ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಘಪರಿವಾರದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್ ಬಗ್ಗೆ ಸರ್ಕಾರ ಮೃದು ಧೋರಣೆ ಹೊಂದಿದೆಯೆಂದು ಖಂಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ, ಶರಣ ಪ್ರಕಾಶ ಪಾಟೀಲ್ ಹಾಗೂ ಎಂ.ಸಿ ಸುಧಾಕರ್ ನೇತೃತ್ವದಲ್ಲಿ ಯುವನಿಧಿ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ನಡೆದಿದೆ. ಸಭೆಯಲ್ಲಿ ಸರ್ಕಾರದ ನಡೆಯನ್ನು ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್‌ನನ್ನು ಯಾಕೆ ಇನ್ನೂ ಬಂಧಿಸಿಲ್ಲವೆಂದು ಪ್ರಶ್ನಿಸಿದ್ದಾರೆ.
ಸಭೆಯಲ್ಲಿ ಮಾತನಾಡಿದ ಪಕ್ಷದ ಮುಸ್ಲಿಂ ಮುಖಂಡ ಸಿ.ಎಂ ಖಾದರ್, “ಮುಸ್ಲಿಮರನ್ನು ಕಾಂಗ್ರೆಸ್ ಮತ ಬ್ಯಾಂಕ್ ರೀತಿ ನೋಡುತ್ತಿದೆಯೇ? ಪ್ರಭಾಕರ್ ಭಟ್ ವಿಚಾರದಲ್ಲಿ ಮೃದು ಧೋರಣೆ ಹೊಂದಿದೆಯೇ? ಸರ್ಕಾರವು ಮುಸ್ಲಿಮರ ಹಿತ ಕಾಪಾಡಬೇಕಲ್ಲವೇ?” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.