ಬೆಳಗಾವಿ | ಏಪ್ರಿಲ್‌ನಿಂದ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

Advertisements

ಸವದತ್ತಿಯಲ್ಲಿ ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿದ ಆರೋಗ್ಯ ಸಚಿವ ಗುಂಡೂರಾವ್

ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಭಾನುವಾರ ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಸಚಿವರು ಮಾತನಾಡುತ್ತಿದ್ದರು.

Advertisements

ಆರೋಗ್ಯ ಸೇವೆಗಳನ್ನ ಬಡ ವರ್ಗದ ಜನರ ಬಳಿಗೆ ತರುವಲ್ಲಿ ಉಚಿತ ಆರೋಗ್ಯ ತಪಾಸಣಾ ಮೇಳಗಳು ಯಶಸ್ವಿಯಾಗುತ್ತಿವೆ. ದೊಡ್ಡಮಟ್ಟದ ಆರೋಗ್ಯ ಮೇಳಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲಪಡಿಸಲು ತಾಲೂಕುಗಳಲ್ಲಿ ನಡೆಸಲಾಗುತ್ತಿದೆ. ಕೊಳ್ಳೆಗಾಲ, ಮಾನ್ವಿ ಬಳಿಕ ಇದೀಗ ಸವದತ್ತಿಯಲ್ಲೂ ಆರೋಗ್ಯ ಮೇಳ ಯಶಸ್ವಿಯಾಗಿದೆ ಎಂದರು.‌

ಇದೇ ವೇಳೆ ಸವದತ್ತಿ ತಾಲೂಕು ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು 46 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ಬೆಳಗಾವಿ ಜಿಲ್ಲೆಯ ರಾಮದುರ್ಗಾ ಹಾಗೂ ಕಿತ್ತೂರು ತಾಲೂಕು ಅಸ್ಪತ್ರೆಗಳಿಗೂ ಸುಸಜ್ಜಿತವಾದ ನೂತನ ಕಟ್ಟಡ ನಿರ್ಮಿಸಲಾಗುವುದು. ಅಲ್ಲದೇ, ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕ ಜಿಲ್ಲಾಸ್ಪತ್ರೆಯನ್ನ ಗೋಕಾಕ್‌ನಲ್ಲಿ ನಿರ್ಮಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನ ನೀಡುವುದರ ಜೊತೆಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಈ ಬಾರಿಯ ಬಜೆಟ್‌ನಲ್ಲಿ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸಿದ್ದಾರೆ. ಅಥಣಿಗೆ 50 ಹಾಸಿಗೆಯ ತಾಯಿ ಮಕ್ಕಳ‌ ಆಸ್ಪತ್ರೆ ನೀಡಿದ್ದೇವೆ. ಆರೋಗ್ಯ ಸೇವೆಗಳಲ್ಲಿ ಸಾಕಷ್ಟು ಸುಧಾರಣೆ ತರುವತ್ತ ಸತತವಾಗಿ ಪ್ರಯತ್ನಿಸಲಾಗುತ್ತಿದೆ. ಬಡ ಜನರ ಪರ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.‌

ಹಳ್ಳಿಗಾಡಿನ ಜನರು ಬಡವರು ತಮ್ಮ ಆರೋಗ್ಯ ತಪಾಸಣೆ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಬಾರದು.. ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳ ವಿಚಾರದಲ್ಲಿ ನಮ್ಮ ಜನರು ಎಚ್ಚರಿಕೆ ವಹಿಸುವ ಅಗತ್ಯತೆ ಇದೆ. ಆರಂಭಿಕ ಹಂತದಲ್ಲಿ ಈ ಕಾಯಿಲೆಗಳನ್ನ ಪತ್ತೆ ಹಚ್ಚಿದರೆ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಅಲ್ಲದೇ, ಮುಂದೆ ಈ ಕಾಯಿಲೆಗಳಿಂದ ಎದುರಾಗುವ ಆಪತ್ತುಗಳಿಂದ ಬಡ ಜನರನ್ನ ಪಾರು ಮಾಡಬಹುದಾಗಿದೆ. ಹೀಗಾಗಿಯೇ ನಮ್ಮ ಕಾಂಗ್ರೆಸ್ ಸರ್ಕಾರ ಗೃಹ ಆರೋಗ್ಯ ಯೋಜನೆ ಜಾರಿಗೆ ತಂದಿದೆ. 30 ವರ್ಷ ಮೇಲ್ಪಟ್ಟ ರಾಜ್ಯದ ಎಲ್ಲ ಜನರನ್ನು ತಪಾಸಣೆಗೆ ಒಳಪಡಿಸಿ, ಉಚಿತವಾಗಿ ಔಷಧಿಗಳನ್ನ ಜನರ ಬಳಿಗೆ ಒದಗಿಸುವ ಯೋಜನೆ ಇದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಈಗಾಗಲೇ ಗೃಹ ಆರೋಗ್ಯ ಯೋಜನೆಯನ್ನ ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ. ನಮ್ಮ ಜನರು ಯೋಜನೆಯ ಲಾಭ ಪಡೆದುಕೊಳ್ಳಬೇಕು. ಜನರ ಮನೆ ಬಾಗಿಲಿಗೆ ಆರೋಗ್ಯ ಸಿಬ್ಬಂದಿಗಳು ಭೇಟಿ ನೀಡಿ, ರಕ್ತದೊತ್ತಡ, ಮಧುಮೇಹ ಕ್ಯಾನ್ಸರ್ ಸೇರಿದಂತೆ ಮಾನಸಿಕ ಕಾಯಿಲೆಗಳ ಬಗ್ಗೆ ತಪಾಸಣೆ ನಡೆಸಲಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಗೃಹ ಆರೋಗ್ಯ ಯೋಜನೆ ದೊಡ್ಡ ಬದಲಾವಣೆಯನ್ನ ತರುವ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X