಂತ್ರಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ಸಮಿತಿಗೆ ಕಳಿಸಬೇಕು ಎಂಬ ಅಂಶಗಳು ಮಸೂದೆಯಲ್ಲಿವೆ.

CEC

ಆಯ್ಕೆ ಸಮಿತಿಯು ತನ್ನ ಕಾರ್ಯವಿಧಾನವನ್ನು “ಪಾರದರ್ಶಕ ರೀತಿಯಲ್ಲಿ” ನಿಯಂತ್ರಿಸುತ್ತದೆ ಮತ್ತು ಅದು ಶೋಧನಾ ಸಮಿತಿಯ ಸಮಿತಿಯಲ್ಲಿ ಸೇರಿಸಲ್ಪಟ್ಟವರನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿಯನ್ನು ಪರಿಗಣಿಸಬಹುದು ಎಂದು ಮಸೂದೆ ಹೇಳುತ್ತದೆ.

ಸಿಇಸಿ ಮತ್ತು ಇಸಿಗಳ ಅವಧಿಯು ಆರು ವರ್ಷಗಳವರೆಗೆ ಅಥವಾ ಅವರು 65 ವರ್ಷ ವಯಸ್ಸನ್ನು ತಲುಪುವವರೆಗೆ ಬದಲಾಗದೆ ಉಳಿಯುತ್ತದೆ. ಅವರ ವೇತನವು ಸಂಪುಟ ಕಾರ್ಯದರ್ಶಿಗೆ ಸಮನಾಗಿರುತ್ತದೆ.

ಕಳೆದ ವಾರ, ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ನೇಮಕವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. 37 ವರ್ಷಗಳ ವೃತ್ತಿ ಜೀವನದ ನಂತರ ಭಾರತೀಯ ಆಡಳಿತ ಸೇವೆಯಿಂದ ಸ್ವಯಂ ನಿವೃತ್ತಿಯನ್ನು ಪಡೆದ ಒಂದು ದಿನದ ನಂತರ, ನವೆಂಬರ್ 19, 2022 ರಂದು ಗೋಯೆಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...