ಗೃಹಲಕ್ಷ್ಮಿ ಅರ್ಜಿಗೆ ಯಾರೂ ಹಣ ಕೊಡಬೇಡಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೂ ದುಡ್ಡು ಕೊಡಬಾರದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

- Advertisement -

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರೂ. ಕೂಡ ಖರ್ಚಿಲ್ಲದೆ ಮಹಿಳೆಯರಿಗೆ ಹಣ ನೀಡಬೇಕೆನ್ನುವುದು ಸರ್ಕಾರದ ಉದ್ದೇಶ. ಹಾಗಾಗಿ ಸೇವೆ ನೀಡುವ ಕೇಂದ್ರ ಮತ್ತು ವ್ಯಕ್ತಿಗಳಿಗೆ ಸರ್ಕಾರವೇ ಸೇವಾ ಶುಲ್ಕ ಎಂದು ಒಂದು ಅರ್ಜಿಗೆ 20 ರೂ. ನೀಡಲು ನಿರ್ಧರಿಸಿದೆ. ಹಾಗಾಗಿ ಯಾರಾದರೂ ಬಂದು ಹಣ ಕೊಡಿ ಎಂದು ಕೇಳಿದರೆ ಕೊಡಬೇಡಿ ಎಂದು ವಿನಂತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೆಲವು ಕಡೆ ಮಧ್ಯವರ್ತಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿದ್ದೇನೆ. ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದೆ ಮಹಿಳೆಯರ ಖಾತೆಗೆ ಹಣ ತಲುಪಬೇಕು ಎನ್ನುವುದು ನಮ್ಮ ಉದ್ದೇಶ. ಇದಕ್ಕೆ ಯಾರೂ ಅವಕಾಶ ಕೊಡಬಾರದು. ಅರ್ಜಿ ಸಲ್ಲಿಸಲು ಯಾವುದೇ ಸಮಯ ಮಿತಿ ಇಲ್ಲದಿರುವುದರಿಂದ ಯಾವುದೇ ಅವಸರವಿಲ್ಲದೆ ನಿಧಾನವಾಗಿ ಅರ್ಜಿ ಹಾಕಲು ಅವಕಾಶ ನೀಡಲಾಗುವುದು. ಹಾಗಾಗಿ ಯಾರೂ ಹಣ ಕಳೆದುಕೊಳ್ಳಬಾರದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನಮಗೆ ಮಾರ್ಗದರ್ಶನ ಮಾಡೋಕೆ ಅಣ್ಣಾಮಲೈ ದೊಡ್ಡ ಹೀರೋನಾ?: ಎಂ ಪಿ ರೇಣುಕಾಚಾರ್ಯ

ಕಳೆದ ನಾಲ್ಕು ತಿಂಗಳಿನಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಾಲು ಪೌಡರ್ ಪೂರೈಕೆಯಾಗುತ್ತಿಲ್ಲ. ದರ ಹೆಚ್ಚಳವಾಗಿದ್ದರಿಂದ ಹಾಲು ಪೂರೈಸಲು ಸಾಧ್ಯವಿಲ್ಲ ಎಂದು ಕೆಎಂಎಫ್ ನವರು ನಿಲ್ಲಿಸಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಹೆಬ್ಬಾಳ್ಕರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾವು ಶಾಸಕರಾಗಿದ್ದ ಅವಧಿಯಲ್ಲಿ ತಮ್ಮ ಆಪ್ತ ಸಹಾಯಕರಾಗಿದ್ದ ಬೆಳಗಾವಿಯ ಗ್ರೇಡ್ 2 ತಹಶೀಲ್ದಾರ್‌ ಅಶೋಕ ಮಣ್ಣಿಕೇರಿ ಅಕಾಲಿಕ ನಿಧನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಂತಾಪ ಸೂಚಿಸಿದರು. ಅಶೋಕ ಮಣ್ಣಿಕೇರಿ ಮನೆಗೆ ತೆರಳಿ ಮೃತ ದೇಹದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...