ವೇಗ ಪಡೆದುಕೊಂಡ ‘ಗೃಹ ಜ್ಯೋತಿ’ ನೋಂದಣಿ : 45.61 ಲಕ್ಷ ಮಂದಿಯಿಂದ ಅರ್ಜಿ ಸಲ್ಲಿಕೆ

Date:

  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಇನ್ನೂ ನಿಗದಿಪಡಿಸದ ಕೊನೆಯ ದಿನಾಂಕ
  • ಪ್ರತ್ಯೇಕ ವೆಬ್ ಸೈಟ್ ಲಿಂಕ್ ಬಳಿಕ ವೇಗ ಪಡೆದುಕೊಂಡ ಅರ್ಜಿ ಸಲ್ಲಿಕೆ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ ‘ಗೃಹ ಜ್ಯೋತಿ’ ನೋಂದಣಿಯ ಸರ್ವರ್​ ಸಮಸ್ಯೆ ಸರಿಯಾಗಿದ್ದು, ಇನ್ನಷ್ಟು ವೇಗ ಪಡೆದುಕೊಂಡಿದೆ. ಅಲ್ಲದೇ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಭಾನುವಾರ(ಜೂ.25) ಸರ್ಕಾರ ಇನ್ನೂ ಸರಳ ಮಾಡಿದೆ.

- Advertisement -

ಶನಿವಾರ(ಜೂ.24) ಸಂಜೆ 8 ಗಂಟೆಯವರೆಗೆ ಒಟ್ಟು 45,61,662 ಗ್ರಾಹಕರು ನೋಂದಣಿ ಮಾಡಿಕೊಂಡಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇ-ಆಡಳಿತ ಇಲಾಖೆಯು ಹೊಸದಾಗಿ ಪ್ರತ್ಯೇಕ ನೋಂದಣಿ ಲಿಂಕ್ ಅನ್ನು ರಾಜ್ಯದ 2,000 ವಿದ್ಯುಚ್ಛಕ್ತಿ ಕಚೇರಿಗಳಿಗೆ ನೀಡಿದ ನಂತರ ನೋಂದಣಿ ಪ್ರಕ್ರಿಯೆ ವೇಗ ಪಡೆದುಕೊಂಡಿದೆ.

ಶುಕ್ರವಾರ (ಜೂ. 23) 10,93,606 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು. ಶನಿವಾರ (ಜೂ. 24) ಸಂಜೆ 8 ಗಂಟೆಯವರೆಗೆ 11,17,208 ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿ 200 ಯೂನಿಟ್‌ವರೆಗೆ ವಿದ್ಯುತ್ ಬಳಸುವ ಗ್ರಾಹಕರ ಸಂಖ್ಯೆ 2.14 ಕೋಟಿ ಇದ್ದು, ಯೋಜನೆಗೆ ನೋಂದಣಿ ಮಾಡಲು ಸಾರ್ವಜನಿಕರು ಭಾರೀ ಉತ್ಸುಕತೆ ತೋರುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಚಿರತೆ ಸೆರೆಗೆ ಬೋನಿನಲ್ಲಿಟ್ಟಿದ್ದ ಮೇಕೆಯನ್ನೆ ಕದ್ದ ಕಳ್ಳರು

ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ನಾಡ ಕಚೇರಿ ಹಾಗೂ ಬಾಪೂಜಿ ಕೇಂದ್ರಗಳಲ್ಲಿ ಗ್ರಾಹಕರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಕಂಪ್ಯೂಟರ್, ಲ್ಯಾಪ್ ಟಾಪ್, ಮೊಬೈಲ್ ಫೋನ್ ಹಾಗೂ ಸೈಬರ್ ಕೇಂದ್ರಗಳಲ್ಲಿ ಕೂಡ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಕೇವಲ

ಈ ಯೋಜನೆಯ ಫಲಾನುಭವಿಗಳಾಗಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಯಾವುದೇ ಗಡುವನ್ನು ನಿಗದಿಪಡಿಸದ ಕಾರಣ ಗ್ರಾಹಕರು ಆತಂಕಪಡದೆ https://sevasindhugs.karnataka.gov.in ಪೋರ್ಟಲ್ ಮೂಲಕ ನೋಂದಾಯಿಸಬಹುದು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 2,350ಕ್ಕೂ ಹೆಚ್ಚು ಅನಾಥರು, ಅಂಗವಿಕಲರು, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ

ವೃತ್ತಿ ಕೇವಲ ಜೀವನೋಪಾಯದ ಮಾರ್ಗವಾಗದೆ, ಸಮಾಜ ಸೇವೆಯ ಸಾಧನವಾಗುವ ಮೂಲಕ ಮಾನವೀಯತೆಯ...

ಉಡುಪಿ | ಹಾಲಿನ ಬೆಲೆ ಏರಿಕೆ: ಮಹಿಳೆಯರ ಅಡುಗೆ ಮನೆಯ ಲೆಕ್ಕಾಚಾರಕ್ಕೆ ಸರ್ಕಾರದ ಹೊಡೆತ !

ಬೆಲೆ ಏರಿಕೆಯ ಬಿಸಿ ಈಗ ಜನಸಾಮಾನ್ಯರ ಅಡುಗೆ ಮನೆಯನ್ನೂ ತಟ್ಟಿದೆ. ಅಡುಗೆ...

ಯಾದಗಿರಿ | ನ.30ರವರೆಗೆ ಕಾಲುವೆಗೆ ನಿರಂತರ ನೀರು ಹರಿಸಿ, ಎಕರೆಗೆ ₹50 ಸಾವಿರ ಪರಿಹಾರ ನೀಡಿ: ರೈತರ ಆಗ್ರಹ

ತೀವ್ರ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರ ನೆರವಿಗೆ ಧಾವಿಸುವಂತೆ ಆಗ್ರಹಿಸಿ, ಎಕರೆಗೆ...

ಉಡುಪಿ | ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಹೆದರುವುದಿಲ್ಲ, ಬಿಜೆಪಿಗೆ ತಾಕತ್ತಿದ್ದರೆ ಎದುರಿಸಿ: ಸುರೇಶ್ ಶೆಟ್ಟಿ ಬನ್ನಂಜೆ

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುವ ಬೆದರಿಕೆಗಳಿಗೆ ಕಾಂಗ್ರೆಸ್ಸಿಗರು ಹೆದರುವುದಿಲ್ಲ....