ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ ಸರ್ಕಾರ ಆದೇಶ

Date:

Advertisements

ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು, ಇದೀಗ ಬಿಜೆಪಿ–ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಗಂಭೀರತೆಯನ್ನು ಸರ್ಕಾರವು ಪರಿಗಣಿಸಿ, ಈ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಆದೇಶಿಸಿದೆ.

ವಾಲ್ಮೀಕಿ ನಿಗಮದ ತನಿಖೆಗೆ ರಚಿಸಿರುವ ಎಸ್‌ಐಟಿಗೆ ಸಿಐಡಿಯ ಅಪರ ಪೊಲೀಸ್‌ ನಿರ್ದೇಶಕ ಮನೀಷ್‌ ಖರ್ಬೀಕರ್‌ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

Advertisements

ಬೆಂಗಳೂರು ನಗರದ ಸಂಚಾರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹಾಗೂ ಸಿಐಡಿಯ ಪೊಲೀಸ್ ಅಧೀಕ್ಷಕ ರಾಘವೇಂದ್ರ ಕೆ ಹೆಗಡೆ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕರಾಗಿದ್ದ ಚಂದ್ರಶೇಖರ್ ಪಿ ಅವರು ವಾಲ್ಮೀಕಿ ನಿಗಮದಲ್ಲಿ ಅನುದಾನ ಹಣವು ದುರುಪಯೋಗವಾಗಿರುವುದಾಗಿ ಆರೋಪಿಸಿ ಡೆತ್ ನೋಟ್ ಬರೆದು ಮೇ 26ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಮೃತರ ಪತ್ನಿಯು ನೀಡಿದ ದೂರಿನ ಮೇರೆಗೆ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ವಾಲ್ಮೀಕಿ ನಿಗಮದ ಮುಖ್ಯ ನಿಬಂಧಕರಾದ ಎ. ರಾಜಶೇಖರ್ ರವರು ಅನುದಾನ ಹಣವು ಬ್ಯಾಂಕ್ ಮೂಲಕ ದುರ್ಬಳಕೆಯಾಗಿರುವುದಾಗಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ನಗರದ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ಚಂದ್ರಶೇಖರ್ ಡೆತ್‌ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ‌ಮೂವರು ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ವಾಲ್ಮೀಕಿ ನಿಗಮದ ಎಂ ಡಿ ಜೆ ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಅಮಾನತುಗೊಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X