ರಿಯಲ್‌ ಎಸ್ಟೇಟ್‌ ದಂಧೆಗಾಗಿ ಗ್ರೇಟರ್‌ ಬೆಂಗಳೂರು ವಿಧೇಯಕ: ಜೆಡಿಎಸ್‌ ಆರೋಪಿಸಿ ಪ್ರತಿಭಟನೆ

Date:

Advertisements

ರಿಯಲ್‌ ಎಸ್ಟೇಟ್‌ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿದ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ.

ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ, “ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರಕಾರವು ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿದೆ. ವಿಧಾನಮಂಡಲದಲ್ಲಿ ಕಾಂಗ್ರೆಸ್‌ ಸರಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಪಾಸ್‌ ಮಾಡಿಕೊಂಡಿದೆ. ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು” ಎಂದು ಆಗ್ರಹಿಸಿದರು.

Advertisements

“ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರಿಲ್ಲ, ಸರಿಯಾದ ಮಲಸೌಕರ್ಯಗಳು ಇಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಈ ಸರಕಾರದಲ್ಲಿ ನಯಾಪೈಸೆ ಹಣವಿಲ್ಲ. ಈಗ ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಜನರನ್ನು ಯಾಮಾರಿಸಲು ಹೊರಟಿದೆ. ಬೇಸಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶುರುವಾಗಿಲ್ಲ. ಆಗಲೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಒಂದು ನೀರಿನ ಟ್ಯಾಂಕರ್‌ ಗೆ ಐದು ಸಾವಿರ, ಆರು ಸಾವಿರ ಕೊಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಂಗಳೂರಿನ ಜನ ನಿಜಕ್ಕೂ ದಿನಿತ್ಯವೂ ಸತ್ತು ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರಕಾರದ ದುರಾಡಳಿತವೇ ಕಾರಣ” ಎಂದು ದೂರಿದರು.

“ಕೂಡಲೇ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯ ಸರಕಾರ ವಾಪಸ್‌ ವಿಧೇಯಕವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ನಗರದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕರ ಕಾರ್ಯಕ್ರಮಗಳನ್ನು ನಡೆಯಲು ಬಿಡುವುದಿಲ್ಲ. ಅಲ್ಲೆಲ್ಲ ನಾವು ಪಕ್ಷದ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ” ಎಂದು ಎಚ್ಚರಿಕೆ ಕೊಟ್ಟರು.

“ಮತ್ತೆ ಹಾಲಿನ ದರ ಏರಿಕೆ ಮಾಡಲು ಈ ಸರಕಾರ ಹೊರಟಿದೆ. ಬೆಂಗಳೂರು ಜನರನ್ನು ಈ ಸರಕಾರ ಏನು ಮಾಡಲು ಹೊರಟಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಸರಕಾರ ಬಂದಾಗಿನಿಂದ 43,೦೦೦ ಕೋಟಿ ರೂಪಾಯಿ ಹೆಚ್ಚುವರಿ ತರೆಇಗೆ ಹಾಕಿದ್ದೀರಿ. ಇದು ಬಹಳ ಅನ್ಯಾಯ” ಎಂದು ಅವರು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎ.ಜವರಾಯಿ ಗೌಡ, ಮಾಜಿ ಎಂಎಲ್‌ ಸಿ ಕೆ.ಎ. ತಿಪಪೇಸ್ವಾಮಿ. ಬೆಂಗಳೂರು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌, ಮುಖಂಡರಾದ ನಾಗೇಶ್‌ ರಾವ್‌, ವೆಂಕಟಸ್ವಾಮಿ, ವೇಣುಗೋಪಾಲ್‌, ಮಂಗಳಮ್ಮ ಪ್ರವೀಣ್‌ ಕುಮಾರ್‌, ಸ್ಯಾಮುಯಲ್‌, ಅಪ್ರೋಜ್‌ ಬೇಗ್‌ ಸೇರಿದಂತೆ ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X