ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ನೀಡಿರುವುದು ರಾಜ್ಯ, ಕೇಂದ್ರವಲ್ಲ: ಪ್ರಲ್ಹಾದ್ ಜೋಶಿ

Date:

ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್ ಬಂದಿರುವ ವಿಚಾರ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, “ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಜಿಎಸ್‌ಟಿ ನೋಟಿಸ್‌ ಬಂದಿದೆಯೇ ಹೊರತು ಕೇಂದ್ರ ಸರ್ಕಾರ ನೀಡಿಲ್ಲ” ಎಂದು ಹೇಳಿದ್ದಾರೆ.

- Advertisement -

ತೆರಿಗೆ ಭರಿಸಲು ಸೂಚಿಸಿ ನೋಟಿಸ್‌ಗಳನ್ನು ನೀಡುವುದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೋಶಿ, “ಡಿಸಿಎಂ ನೀಡಿರುವ ಹೇಳಿಕೆ ಹಾಸ್ಯಾಸ್ಪದ. ಕರ್ನಾಟಕದ ವಾಣಿಜ್ಯ ತೆರಿಗೆ ಅಧಿಕಾರಿಗಳು ಜಿಎಸ್​ಟಿ ಬಾಕಿ ಕಟ್ಟುವಂತೆ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ದಾರೆ. ಆದರೆ ಜನರ ದಾರಿ ತಪ್ಪಿಸಲು ಇದರ ಹಿಂದೆ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದು ಡಿಸಿಎಂ ಹೇಳುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಇದನ್ನು ಓದಿದ್ದೀರಾ? ಯುಪಿಐ ತೊರೆದು ನಗದು ವ್ಯವಹಾರ ಆರಂಭಿಸಿದ ವರ್ತಕರಿಗೆ ಎಚ್ಚರಿಕೆ ನೀಡಿದ ವಾಣಿಜ್ಯ ತೆರಿಗೆ ಇಲಾಖೆ

“ಜಿಎಸ್‌ಟಿಯಲ್ಲಿ ಎರಡು ಪ್ರಕಾರಗಳಿವೆ. ಕೇಂದ್ರ ಸರ್ಕಾರದಡಿ ಸಿಜಿಎಸ್‌ಟಿ ಮತ್ತು ರಾಜ್ಯ ಸರ್ಕಾರದಡಿ ಎಸ್‌ಜಿಎಸ್‌ಟಿ ಬರುತ್ತದೆ. ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿದೆ. ಹಾಗಾಗಿ ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ” ಎಂದು ಜೋಶಿ ಹೇಳಿದರು.

“ಈ ನೋಟಿಸ್ ಅನ್ನು ಕೇಂದ್ರ ಸರ್ಕಾರವೇ ನೀಡಿದ್ದರೆ ದೇಶದ ಎಲ್ಲ ರಾಜ್ಯಗಳಲ್ಲಿ ಈ ಸಮಸ್ಯೆ ಇರುತ್ತಿತ್ತು. ಆದರೆ ಕರ್ನಾಟಕದಲ್ಲಿ ಮಾತ್ರ ಈ ಸಮಸ್ಯೆ ಇರುವುದು. ಸಿದ್ದರಾಮಯ್ಯ ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ” ಟೀಕಿಸಿದರು.

ಇನ್ನು ಯುಪಿಐ ವ್ಯವಸ್ಥೆಯನ್ನು ಹಾಳು ಮಾಡುವ ಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದೂ ಕೇಂದ್ರ ಸಚಿವರು ಆರೋಪಿಸಿದರು. “ಯುಪಿಐ ವಹಿವಾಟು ಆಧಾರದಲ್ಲಿ ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌ಗಳನ್ನು ನೀಡುವ ಮೂಲಕ ರಾಜ್ಯ ಸರ್ಕಾರ ಡಿಜಿಟಲ್ ಮತ್ತು ಯುಪಿಐ ವಹಿವಾಟುಗಳಿಗೆ ಹಾನಿ ಮಾಡುವ ಯತ್ನ ಮಾಡುತ್ತಿದೆ. ದೇಶದಲ್ಲಿ ಯುಪಿಐ ವಹಿವಾಟು ಹೊಸ ದಾಖಲೆಗಳನ್ನು ಬರೆಯುತ್ತಿದೆ. ಆದರೆ ಕರ್ನಾಟಕ ಸರ್ಕಾರ ಈ ಅತ್ಯುತ್ತಮ ವ್ಯವಸ್ಥೆಯನ್ನು ಹಾಳು ಮಾಡುವ ಯತ್ನ ನಡೆಸುತ್ತಿದೆ” ಎಂದು ದೂರಿದರು.

20 ಲಕ್ಷ ರೂಪಾಯಿಗಿಂತ ಅಧಿಕ ಸೇವಾ ಪೂರೈಕೆ ಮಾಡಿದವರಿಗೆ ಮತ್ತು ಸರಕು ವ್ಯಾಪಾರಿಗಳು 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ಮಾಡಿದ್ದರೆ ಅವರು ಜಿಎಸ್‌ಟಿ ನೋಂದಣಿ ಮಾಡಿಸಿಕೊಳ್ಳಬೇಕು. ಆದರೆ ರಾಜ್ಯದಲ್ಲಿ ಯುಪಿಐ ವಹಿವಾಟು ಆಧಾರದಲ್ಲಿ ತೆರಿಗೆರಹಿತ ಕೃಷಿ ಉತ್ಪನ್ನಗಳಾದ ತರಕಾರಿ, ಹಾಲು, ಸೊಪ್ಪು ವ್ಯಾಪಾರಿಗಳಿಗೂ ಜಿಎಸ್‌ಟಿ ನೋಟಿಸ್ ಬಂದಿದೆ. ಇದರಿಂದಾಗಿ ವ್ಯಾಪಾರಿಗಳು ಯುಪಿಐ ಬಿಟ್ಟು ನಗದು ವಹಿವಾಟಿಗೆ ಜಾರುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಲ್ ನಿನೋ’ ಎಫೆಕ್ಟ್ | ಹಿಮಾಲಯದಲ್ಲಿ ಭಾರೀ‌ ಹಿಮಪಾತ, ಪ್ರವಾಹ ಸಂಭವ: ವರದಿ

'ಎಲ್ ನಿನೋ' ಪರಿಣಾಮವಾಗಿ ಚಳಿಗಾಲದಲ್ಲಿ ಹಿಮಾಲಯದ ಹಿಂದು ಕುಶ್ ಪರ್ವತ ಶ್ರೇಣಿಯ...

ಗೋಧ್ರಾ ರೈಲು ದಹನ ಪ್ರಕರಣ: ಅಪರಾಧಿಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು!

2002ರ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ...

ಕಾಂಗ್ರೆಸ್‌ ಕಾರ್ಯಕರ್ತರಿಂದ ರವಿ ಹಂಜ್‌, ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರತಿಭಟನೆ; ಗಡಿಪಾರಿಗೆ ಒತ್ತಾಯ

12ನೇ ಶತಮಾನದ ಮಹಾನ್ ಸಮಾಜ ಸುಧಾರಕರಾದ ವಿಶ್ವಗುರು ಬಸವಣ್ಣನವರು ಹಾಗೂ ರಾಷ್ಟ್ರಪಿತ...

FSSAI ಕಾನೂನು ಕ್ರಮದ ಬೆನ್ನಲ್ಲೇ ‘ನಮ್ಮ ಕುಡಿಯುವ ನೀರು ಸಂಪೂರ್ಣ ಸುರಕ್ಷಿತ’ ಎಂದ ಬಿಸ್ಲೆರಿ

ಬಿಸ್ಲೆರಿ ಇಂಟರ್‌ನ್ಯಾಶನಲ್ ಪ್ರೈವೇಟ್ ಲಿಮಿಟೆಡ್‌ನ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು "ಅಸುರಕ್ಷಿತ"...