ಗೃಹಜ್ಯೋತಿ ಅರ್ಜಿ ಸಲ್ಲಿಕೆಗೆ ಜು. 27 ಕಡೆ ದಿನ: ಇಂಧನ ಸಚಿವ ಕೆ ಜೆ ಜಾರ್ಜ್

Date:

ಗೃಹಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆಗೆ ಜು. 27ರಂದು ಕಡೆ ದಿನವಾಗಿ ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗೃಹಜ್ಯೋತಿಗೆ ಜುಲೈ 27ರಂದು ಅರ್ಜಿ ಸಲ್ಲಿಕೆಗೆ ಕಡೆ ದಿನವಾಗಿ ನಿಗದಿಪಡಿಸಲು ತೀರ್ಮಾನಿಸಲಾಗಿದ್ದು, ಮುಂದಿನ ಎರಡು ತಿಂಗಳು ವಿದ್ಯುತ್ ಅದಾಲತ್ ಮಾಡಲಾಗುತ್ತದೆ. ಗೃಹಜ್ಯೋತಿ ಸೌಲಭ್ಯ ಪಡೆಯಲು ಅಡ್ಡಿಯಾಗಿರುವ ಕೆಲವಾರು ವ್ಯಾಜ್ಯಗಳನ್ನು, ಕುಂದುಕೊರತೆಗಳನ್ನು ನಿವಾರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್‌ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ರಾಜ್ಯದಾದ್ಯಂತ ಒಂದು ಕೋಟಿಗೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ವಿದ್ಯುತ್‌ ಬಾಕಿ ಇರುವವರಿಗೂ ಈ ಯೋಜನೆಯ ಲಾಭ ಪಡೆಯಲು ಅನುವು ಮಾಡಿಕೊಟ್ಟು, ಬಾಕಿ ಬಿಲ್‌ ಪಾವತಿಗೆ ಸೆಪ್ಟೆಂಬರ್‌ ವರೆಗೂ ಗಡುವು ನೀಡಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರತಿ ಕುಟುಂಬಕ್ಕೆ 200 ಯುನಿಟ್‌ ಉಚಿತ ವಿದ್ಯುತ್‌ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ನಿಗದಿ ಮಾಡಿಲ್ಲ ಎಂದು ಹೇಳಲಾಗಿತ್ತು. ಪ್ರತಿ ತಿಂಗಳ 25ರ ಒಳಗೆ ಅರ್ಜಿ ಸಲ್ಲಿಸಿದರೆ, ಮುಂದಿನ ತಿಂಗಳ ಬಿಲ್‌ ಉಚಿತ ಎಂದು ಹೇಳಲಾಗಿತ್ತು. ಆದರೆ, ಈಗ ಇದ್ದಕ್ಕಿದ್ದಂತೆ ಇಂಧನ ಇಲಾಖೆ ಸಚಿವರು ತಮ್ಮ ನಿರ್ಧಾರ ಬದಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಭಾಧ್ಯಕ್ಷ ಸ್ಥಾನಕ್ಕೇರಲು ಟ್ರೋಲರ್‌ ಕಾರಣ, ಧೈರ್ಯದಿಂದ ಮಾತನಾಡಿ: ನೂತನ ಶಾಸಕರಿಗೆ ಖಾದರ್‌ ಕಿವಿಮಾತು

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...

ಶುಕ್ಲಾ ಜೊತೆ ಕರಣ್ ಥಾಪರ್ ಮಾತುಕತೆ: ಮಹಾನಾಯಕನ ಐಬು ಮತ್ತು ಅಂಧಭಕ್ತರ ಹೂಂಕಾರ

ಭಾರತ ದೇಶ ಕಳೆದ ಹತ್ತು ವರ್ಷಗಳಿಂದ ಅದೆಂಥ ಕರಾಳಕೂಪಕ್ಕೆ ಜಾರುತ್ತಿದೆ ಎಂಬುದರ...

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...