ಕಾಂತರಾಜು ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬಾರದು: ವೀರಶೈವ ಮಹಾ ಅಧಿವೇಶನದಲ್ಲಿ ನಿರ್ಣಯ

Date:

ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದ 24ನೇ ಮಹಾ ಅಧಿವೇಶನವು ಇಂದು(ಡಿ.24)ರ ಸಂಜೆ ಸಮಾರೋಪಗೊಂಡಿತು.

- Advertisement -

ಈ ಮಹಾಅಧಿವೇಶನದಲ್ಲಿ ಪಕ್ಷಭೇದ ಮರೆತು ರಾಜ್ಯದ ವೀರಶೈವ ಲಿಂಗಾಯತ ಸಮಾಜದ ರಾಜಕೀಯ ಮುಖಂಡರು ಸಮಾವೇಶದಲ್ಲಿ ಭಾಗಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಕಾಂಗ್ರೆಸ್‌ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿಗಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವರಾದ ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಧಾರ್ಮಿಕ ಗುರುಗಳಾದ ಸಾಣೇಹಳ್ಳಿ ಸ್ವಾಮೀಜಿ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

24ನೇ ಮಹಾ ಅಧಿವೇಶನದಲ್ಲಿಒಟ್ಟು 8 ನಿರ್ಣಯಗಳನ್ನು ಅಂಗೀಕರಿಸಲಾಗಿದೆ. ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಎಂಟು ನಿರ್ಣಯಗಳನ್ನು ಮಂಡನೆ ಮಾಡಿದರು. ಕಾಂತರಾಜು ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬಾರದು, ಎಲ್ಲ ಲಿಂಗಾಯತರು ಧರ್ಮದ ಕಾಲಂನಲ್ಲಿ ವೀರಶೈವ ಎಂದು ಬರೆಸಬೇಕು ಎನ್ನುವ ನಿರ್ಣಯ ಒಳಗೊಂಡಂತೆ ಒಟ್ಟು ಎಂಟು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ.

ಆ ಎಂಟು ನಿರ್ಣಯಗಳು ಹೀಗಿವೆ:

  1. ದೇಶದ ಅಖಂಡತೆ, ಏಕತೆ, ಸಮಗ್ರತೆ, ಭದ್ರತೆಯ ರಕ್ಷಣೆಗೆ ಮಹಾಸಭೆ ಹಾಗೂ ನಮ್ಮ ಸಮಾಜ ಸದಾ ಕಟಿಬದ್ಧವಾಗಿದ್ದು, ಅಂತಹ ಯಾವುದೇ ಹೋರಾಟ, ಪ್ರಯತ್ನಗಳಿಗೆ ಈ ಹಿಂದಿನಂತೆಯೇ ಪ್ರೋತ್ಸಾಹ, ಬೆಂಬಲ.
  2. 12ನೇ ಶತಮಾನದಲ್ಲೇ ಅನುಭವ ಮಂಟಪದ ಮೂಲಕ ಸಂಸತ್ತಿನ ಮತ್ತು ಸಮ ಸಮಾಜದ ಪರಿಕಲ್ಪನೆಯನ್ನು ಜಗತ್ತಿಗೆ ಕಟ್ಟಿಕೊಟ್ಟ, ಮಹಾನ್ ಮಾನವತಾವಾದಿ, ಸಾಮಾಜಿಕ ಕ್ರಾಂತಿಯ ಹರಿಕಾರ, ಜಗಜ್ಯೋತಿ ಬಸವೇಶ್ವರರ ಚಿಂತನೆ, ಅನುಭಾವ ಸಾರ್ವಕಾಲಿಕವಾಗಿದ್ದು, ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಬಸವತತ್ವ ಪರಿಪಾಲನೆ ಪರಮಾನ್ನವಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಗುರು ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರೆಂದು ಸರ್ಕಾರ ಅಧಿಕೃತವಾಗಿ ಘೋಷಿಸಬೇಕು.
  3. ವೀರಶೈವ -ಲಿಂಗಾಯಿತ ಸಮುದಾಯದಲ್ಲಿ ಲಕ್ಷಾಂತರ ಕಡು ಬಡವರಿದ್ದು, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿಯೂ ಅತ್ಯಂತ ಹಿಂದುಳಿದಿದ್ದಾರೆ. ಹೀಗಾಗಿ ವೀರಶೈವ – ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ (ಓ.ಬಿ.ಸಿ.) ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರವು ಭಾರತ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಮತ್ತು ಕೇಂದ್ರ ಸರ್ಕಾರ ಈ ಶಿಫಾರಸ್ಸನ್ನು ಅಂಗೀಕರಿಸಬೇಕು.
  4. ಪ್ರಸ್ತುತ ಚರ್ಚೆಯ ವಸ್ತುವಾಗಿರುವ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿಯ ಸಮೀಕ್ಷೆ ಅಂದರೆ ಜಾತಿ ಜನಗಣತಿ ಸುಮಾರು ಎಂಟು ವರ್ಷಗಳಷ್ಟು ಹಳೆಯದಾಗಿದ್ದು, ಅಧಿಕೃತವಾಗಿ ಅಂಗೀಕಾರವಾಗುವ ಮೊದಲೇ ಅದರಲ್ಲಿನ ಅಂಶಗಳು ಸೋರಿಕೆಯಾಗಿವೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಕಾಂತರಾಜು ಆಯೋಗದ ವರದಿಯನ್ನು ಸರ್ಕಾರ ಒಪ್ಪಿಕೊಳ್ಳದೆ, ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ವಾಸ್ತವಿಕತೆಯ ಮತ್ತು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಯ ಹಿಂದುಳಿದಿರುವಿಕೆಯ ಆಧಾರದ ಮೇಲೆ ವೈಜ್ಞಾನಿಕವಾಗಿ ಜಾತಿ ಜನಗಣತಿ ಆಗಬೇಕು.
  5. ಸಮಾಜದ ಒಳಿತಿಗಾಗಿ ಮತ್ತು ನಮ್ಮ ಸಮುದಾಯದ ನಿಖರ ಜನಸಂಖ್ಯೆಯ ಬಗ್ಗೆ ಜಗತ್ತಿಗೆ ತಿಳಿಸಲು, ಸರ್ಕಾರ ಮುಂದಿನ ದಿನಗಳಲ್ಲಿ ನಡೆಸುವ ಜನ ಗಣತಿಯ ವೇಳೆ ನಮ್ಮ ಸಮಾಜದ ಬಾಂಧವರು ಹಿಂದು ಮತ್ತು ತಮ್ಮ ಉಪ ಜಾತಿಯ ಹೆಸರುಗಳನ್ನು ಬರೆಸದೆ, ಧರ್ಮದ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದೇ ಬರೆಸಬೇಕು.
  6. ಎಲ್ಲ ರೈತರಿಗೆ ಅನುಕೂಲ ಆಗುವಂತೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು.
  7. ಸಮುದಾಯದ ಪ್ರಥಮ ಮುಖ್ಯಮಂತ್ರಿ ಲಿಂಗೈಕ್ಯರಾದ ಶ್ರೀ ನಿಜಲಿಂಗಪ್ಪನವರು ನಮ್ಮ ಸಮುದಾಯದ ಹೆಮ್ಮೆ. ಮಹಾಸಭಾ ಸಾಂಕೇತಿಕವಾಗಿ ಈ ಮಹಾ ಅಧಿವೇಶನದ ಮುಖ್ಯ ವೇದಿಕೆಗೆ ಅವರ ಹೆಸರಿಟ್ಟು ಗೌರವ ಸಲ್ಲಿಸಿದೆ. ನಿಜಲಿಂಗಪ್ಪನವರು ವಾಸವಿದ್ದ ಚಿತ್ರದುರ್ಗದ ಅವರ ನಿವಾಸವನ್ನು ಸರ್ಕಾರ ಖರೀದಿಸಿ, ಸಂರಕ್ಷಿಸಿ, ಅಭಿವೃದ್ಧಿಪಡಿಸಿ ನಿಜಲಿಂಗಪ್ಪನವರ ಸರಳತೆ, ಉದಾತ್ತ ಚಿಂತನೆ, ದಕ್ಷ ಆಡಳಿತದ ಚಿತ್ರಣವನ್ನು ನಾಡಿನ ಜನತೆಗೆ ಕಟ್ಟಿಕೊಡುವಂತೆ ಅರ್ಥಪೂರ್ಣವಾಗಿ ಶಾಶ್ವತ ಸ್ಮಾರಕ ನಿರ್ಮಾಣ ಮಾಡಲು, ಆ ಮನೆಯನ್ನು ಖರೀದಿಸಿ ಕಾರ್ಯಪ್ರವೃತ್ತವಾಗಿ ನಿಜಲಿಂಗಪ್ಪನವರ ಪುಣ್ಯ ಸ್ಮರಣೆಯ ದಿನದೊಳಗೆ ಪೂರ್ಣಗೊಳಿಸಬೇಕು. 2024ರೊಳಗೆ ಸ್ಮಾರಕ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ಈ ಮಹಾಧಿವೇಶನ ಒತ್ತಾಯಿಸುತ್ತದೆ.
  8. 24ನೇ ಮಹಾ ಅಧಿವೇಶನದ ಯಶಸ್ಸಿ ಪಕ್ಷಭೇದ ಮರೆತು ರಾಜ್ಯದ ವೀರಶೈವ ಲಿಂಗಾಯತ ಸಮಾಜದ ರಾಜಕೀಯ ಮುಖಂಡರು, ಧಾರ್ಮಿಕ ಮುಖಂಡರು ಮತ್ತು ಪ್ರತ್ಯಕ್ಷ-ಪರೋಕ್ಷ ಸಹಕರಿಸಿದವರಿಗೆ ಕೃತಜ್ಞತೆ.

ಎಂಟು ನಿರ್ಣಯಗಳನ್ನು ವೀರಶೈವ ಮಹಾ ಸಭೆಯ ಅಧ್ಯಕ್ಷ ಶಾಮನೂರು ಶಿವಂಕರಪ್ಪ ಅವರು ಮಂಡಿಸಿದ್ದು, ನಿರ್ಣಯಗಳು ಮಹಾ ಅಧಿವೇಶನದ ಗೊತ್ತುವಳಿ ಎಂದು ಸಭೆ ಅಂಗೀಕರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...