‘ಗೃಹ ಲಕ್ಷ್ಮಿ’ ಯೋಜನೆ | ನಾಳೆಯಿಂದಲೇ ನೋಂದಣಿ ಆರಂಭ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Date:

ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ಯೋಜನೆ ರೂಪ ನೀಡಿ ಜಾರಿಗೊಳಿಸುತ್ತಿದೆ. ಮಹಿಳೆಯರಿಗಾಗಿಯೇ ಪ್ರತ್ಯೇಕವಾಗಿ ರೂಪಿಸಿದ್ದ ಎರಡು ಯೋಜನೆಗಳಲ್ಲಿ ಶಕ್ತಿ ಯೋಜನೆ ಈಗಾಗಲೇ ಜಾರಿಯಾಗಿದ್ದು, ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದೆ. ಈಗ ಮತ್ತೊಂದು ನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆಗೆ ಜುಲೈ 19ರಿಂದ ನೋಂದಣಿ ಆರಂಭವಾಗಲಿದೆ.

- Advertisement -

ಕುಟುಂಬದ ಯಜಮಾನಿಗೆ ಮಾಸಿಕ ₹2,000 ರೂ. ನೀಡುವ ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದೆ. ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯತೆ ಇಲ್ಲ. ಹಾಗಾದರೆ ಯೋಜನೆಯ ಲಾಭ ಪಡೆಯಲು ನೋಂದಣಿ ಮಾಡಿಸುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡುವ ‘ಗೃಹಲಕ್ಷ್ಮಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತರಲು ಮುಂದಾಗಿದೆ.

ಯಾರು ಅರ್ಹರು? ಮಾರ್ಗಸೂಚಿಗಳೇನು?

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.

ಅರ್ಜಿಯಲ್ಲಿನ ಅಂಶಗಳ ಬಗ್ಗೆ ನಂತರ ಪರಿಶೀಲನೆ ಮಾಡಲಾಗುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುವುದು ಮತ್ತು ಅಂತಹವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ, ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಮಾಹಿತಿ ನೀಡಿದೆ.

ಮಾಹಿತಿಗೆ ಸಹಾಯ ವಾಣಿ

ಪಡಿತರ ಚೀಟಿಯ ಸಂಖ್ಯೆಯನ್ನು 8147500500 ಈ ಸಂಖ್ಯೆಗೆ ಎಸ್‌ಎಂಎಸ್‌ ಮಾಡಬಹುದು. ಕೂಡಲೇ ಮುಖ್ಯಸ್ಥೆಗೆ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಹೋಗುತ್ತೆ. ಹೀಗಾಗಿ ಯೋಜನೆಯಲ್ಲಿ ಯಾವುದೇ ಗೊಂದಲ ಇಲ್ಲ. ಯಾವ ಕೇಂದ್ರ, ದಿನಾಂಕ, ಸಮಯ ಎಲ್ಲ ಮಾಹಿತಿಯೂ ಫಲಾನುಭವಿ ಮಹಿಳೆಗೆ ಹೋಗಲಿದೆ. ಇನ್ನೂ ಗೊಂದಲವಿದ್ದರೆ ಇಲಾಖೆ 1902 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಹಣ ಜಮೆ ಯಾವಾಗ?
ಫಲಾನುಭವಿಗಳಿಗೆ ಆಗಸ್ಟ್‌ನಲ್ಲಿ ಹಣ ಜಮೆ ಆಗಲಿದೆ. ಯೋಜನೆಗೆ ಚಾಲನೆ ನೀಡಲು ಪಕ್ಷದ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ರಾಷ್ಟ್ರೀಯ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಆಗಸ್ಟ್ 16 ಅಥವಾ 17ರಂದು ಯಜಮಾನಿ ಖಾತೆಗೆ ಹಣ ಜಮೆ ಆಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ವಿಪಕ್ಷ ನಾಯಕ ಆಯ್ಕೆ | ಕ್ಷಣಕ್ಕೊಂದು ಹೇಳಿಕೆ, ಮನಸಲ್ಲೇ ಮಂಡಿಗೆ ತಿನ್ನುತ್ತಿದ್ದಾರಾ ಕುಮಾರಸ್ವಾಮಿ?

ಪ್ರಜಾಪ್ರತಿನಿಧಿಗಳ ನೇಮಕ

ಗೌರವಧನದ ಆಧಾರದ ಮೇಲೆ ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳನ್ನು ಸರ್ಕಾರ ನೇಮಕ ಮಾಡಿಕೊಂಡಿದೆ. ಒಂದು ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳಲ್ಲಿ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ಕಲ್ಪಿಸಲಾಗಿದೆ. ಆದರೆ, ಈ ಕೇಂದ್ರಗಳಲ್ಲಿ ಉಂಟಾಗಬಹುದಾದ ಒತ್ತಡ ತಪ್ಪಿಸುವ ಸಲುವಾಗಿ ಮೊಬೈಲ್​ ಆ್ಯಪ್​ ಮೂಲಕವು ಸಹ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗುತ್ತದೆ. ಈ ಮೊಬೈಲ್​ ಆ್ಯಪ್​ ಮೂಲಕ ಅರ್ಜಿ ಭರ್ತಿ ಮಾಡಿ ಸಲ್ಲಿಸಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...