ರಾಹುಲ್‌ ಬಾಯಿ ಮುಚ್ಚಿಸಲು ಸರ್ಕಾರದಿಂದ ನಿಯಮಗಳ ದುರುಪಯೋಗ: ಕಾಂಗ್ರೆಸ್ ಆರೋಪ

Date:

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಾಯಿ ಮುಚ್ಚಿಸಲು ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ನಿಯಮಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಮೋದಿ ಸರ್ಕಾರ ತನ್ನ ಅಸಮರ್ಥತೆಯ ಸತ್ಯ ಬಹಿರಂಗಗೊಳ್ಳುತ್ತದೆ ಎಂಬ ಭಯ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಟೀಕಿಸಿದೆ.

- Advertisement -

ಲೋಕಸಭೆಯಲ್ಲಿ ಲಡಾಖ್ ಗಡಿ ಸಂಘರ್ಷ ಮತ್ತು ಚೀನಾ ಸೇನೆಯ ಚಟುವಟಿಕೆಗಳ ಕುರಿತು ಮಾಜಿ ಸೇನಾ ಮುಖ್ಯಸ್ಥ ಮನೋಜ್ ನರವಾಣೆ ಅವರ ಪುಸ್ತಕದಲ್ಲಿನ ಮಾಹಿತಿಯನ್ನು ಓದಲು ಮುಂದಾಗುತ್ತಿದ್ದಂತೆ, ರಾಹುಲ್ ಅವರನ್ನು ತಡೆಯಲಾಗಿದೆ. “ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ” ಎಂಬ ಅಪ್ರಕಟಿತ ಪುಸ್ತಕದ ಅಂಶಗಳು ಅದಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಟ್ರಂಪ್‌ಗೆ ಭಯಪಡುವ ಮೋದಿ, ಅಂಬಾನಿ-ಅದಾನಿಯ ‘ರಿಮೋಟ್‌ ಕಂಟ್ರೋಲ್‌’ನಲ್ಲಿದ್ದಾರೆ: ರಾಹುಲ್ ಗಾಂಧಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ, ಈ ಪುಸ್ತಕವು ಇನ್ನೂ ಪ್ರಕಟಗೊಂಡಿಲ್ಲ, ಅಪ್ರಕಟಿತ ವಿಷಯಗಳನ್ನು ಸದನದಲ್ಲಿ ಉಲ್ಲೇಖಿಸುವುದು ನಿಯಮಗಳಿಗೆ ವಿರುದ್ಧ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಕೂಡ ಓದಲು ಅವಕಾಶ ನೀಡಿಲ್ಲ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು, “ಈ ನಕಲಿ ರಾಷ್ಟ್ರೀಯತಾವಾದಿ ಸರ್ಕಾರವು ತಮ್ಮ ಅಸಮರ್ಥತೆಯ ಸತ್ಯ ಹೊರಬರಬಹುದು ಎಂದು ಎಷ್ಟು ಹೆದರುತ್ತಿದೆಯೆಂದರೆ, ಅವರು ರಾಹುಲ್ ಗಾಂಧಿ ಮಾತನಾಡದಂತೆ ತಡೆಯಲು ಹಿರಿಯ ಸಚಿವರುಗನ್ನು ಇರಿಸಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ನರವಾಣೆ ಬರೆದ ಪುಸ್ತಕದ ಪ್ರಕಟಣೆಯನ್ನು ತಡೆಯಲು ಅವರು ತಮ್ಮಿಂದ ಸಾಧ್ಯವಾದ ಎಲ್ಲವನ್ನೂ ಮಾಡಿದರು. ಈಗ ಅವರ ರಾಷ್ಟ್ರೀಯತಾವಾದಿ ಬದ್ಧತೆಗಳನ್ನು ಬಹಿರಂಗಪಡಿಸುವ ಆಯ್ದ ಭಾಗಗಳು ಹೊರಬರುತ್ತವೆ ಎಂದು ತಿಳಿಯುತ್ತಿದ್ದಂತೆ ರಾಹುಲ್ ಅವರ ಬಾಯಿ ಮುಚ್ಚಿಸಿದರು” ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

“ನಿಯಮಗಳನ್ನು ಸ್ಪಷ್ಟವಾಗಿ ತಪ್ಪಾಗಿ ಪಾಲಿಸುತ್ತ ಸರ್ಕಾರವು ಚೀನಾ ವಿರುದ್ಧದ ಸಂಘರ್ಷದಲ್ಲಿ ತಮ್ಮ ಹಿಮಾಲಯನ್ ಪ್ರಮಾದಗಳ ಬಗ್ಗೆ ಸದನ ಮತ್ತು ಭಾರತದ ಜನರಿಗೆ ತಿಳಿಯದಂತೆ ಮಾಡುತ್ತಿದೆ” ಎಂದು ಕಾಂಗ್ರೆಸ್ ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...

ಇಂದೋರ್‌ನಲ್ಲಿ 1.36 ಲಕ್ಷ ಮತದಾರರ ಹೆಸರು ಡಿಲೀಟ್‌: ‘ದಾಖಲೆಗಳೇ ಇಲ್ಲ’ ಎಂದ ಅಧಿಕಾರಿಗಳು, ‘ಆರ್‌ಟಿಐ’ ಉತ್ತರದಲ್ಲಿ ಬಹಿರಂಗ

ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯಲ್ಲಿ ಒಟ್ಟು 1.36 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...