ಸರ್ಕಾರಿ ಭೂಮಿ ಕಬಳಿಕೆ | ನಿ. ನ್ಯಾಯಾಧೀಶರಿಂದ ಮರುಪರಿಶೀಲನೆಗೆ ಸೂಚನೆ: ಕೃಷ್ಣ ಭೈರೇಗೌಡ

Date:

Advertisements
  • ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಬಗ್ಗೆ ಗೊಂದಲವಿಲ್ಲ
  • ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಹೊಸ ಸಮಿತಿ ರಚನೆ

ನಕಲಿ ದಾಖಲೆ ಸಲ್ಲಿಸಿ ಬೆಂಗಳೂರು ಸುತ್ತಮುತ್ತ ಭೂಮಿ ಕಬಳಿಸಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಹಿರಿಯ ಅಧಿಕಾರಿಗಳು ಇಲ್ಲವೇ ನಿವೃತ್ತ ನ್ಯಾಯಾಧೀಶರ ಮೂಲಕ ಮರು ಪರಿಶೀಲನೆ ನಡೆಸಲು ಸೂಚಿಸಲಾಗಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಸುತ್ತಮುತ್ತ ಬೊಗಸ್ ದಾಖಲೆ ಸಲ್ಲಿಸಿ ಕಬಳಿಸಿರುವ ಬಗ್ಗೆ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಖಾಸಗಿ ವ್ಯಕ್ತಿಗಳಿಗೆ ಸರ್ಕಾರಿ ಭೂಮಿ ನೀಡಿರುವ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮರು ಪರಿಶೀಲನೆ ನಡೆಯಲಿದೆ. ಅದರಲ್ಲಿ ತಪ್ಪುಗಳು ಕಂಡು ಬಂದರೆ ಮತ್ತಷ್ಟು ಗಮನ ಹರಿಸಲು ನಿರ್ದೇಶಿಸಲಾಗಿದೆ.

ರೀಜಿನಲ್ ಕಮಿಷನರ್ ಅಥವಾ ನಿವೃತ್ತ ನ್ಯಾಯಾಧೀಶರ ಮೂಲಕ ಮರು ಪರಿಶೀಲನೆ ನಡೆಸಿ ವರದಿ ಪಡೆದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಲಹಂಕ ತಾಲೂಕಿನಲ್ಲೆ ಆರೇಳು ಪ್ರಕರಣ ನನ್ನ ಗಮನಕ್ಕೆ ಬಂದಿವೆ. ಅವುಗಳ ಬಗ್ಗೆಯೂ ಮರುಪರಿಶೀಲನೆ ನಡೆಯಲಿದೆ ಎಂದು ಹೇಳಿದರು.

Advertisements

ಕಾಂಗ್ರೆಸ್‌ ಗ್ಯಾರಂಟಿಗಳ ಬಗ್ಗೆ ಗೊಂದಲವಿಲ್ಲ

ಐದು ಗ್ಯಾರಂಟಿಗಳ ಕುರಿತು ಅಧಿಕಾರಿಗಳಿಂದ ಯಾವುದೇ ಗೊಂದಲ ಇಲ್ಲ. ಗ್ಯಾರಂಟಿ ಯೋಜನೆಗಳನ್ನು ಹೇಗೆ ಜಾರಿಗೊಳಿಸಬೇಕು ಎಂಬ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಯಾವ ಅಧಿಕಾರಿಗಳೂ ಹಣಕಾಸಿನ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿಲ್ಲ. ಹಣಕಾಸಿನ ವಿಚಾರವಾಗಿ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಆಯ್ಕೆಗಳನ್ನು ಕೊಡುತ್ತಾರೆ. ಅದರಲ್ಲಿ ಯಾವುದು ಸೂಕ್ತ ಎಂಬ ಬಗ್ಗೆ ಸಚಿವ ಸಂಪುಟ ತೀರ್ಮಾನ ಮಾಡಲಿದೆ ಎಂದರು.

ಗ್ಯಾರಂಟಿಗಳನ್ನು ಜಾರಿ ಮಾಡುವ ಬಗ್ಗೆ ನಮ್ಮ ನಿರ್ಧಾರ ಇದೆ. ಜಾರಿ ವೇಳೆ ಕೆಲವು ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ. ಯುವ ನಿಧಿ ಯೋಜನೆ ಅಡಿ ಪದವೀಧರರ ಮಾಹಿತಿ ಪಡೆಯಬೇಕಾಗುತ್ತದೆ. ಪದವಿ ಪ್ರಮಾಣ ಪತ್ರ ಸರಿ ಇದೆಯಾ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಾಗುತ್ತದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಜೆಟ್‌ ವಿಮಾನ ಪತನ; ಇಬ್ಬರು ಪೈಲಟ್‌ಗಳು ಪಾರು

ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಹೊಸ ಸಮಿತಿ

ಬಗರ್ ಹುಕುಂ ಸಾಗುವಳಿದಾರರ ಅರ್ಜಿ ವಿಲೇವಾರಿಗೆ ನೇಮಿಸಿದ್ದ ಸಮಿತಿ ವಜಾಗೊಂಡಿದೆ. ಮುಂದಿನ ಒಂದು ತಿಂಗಳಿನಲ್ಲಿ ಹೊಸ ಸಮಿತಿ ರಚನೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಮಲೆನಾಡು, ಕರಾವಳಿ ಭಾಗದಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯ ಜಮೀನಿನ ಬಗ್ಗೆ ಸಾಕಷ್ಟು ಗೊಂದಲ ಇದೆ. ಅರಣ್ಯ ಇಲಾಖೆಯವರ ಜೊತೆ ಚರ್ಚೆ ಮಾಡಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆ ಮಾಡಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಬೆಂಗಳೂರು ಸುತ್ತಮುತ್ತಲಿನ ನೆಲದಲ್ಲಿ ವಸತಿ ಬಡಾವಣೆ, ಕಯ್ಗಾರಿಕೆ ಮುಂತಾದ ಬಡಾವಣೆಗಳನ್ನು ಕಾಸಗಿಯವರ ನೆಲವನ್ನು ತನ್ನ ತೆಕ್ಕೆಗೆ ಪಡೆದು ಮಾಡಬೇಕು. ಕಾಸಗಿಯವರ ಅಟ್ಟಹಾಸ ಮಟ್ಟಹಾಕಬೇಕು.
    ಇನ್ನು ಮುಂದೆ ಬೆಂಗಳೂರಿನಲ್ಲಿ ಬಡಾವಣೆಮಾಡಿ ಬಿಡಿ ನಿವೇಶನಗಳನ್ನು ಹಂಚುವುದನ್ನು ನಿಲ್ಲಿಸಬೇಕು. ದೊಡ್ಡ ನಿವೇಶನಗಳನ್ನು ಮಾಡಿ ಅಲ್ಲಿ ಅಪಾರ‍್ಟ್‌ಮೆಂಟ್‌ಗಳನ್ನು ಆಳ್ವಿಕೆ/ಕಾಸಗಿಯವರು ಕಟ್ಟಲಿ. ನೆಲವೂ ಉಳಿಯುತ್ತದೆ.ಕುಡಿಯುವ ನೀರು ಮತ್ತಿತರ ಮೂಲಸವಲತ್ತುಗಳನ್ನು ಕಡಿಮೆವೆಚ್ಚದಲ್ಲಿ ಒದಗಿಸಬಹುದು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X