ಗೃಹ ಜ್ಯೋತಿ | ಅರ್ಜಿ ಸಲ್ಲಿಸಲು ಲಂಚ ನೀಡಬೇಕಿಲ್ಲ, ಹಣ ಪಡೆದವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿಕೆ ಶಿವಕುಮಾರ್

Date:

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಎಚ್ಚರಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಜನರಲ್ಲಿ ನಾನು ಮಾಡುವ ಮನವಿ ಒಂದೇ, ಯಾರೂ ದುಡ್ಡು ಕೊಡಬೇಡಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

20.10 ಲಕ್ಷ ಗ್ರಾಹಕರಿಂದ ನೋಂದಣಿ

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯ ನೋಂದಣಿ ಜೂನ್‌ 18ರಿಂದ ಪ್ರಾರಂಭವಾಗಿದೆ. ಮೊದಲ ದಿನ 96,305 ಗ್ರಾಹಕರು ನೋಂದಣಿ ಮಾಡಿಸಿದ್ದಾರೆ. ಈವರೆಗೂ ಒಟ್ಟು 20.10 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿದ್ದಾರೆ.

ಗ್ರಾಹಕರು ಕರ್ನಾಟಕ ಒನ್‌, ಬೆಂಗಳೂರು ಒನ್‌ ಹಾಗೂ ಗ್ರಾಮ ಒನ್‌ ಹಾಗೂ ವಿದ್ಯುತ್‌ ಕಚೇರಿಗಳಲ್ಲಿ ನೋಂದಣಿ ಮಾಡಿಸಬಹುದು. ಅಲ್ಲದೇ ಸ್ವಂತ ಕಂಪ್ಯೂಟರ್‌, ಲ್ಯಾಪ್‌ಟಾಪ್‌ ಹಾಗೂ ಮೊಬೈಲ್‌ ಫೋನ್‌ಗಳಲ್ಲೂ ನೋಂದಣಿ ಮಾಡಿಕೊಳ್ಳಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....