ನಿಗಮಗಳಿಗೆ ಕಾಂಗ್ರೆಸ್‌ನಿಂದ ಅನುದಾನ ಕಡಿತ, ದಲಿತರಿಗೂ ಅನುದಾನವಿಲ್ಲ: ಆರ್‌. ಅಶೋಕ್

Date:

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 60 ಪರ್ಸೆಂಟ್‌ ಕಮಿಷನ್‌ ಸರ್ಕಾರ. ಕಾಂಗ್ರೆಸ್‌ನ ಆಡಳಿತದಿಂದಾಗಿ ರಾಜ್ಯದ ದಿವಾಳಿಯ ಕಡೆಗೆ ಸಾಗುತ್ತಿದೆ. ‌ನಿಗಮಗಳಿಗೆ ಕಾಂಗ್ರೆಸ್‌ನಿಂದ ಅನುದಾನ ಕಡಿತವಾಗಿದೆ. ದಲಿತರಿಗೂ ಅನುದಾನವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪಿಸಿದರು.

- Advertisement -

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಹಿಮಾಚಲ ಪ್ರದೇಶ ಹಾಗೂ ಕೇರಳದಂತೆಯೇ ಕರ್ನಾಟಕ ಕೂಡ ದಿವಾಳಿಯ ಕಡೆಗೆ ಹೆಜ್ಜೆ ಇಡುತ್ತಿದೆ. ಗುತ್ತಿಗೆದಾರರಿಗೆ ಪಾವತಿಸಲು ಸರ್ಕಾರದ ಬಳಿ ಹಣವಿಲ್ಲ. ಬಿಜೆಪಿ ಸರ್ಕಾರಕ್ಕೆ 40 ಪರ್ಸೆಂಟ್‌ ಎಂದು ಆರೋಪಿಸಿದ ಗುತ್ತಿಗೆದಾರರು, ಈಗ ಕಾಂಗ್ರೆಸ್‌ ಸರ್ಕಾರ ಶೇ.60 ಕಮಿಶನ್‌ ಸರ್ಕಾರ ಎಂದು ಹೇಳಿ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ನೋಡುತ್ತಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಬೆಂಗಳೂರಿನಲ್ಲಿ 30-40 ನಿವೇಶನಕ್ಕೆ 10 ಲಕ್ಷ ರೂ. 40-60 ನಿವೇಶನಕ್ಕೆ 20 ಲಕ್ಷ ರೂ. ಇದಕ್ಕೂ ಹೆಚ್ಚಿನ ನಿವೇಶನಗಳಿಗೆ 40 ಲಕ್ಷ ರೂ. ಲಂಚ ಕಮಿಷನ್‌ ಕೊಡಬೇಕಿದೆ. ಗುತ್ತಿಗೆದಾರರಿಗೆ ಸರ್ಕಾರ 32 ಸಾವಿರ ಕೋಟಿ ರೂ. ನೀಡಬೇಕಿದೆ. ಈ ಹಣ ತರಲು ಎಲ್ಲದಕ್ಕೂ ಸರ್ಕಾರ ತೆರಿಗೆ ಹಾಕುತ್ತಿದೆ. ಇಲ್ಲವಾದರೆ ಗುತ್ತಿಗೆದಾರರಿಗೆ ಕೆಲಸ ಸ್ಥಗಿತಗೊಳಿಸುತ್ತಾರೆ. ಇದರ ನಡುವೆ ಆಶಾ ಕಾರ್ಯಕರ್ತೆಯರು ಧರಣಿ ಆರಂಭಿಸಿದ್ದಾರೆ. ಜೊತೆಗೆ ತೊಗರಿ ಖರೀದಿಗೆ ಸರ್ಕಾರದ ಬಳಿ ಹಣವಿಲ್ಲ” ಎಂದರು.

ಅನುದಾನ ಕಡಿತ, ಬಳಕೆ ಮಾಡಿಲ್ಲ

“ರಾಜ್ಯ ಬಜೆಟ್‌ನಲ್ಲಿ 3.22 ಲಕ್ಷ ಕೋಟಿ ರೂ. ನಲ್ಲಿ 1.79 ಲಕ್ಷ ಕೋಟಿ ರೂ. ಅಂದರೆ ಶೇ.55.69 ಖರ್ಚಾಗಿದೆ. ಇನ್ನೂ ಶೇ.45ರಷ್ಟು ಎರಡು ತಿಂಗಳಲ್ಲಿ ಖರ್ಚು ಮಾಡಬೇಕಿದೆ. ಎಸ್‌ಸಿಎಸ್‌ಪಿಯಲ್ಲಿ 28,527.02 ಕೋಟಿ ರೂ. ಇದ್ದರೆ, 13,923 ಕೋಟಿ ರೂ. ಅಂದರೆ ಶೇ.48.81 ಖರ್ಚು ಮಾಡಲಾಗಿದೆ. ಟಿಎಸ್‌ಪಿಯಲ್ಲಿ 11,515.39 ಕೋಟಿ ರೂ. ಇದ್ದರೆ, 4,937.59 ಕೋಟಿ ರೂ. ಅಂದರೆ ಶೇ.42.88 ಖರ್ಚಾಗಿದೆ. ವಿಶೇಷ ಅಭಿವೃದ್ಧಿ ಯೋಜನೆಯಡಿ, 3,077 ಕೋಟಿ ರೂ. ಇದ್ದರೆ 1,076 ಕೋಟಿ ರೂ. ಅಂದರೆ ಶೇ.34 ಖರ್ಚಾಗಿದೆ. ನುಡಿದಂತೆ ನಡೆದ ಎಂದು ಹೇಳಿ ಯಾವುದೇ ಅನುದಾನ ಖರ್ಚು ಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಬಹಳ ಮೋಸ ಮಾಡುತ್ತಾರೆ. ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಭೋವಿ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 95 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 55 ಕೋಟಿ ರೂ. ನೀಡಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 190 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್‌ 100 ಕೋಟಿ ರೂ. ನೀಡಿದೆ. ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 25 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 13 ಕೋಟಿ ರೂ. ಗೆ ಇಳಿಸಿದೆ” ಎಂದರು.

“ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಬಿಜೆಪಿ 106 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್‌ 50.10 ಕೋಟಿ ರೂ. ನೀಡಿದೆ. ನಿಜಶರಣ ಅಂಬಿಗರ ಚೌಡಯ್ಯ ನಿಗಮಕ್ಕೆ ಬಿಜೆಪಿ 25 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 5 ಕೋಟಿ ರೂ. ನೀಡಿದೆ. ಉಪ್ಪಾರ ನಿಗಮಕ್ಕೆ ಬಿಜೆಪಿ 15 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 8 ಕೋಟಿ ರೂ. ನೀಡಿದೆ. ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್‌ 60 ಕೋಟಿ ರೂ.ಗೆ ರಿಯಾಯಿತಿ ಮಾಡಿದೆ. ದೇವಾಲಯಗಳು ಮತ್ತು ಇತರೆ ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಬಿಜೆಪಿ 274.68 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ ಕೇವಲ 17.50 ಕೋಟಿ ರೂ. ನೀಡಿದೆ. ವಿವಿಧ ಮಠ ಹಾಗೂ ದೇವಾಲಯಗಳಿಗೆ ಮುಖ್ಯಮಂತ್ರಿಗಳ ವಿಶೇಷ ಸಹಾಯಧನದಡಿ ಬಿಜೆಪಿ 154.85 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 30 ಕೋಟಿ ರೂ. ನೀಡಿ ಅನ್ನಕ್ಕೂ ಕನ್ನ ಹಾಕಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಾಯಕರಿಗೆ ಪ್ರತಿಭಟನೆಗೆ ಜೊತೆಯಾಗಲು ಕ್ರಿಮಿನಲ್ ಆರೋಪಿಗಳೇ ಬೇಕು: ರಮೇಶ್‌ ಬಾಬು ವಾಗ್ದಾಳಿ

“ಹಿಂದೂ ರುದ್ರಭೂಮಿಗಳ ನಿರ್ವಹಣೆಗೆ ಬಿಜೆಪಿ 25 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 10 ಕೋಟಿ ರೂ. ಗೆ ಇಳಿಸಿದೆ. ನೇಕಾರರ ಯೋಜನೆಗೆ ಬಿಜೆಪಿ 125.77 ಕೋಟಿ ರೂ. ಕೊಟ್ಟರೆ, ಕಾಂಗ್ರೆಸ್‌ 10 ಕೋಟಿ ರೂ. ಕೊಟ್ಟಿದೆ. ಕಮಿಷನ್‌ ದಂಧೆಗಾಗಿ ಸರ್ಕಾರ ಇಡೀ ರಾಜ್ಯವನ್ನು ಕತ್ತಲೆಗೆ ದೂಡಿದೆ. ಸಚಿವ ಪ್ರಿಯಾಂಕ್‌ ಖರ್ಗೆಯವರ ಆಪ್ತರನ್ನು ಇನ್ನೂ ಬಂಧಿಸಿಲ್ಲ. ಬಹುಶಃ ಸುರಕ್ಷತೆ ದೃಷ್ಟಿಯಿಂದ ಅವರನ್ನು ಪೊಲೀಸರು ಕಬ್ಬಿನ್‌ ಗದ್ದೆಯಲ್ಲಿ ಇರಿಸಿರಬಹುದು. ಅವರ ಆಪ್ತರು ರೌಡಿಶೀಟರ್‌ ಪಟ್ಟಿಯಲ್ಲಿದ್ದು, ಆ ಪಟ್ಟಿಯಿಂದ ಹೆಸರು ತೆಗೆಸಿದ್ದೇ ಕಾಂಗ್ರೆಸ್‌ ನಾಯಕರು” ಎಂದರು.

“ಸಚಿವ ರಾಮಲಿಂಗಾರೆಡ್ಡಿ ಹಳೆಯ ಸುದ್ದಿ ಹೇಳಿದ್ದಾರೆ. ನಾನು ಸಚಿವನಾಗಿದ್ದಾಗ ಸಾರಿಗೆ ನಿಗಮಗಳನ್ನು ನಷ್ಟಕ್ಕೆ ದೂಡಲಿಲ್ಲ. ಎಲ್ಲ ಕಡೆ ಬಸ್‌ ನಿಲ್ದಾಣ ನಿರ್ಮಿಸಿ ಬಾಡಿಗೆ ಮೂಲಕ ಆದಾಯ ಬರುವಂತೆ ಮಾಡಲಾಗಿತ್ತು. ಈಗ ಸರ್ಕಾರ ಎಲ್ಲೂ ನಿಲ್ದಾಣ ನಿರ್ಮಿಸಿಲ್ಲ. ನಾನು ಸಚಿವ ಸ್ಥಾನದಿಂದ ಹೊರಬಂದಾಗ ಬಿಎಂಟಿಸಿ ಲಾಭದಲ್ಲಿತ್ತು. ಕೋವಿಡ್‌ ಸಮಯದಲ್ಲಿ ಆರ್ಥಿಕ ನಷ್ಟವಾಗಿದ್ದಾಗಲೂ ಟಿಕೆಟ್‌ ದರ ಏರಿಸಲಿಲ್ಲ. ಗ್ಯಾರಂಟಿಗಳಿಂದಾಗಿ ಈಗ ಟಿಕೆಟ್‌ ದರ ಏರಿಸಿದ್ದಾರೆ” ಎಂದು ಹೇಳಿದರು.

ಎಚ್‌ಎಂಪಿವಿ, ಸಿದ್ಧತೆ ಅಗತ್ಯ

“ಎಚ್‌ಎಂಪಿವಿ ಹೊಸ ವೈರಸ್‌ ಹರಡುತ್ತಿರುವುದರಿಂದ ಸರ್ಕಾರ ಟಾಸ್ಕ್‌ ಫೋರ್ಸ್‌ ರಚಿಸಿ ಸಿದ್ಧತೆ ಮಾಡಿಕೊಳ್ಳಬೇಕು. ಆಕ್ಸಿಜನ್‌ ವ್ಯವಸ್ಥೆ ಮಾಡಬೇಕು. ಜಿಲ್ಲಾ, ತಾಲೂಕು ಕೇಂದ್ರದಲ್ಲಿ ಅಧಿಕಾರಿಗಳು ಆಡಿಟ್‌ ಮಾಡಬೇಕು. ಸರ್ಕಾರ ಕೂಡಲೇ ಸಿದ್ಧತೆ ಮಾಡಿಕೊಳ್ಳಲಿ” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....